ಆರ್.ಆರ್. ನಗರ ಹಾಗೂ ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಜಯಭೇರಿ - Karavali Times ಆರ್.ಆರ್. ನಗರ ಹಾಗೂ ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಜಯಭೇರಿ - Karavali Times

728x90

10 November 2020

ಆರ್.ಆರ್. ನಗರ ಹಾಗೂ ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಜಯಭೇರಿ




ಬೆಂಗಳೂರು, ನ. 10, 2020 (ಕರಾವಳಿ ಟೈಮ್ಸ್) : ಆರ್ ಆರ್ ನಗರ ಹಾಗೂ ಶಿರಾ ಎರಡೂ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಮುನಿರತ್ನ ಹಾಗೂ ರಾಜೇಶ್ ಗೌಡ ಅವರು ಭರ್ಜರಿ ಜಯಭೇರಿ ಭಾರಿಸಿದ್ದಾರೆ. 

ಈ ಹಿಂದೆ ಕಾಂಗ್ರೆಸ್ ನಿಂದ ಎರಡು ಬಾರಿ ಗೆಲುವು ಸಾಧಿಸಿದ್ದ ಮುನಿರತ್ನ ಅವರು ಈ ಬಾರಿ ಬಿಜೆಪಿ ಸೇರಿ ಜಯಗಳಿಸುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಮುನಿರತ್ನ ಅವರು ಅಂತಿಮವಾಗಿ 57,672 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಬಿಜಿಪಿಯ ಮುನಿರತ್ನ ಅವರು ಒಟ್ಟು 1,25,665 ಮತಗಳನ್ನು ಪಡೆದರೆ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು 67,993 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.

ಬಿಜೆಪಿ ಮತ್ತು ಕಾಂಗ್ರೆಸ್‍ನ ಅಬ್ಬರದ ಪ್ರಚಾರ, ಆರೋಪ-ಪ್ರತ್ಯಾರೋಪ, ಜಾತಿ, ಕಣ್ಣೀರ ರಾಜಕಾರಣದ ಕಾರಣದಿಂದ ರಾಜರಾಜೇಶ್ವರಿ ನಗರದ ಉಪ ಚುನಾವಣೆ ಭಾರೀ ಕುತೂಹಲ ಕೆರಳಿಸಿತ್ತು. ಅಲ್ಲದೆ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಮಧ್ಯೆ ಜಿದ್ದಾಜಿದ್ದಿನ ಪೈಪೆÇೀಟಿ ನಡೆಯಬಹುದು ಎಂದೇ ನಿರೀಕ್ಷಿಸಲಾಗಿತ್ತು. ಆದರೆ, ಮತದಾರ ಮಾತ್ರ ಬಿಜೆಪಿಗೆ ಜೈ ಎಂದಿದ್ದಾನೆ. 

ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಇದೆ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ತುಮಕೂರಿನ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಬಿಜೆಪಿಯ ರಾಜೇಶ್ ಗೌಡ ಅವರು 72,739 ಮತಗಳನ್ನ ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ 60,321 ಮತ್ತು ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ 34,707 ಮತಗಳನ್ನು  ಪಡೆದಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 12,418 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.   

ಈ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಆದರೆ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಮೊದಲಿನಿಂದಲೂ ಸತತ ಮುನ್ನಡೆ ಸಾಧಿಸುವ ಮೂಲಕ ಗೆಲುವು ಪಡೆದುಕೊಂಡು ಶಿರಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲ ಅರಳಿದೆ.









  • Blogger Comments
  • Facebook Comments

0 comments:

Post a Comment

Item Reviewed: ಆರ್.ಆರ್. ನಗರ ಹಾಗೂ ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಜಯಭೇರಿ Rating: 5 Reviewed By: karavali Times
Scroll to Top