ತುಳು ಅಕಾಡೆಮಿ ವತಿಯಿಂದ ಮಾಜಿ ಸಚಿವ ಸಿ.ಟಿ. ರವಿಗೆ ಸನ್ಮಾನ - Karavali Times ತುಳು ಅಕಾಡೆಮಿ ವತಿಯಿಂದ ಮಾಜಿ ಸಚಿವ ಸಿ.ಟಿ. ರವಿಗೆ ಸನ್ಮಾನ - Karavali Times

728x90

21 November 2020

ತುಳು ಅಕಾಡೆಮಿ ವತಿಯಿಂದ ಮಾಜಿ ಸಚಿವ ಸಿ.ಟಿ. ರವಿಗೆ ಸನ್ಮಾನಮಂಗಳೂರು, ನ. 21, 2020 (ಕರಾವಳಿ ಟೈಮ್ಸ್) : ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ  ಸಚಿವರಾಗಿ ಕಾರ್ಯನಿರ್ವಹಿಸಿದ್ದ ಸಿ.ಟಿ. ರವಿ ಅವರು ಇದೀಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಮಾಜಿ ಸಚಿವರನ್ನು ಗೌರವಿಸಲಾಯಿತು. 

ಂಗಳೂರಿನ ಕಲಾ ಗ್ರಾಮದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್‍ಸಾರ್ ಅವರು ಸಚಿವರನ್ನು ಗೌರವಿಸಿದರು. ಈ ಸಂದರ್ಭ ಮಾತನಾಡಿದ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್‍ಸಾರ್, ಸಚಿವ ಸ್ಥಾನಕ್ಕೆ ನ್ಯಾಯ ಒದಗಿಸಿ, ಕೊರೊನಾ ಸಂಕಷ್ಟದ ಸಮಯದಲ್ಲಿ ರಾಜ್ಯದ ಎಲ್ಲಾ ಅಕಾಡೆಮಿಗಳನ್ನು ವಿಶ್ವಾಸಕ್ಕೆ ಪಡೆದುಕೊಂಡು ಸಚಿವರು ಕಾರ್ಯನಿರ್ವಹಿಸಿದ್ದು ಶ್ಲಾಘನೀಯ, ರಾಜ್ಯದ ಸಂಸ್ಕøತಿ ಸಂಸ್ಕಾರಗಳನ್ನು ಪ್ರತಿಬಿಂಬಿಸಲು ನಮ್ಮೆಲ್ಲರನ್ನು ಹುರಿದುಂಬಿಸಿ ಪ್ರೋತ್ಸಾಹಿಸಿ, ಅವರ ಸ್ಥಾನಕ್ಕೊಂದು ನ್ಯಾಯ ಒದಗಿಸಿದ ಅಪರೂಪದ ಸಚಿವರಾಗಿದ್ದಾರೆ. ರಾಜ್ಯದ ಸಾಂಸ್ಕøತಿಕ ಲೋಕಕ್ಕೆ ತಮ್ಮದೇ ಆದ ವಿಶೇಷ ಕೊಡುಗೆ ನೀಡಿರುವುದು ವಿಶೇಷ ಎಂದರು, 

ಮಾಜಿ ಸಚಿವರನ್ನು ತುಳುನಾಡಿನ ಪರಂಪರೆಯ ಮುಟ್ಟಾಳೆ, ರೇಷ್ಮೆ ಶಾಲು, ಸಹಿತ ತುಳುನಾಡನ್ನು ಪ್ರತಿಬಿಂಬಿಸುವ ವಿಶೇಷ ಕಲಾಕೃತಿ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭ ಅಕಾಡೆಮಿ ಸದಸ್ಯರಾದ ಚೇತಕ್ ಪೂಜಾರಿ ಮಂಗಳೂರು, ನರೇಂದ್ರ ಎಂ. ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ತುಳು ಅಕಾಡೆಮಿ ವತಿಯಿಂದ ಮಾಜಿ ಸಚಿವ ಸಿ.ಟಿ. ರವಿಗೆ ಸನ್ಮಾನ Rating: 5 Reviewed By: karavali Times
Scroll to Top