ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕಳೆದ ಬಾರಿಯ ಬಸ್ ಪಾಸ್ ಅವಧಿ ವಿಸ್ತರಿಸಿದ ಸಾರಿಗೆ ಇಲಾಖೆ - Karavali Times ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕಳೆದ ಬಾರಿಯ ಬಸ್ ಪಾಸ್ ಅವಧಿ ವಿಸ್ತರಿಸಿದ ಸಾರಿಗೆ ಇಲಾಖೆ - Karavali Times

728x90

19 November 2020

ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕಳೆದ ಬಾರಿಯ ಬಸ್ ಪಾಸ್ ಅವಧಿ ವಿಸ್ತರಿಸಿದ ಸಾರಿಗೆ ಇಲಾಖೆ

 


ಬೆಂಗಳೂರು, ನ. 19, 2020 (ಕರಾವಳಿ ಟೈಮ್ಸ್) : ಇತ್ತೀಚೆಗಷ್ಟೆ ಆರಂಭಗೊಂಡಿರುವ ಕಾಲೇಜುಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ರಾಜ್ಯ ಸಾರಿಗೆ ಇಲಾಖೆ ವಿದ್ಯಾರ್ಥಿ ಬಸ್ ಪಾಸ್ ಅವಧಿ ವಿಸ್ತರಿಸಿ ಕ್ರಮ ಕೈಗೊಂಡಿದೆ. 2019-20ನೇ ಸಾಲಿನಲ್ಲಿ ವಿತರಿಸಲಾಗಿರುವ ಬಸ್ ಪಾಸ್ ಬಳಸಿ ಡಿಸೆಂಬರ್ 10ರ ವರೆಗೆ ಸಂಚರಿಸಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. 

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಾರಿಗೆ ಇಲಾಖೆ, ನವೆಂಬರ್ 17 ರಿಂದ ರಾಜ್ಯದ ವಿಶ್ವವಿದ್ಯಾಲಯಗಳು, ಖಾಸಗಿ ವಿಶ್ವವಿದ್ಯಾಲಯಗಳು, ಪದವಿ, ವೈದ್ಯಕೀಯ, ತಾಂತ್ರಿಕ, ಡಿಪೆÇ್ಲೀಮಾ, ಅನುದಾನಿತ, ಅನುದಾನ ರಹಿತ ಕಾಲೇಜುಗಳಲ್ಲಿ 2020-21ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭಿಸಲು ಸರಕಾರ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕಳೆದ ವರ್ಷ ವಿತರಿಸಿದ ವಿದ್ಯಾರ್ಥಿ ಬಸ್ ಪಾಸ್ ಬಳಸಿ ಸಂಚರಿಸಲು ಇಲಾಖೆ ಅವಕಾಶ ನೀಡಿದೆ. 

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 2019-20ನೇ ಸಾಲಿನಲ್ಲಿ ವಿತರಿಸಿರುವ ವಿದ್ಯಾರ್ಥಿ ಬಸ್ ಪಾಸ್‍ಗಳನ್ನು ಬಳಸಿ ವಿದ್ಯಾರ್ಥಿಗಳು ಈ ವರ್ಷ ಕಾಲೇಜಿಗೆ ದಾಖಲಾಗಿರುವ ಕುರಿತು ಪ್ರಸಕ್ತ ಸಾಲಿನ ಶುಲ್ಕ ಪಾವತಿ ರಶೀದಿ ಹಾಗೂ ಪಾಸ್ ತೋರಿಸಿ ಕೆಎಸ್‍ಆರ್‍ಟಿಸಿ ಸಾಮಾನ್ಯ ಹಾಗೂ ವೇಗದೂತ ಬಸ್‍ಗಳಲ್ಲಿ ಸಂಚರಿಸಬಹುದಾಗಿದೆ ಎಂದು ಆದೇಶಿಸಿದೆ. 









  • Blogger Comments
  • Facebook Comments

0 comments:

Post a Comment

Item Reviewed: ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕಳೆದ ಬಾರಿಯ ಬಸ್ ಪಾಸ್ ಅವಧಿ ವಿಸ್ತರಿಸಿದ ಸಾರಿಗೆ ಇಲಾಖೆ Rating: 5 Reviewed By: karavali Times
Scroll to Top