ವಿಭಿನ್ನ ಶೈಲಿಯ ಬರಹಗಾರ, ಖ್ಯಾತ ಪತ್ರಕರ್ತ ರವಿ ಬೆಳಗೆರೆ ಹೃದಯಾಘಾತದಿಂದ ನಿಧನ - Karavali Times ವಿಭಿನ್ನ ಶೈಲಿಯ ಬರಹಗಾರ, ಖ್ಯಾತ ಪತ್ರಕರ್ತ ರವಿ ಬೆಳಗೆರೆ ಹೃದಯಾಘಾತದಿಂದ ನಿಧನ - Karavali Times

728x90

12 November 2020

ವಿಭಿನ್ನ ಶೈಲಿಯ ಬರಹಗಾರ, ಖ್ಯಾತ ಪತ್ರಕರ್ತ ರವಿ ಬೆಳಗೆರೆ ಹೃದಯಾಘಾತದಿಂದ ನಿಧನ



ಬೆಂಗಳೂರು, ನ. 13, 2020 (ಕರಾವಳಿ ಟೈಮ್ಸ್) : ಖ್ಯಾತ ಬರಹಗಾರ, ಪತ್ರಕರ್ತ, ಹಾಯ್ ಬೆಂಗಳೂರು ಪತ್ರಿಕೆಯ ಪ್ರಧಾನ ಸಂಪಾದಕ ರವಿ ಬೆಳಗೆರೆ (62) ಗುರುವಾರ ಮಧ್ಯ ರಾತ್ರಿ ವೇಳೆಗೆ ಬೆಂಗಳೂರಿನ ಕನಕಪುರ ರಸ್ತೆಯ ಕರಿಷ್ಮಾ ಹಿಲ್ಸ್ ಮನೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ತನ್ನ ವಿಭಿನ್ನ ಶೈಲಿಯ ಬರಹಗಳಿಂದ ಅಪಾರ ಸಂಖ್ಯೆಯ ಅಭಿಮಾನಿ ವರ್ಗವನ್ನು ಸಂಪಾದಿಸಿದ್ದ ರವಿ ಬೆಳಗೆರೆ ಅವರ ಶುಕ್ರವಾರ ಬೆಳಿಗ್ಗೆ 9 ಗಂಟೆಯಿಂದ ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಪ್ರಾರ್ಥನಾ ಶಾಲೆಯ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.

1958 ರ ಮಾರ್ಚ್ 15 ರಂದು ಬಳ್ಳಾರಿಯಲ್ಲಿ ಜನಿಸಿದ್ದ ರವಿ ಬೆಳೆಗೆರೆ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು. ನಂತರ ಪತ್ರಿಕೋದ್ಯಮ ವೃತ್ತಿ ಪ್ರಾರಂಭಿಸಿದ್ದ ಅವರು, ಕನ್ನಡಪ್ರಭ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದರು, ಬಳಿಕ 1995 ರಲ್ಲಿ ಹಾಯ್ ಬೆಂಗಳೂರು ಸ್ವಂತ ಪತ್ರಿಕೆಯನ್ನು ಪ್ರಾರಂಭಿಸಿ ವಿಭಿನ್ನ ಬರಹಗಳ ಮೂಲಕ ಗಮನ ಸೆಳೆದಿದ್ದರು. 

ರವಿ ಬೆಳೆಗೆರೆ ಅವರ ಬಾಟಮ್ ಐಟಮ್, ಖಾಸ್ ಬಾತ್ ಅಂಕಣಗಳು ಅತ್ಯಂತ ಜನಪ್ರಿಯವಾಗಿತ್ತು. ಹಿಮಾಗ್ನಿ, ನೀನಾ ಪಾಕಿಸ್ತಾನ? ಡಿ ಕಂಪನಿ, ದಂಗೆಯ ದಿನಗಳು ಸೇರಿದಂತೆ ಅನೇಕ ಜನಪ್ರಿಯ ಕೃತಿಗಳನ್ನು  ಅವರು ರಚಿಸಿದ್ದರು.

ಪತ್ರಿಕೋದ್ಯಮದಲ್ಲಿ ಸಾಧನೆ ಮಾಡಿದ್ದ ರವಿ ಬೆಳೆಗೆರೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಜೀವಮಾನದ ಸಾಧನೆ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಸಂದಿವೆ. ರವಿ ಬೆಳೆಗೆರೆ ಅವರು ಸ್ಥಾಪಿಸಿರುವ ಪ್ರಾರ್ಥನಾ ಶಾಲೆಯ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 









  • Blogger Comments
  • Facebook Comments

0 comments:

Post a Comment

Item Reviewed: ವಿಭಿನ್ನ ಶೈಲಿಯ ಬರಹಗಾರ, ಖ್ಯಾತ ಪತ್ರಕರ್ತ ರವಿ ಬೆಳಗೆರೆ ಹೃದಯಾಘಾತದಿಂದ ನಿಧನ Rating: 5 Reviewed By: karavali Times
Scroll to Top