ಬಂಟ್ವಾಳ : ಅಂಗನವಾಡಿ ಕಾರ್ಯಕರ್ತೆಯರಿಗೆ ಇಲಾಖಾ ಮೊಬೈಲ್ ವಿತರಣೆ - Karavali Times ಬಂಟ್ವಾಳ : ಅಂಗನವಾಡಿ ಕಾರ್ಯಕರ್ತೆಯರಿಗೆ ಇಲಾಖಾ ಮೊಬೈಲ್ ವಿತರಣೆ - Karavali Times

728x90

20 November 2020

ಬಂಟ್ವಾಳ : ಅಂಗನವಾಡಿ ಕಾರ್ಯಕರ್ತೆಯರಿಗೆ ಇಲಾಖಾ ಮೊಬೈಲ್ ವಿತರಣೆ

ಬಂಟ್ವಾಳ, ನ. 20, 2020 (ಕರಾವಳಿ ಟೈಮ್ಸ್) : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ ಮತ್ತು ವಿಟ್ಲ ಫೋಷಣ್ ಅಭಿಯಾನ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಮೊಬೈಲ್ ಫೋನ್ ವಿತರಣಾ ಕಾರ್ಯಕ್ರಮ ಬಿ ಸಿ ರೋಡಿನ ಸ್ತ್ರೀ ಶಕ್ತಿಭವನದಲ್ಲಿ ಶುಕ್ರವಾರ ನಡೆಯಿತು.

ಮೊಬೈಲ್ ಫೋನ್ ವಿತರಿಸಿ ಮಾತನಾಡಿದ ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್, ತಂತ್ರಜ್ಞಾನದ ಯುಗದಲ್ಲಿ ಸರಕಾರಿ ಇಲಾಖೆಯ ಯೋಜನೆಗಳನ್ನು ಶೀಘ್ರವಾಗಿ ಜನರಿಗೆ ತಲುಪಲು ಸಹಾಯವಾಗುವ ನಿಟ್ಟಿನಲ್ಲಿ ತಂತ್ರಜ್ಞಾನದ ಬಳಕೆ ಅನಿವಾರ್ಯವಾಗಿದೆ. ಅಭಿವೃದ್ಧಿಗೆ ಸಹಾಯವಾಗುವಂತೆ ಮತ್ತು ಇಲಾಖೆಯ ಕಾರ್ಯಚಟುವಟಿಕೆಗಳನ್ನು ಸಮರ್ಪಕವಾಗಿ ನಿರ್ವಹಿಸಲು, ನಿತ್ಯ ದಾಖಲೆಗಳನ್ನು ಅಪ್ಡೇಟ್ ಮಾಡುವ ಉದ್ದೇಶದಿಂದ ಮೊಬೈಲ್ ಫೋನ್ ಇಲಾಖೆ ನಿಮಗೆ ನೀಡಿದೆ. ಸರಕಾರ ಇಲಾಖೆಗಳಿಗೆ ನೀಡುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಯಶಸ್ವಿಯಾಗಲು ಅಧಿಕಾರಿಗಳ ಶ್ರಮ ಅತ್ಯಂತ ಹೆಚ್ಚಾಗಿದೆ ಎಂದರು. 

ಅಧ್ಯಕ್ಷತೆ ವಹಿಸಿದ್ದ ತಾ ಪಂ ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಮಾತನಾಡಿ, ತಂತ್ರಜ್ಞಾನದ ಮೂಲಕ ಕಾರ್ಯ ನಿರ್ವಹಿಸಿದಾಗ ಜನರಿಗೆ ಉತ್ತಮ ಹಾಗೂ ಶೀಘ್ರ ಸೇವೆ ನೀಡಲು ಸಾಧ್ಯವಿದೆ ಎಂದರು. 

ಬಂಟ್ವಾಳ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ರಾಜಣ್ಣ ಮಾತನಾಡಿ, ಅಂಗನವಾಡಿ ಕಾರ್ಯಕರ್ತರಿಗೆ ಗ್ರಾಮದ ಜನರ ಸಂಪೂರ್ಣ ಮಾಹಿತಿ ಇರುತ್ತದೆ. ಹಾಗಾಗಿ ಸರಕಾರದ ಯೋಜನೆಗಳು ಸರಿಯಾಗಿ ತಲುಪುವಲ್ಲಿ ಇಲಾಖೆಯ ಜವಾಬ್ದಾರಿ ಮಹತ್ತರವಾಗಿದೆ, ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿದ ಹೆಗ್ಗಳಿಕೆ ಕೂಡ ಇವರದು ಎಂದರು. 

ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ. ಶೆಟ್ಟಿ ಉಪಸ್ಥಿತರಿದ್ದರು. ವಿಟ್ಲ ಸಿ.ಡಿ.ಪಿ.ಒ. ಸುಧಾಜೋಶಿ ಸ್ವಾಗತಿಸಿ, ಬಂಟ್ವಾಳ ಸಿ.ಡಿ.ಪಿ.ಒ ಗಾಯತ್ರಿ ಕಂಬಳಿ ವಂದಿಸಿದರು. ಹಿರಿಯ ಮೇಲ್ವಿಚಾರಿಕಿ ಬಿ. ಭಾರತಿ ಕಾರ್ಯಕ್ರಮ ನಿರೂಪಿಸಿದರು.

ಬಂಟ್ವಾಳ ಮತ್ತು ವಿಟ್ಲ ಸೇರಿದಂತೆ ಒಟ್ಟು  588  ಮಂದಿಗೆ ಮೊಬೈಲ್ ಫೋನ್ ವಿತರಿಸಲಾಯಿತು. ಮೊಬೈಲ್ ಜೊತೆಗೆ ಪವರ್ ಬ್ಯಾಂಕ್, ಮೆಮೊರಿ ಕಾರ್ಡ್, ಸ್ಕ್ರೀನ್ ಗಾರ್ಡ್, ಬ್ಯಾಕ್ ಕವರ್, ಇಯರ್ ಫೋನ್, ಪೌಚ್ ವಿತರಿಸಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ಅಂಗನವಾಡಿ ಕಾರ್ಯಕರ್ತೆಯರಿಗೆ ಇಲಾಖಾ ಮೊಬೈಲ್ ವಿತರಣೆ Rating: 5 Reviewed By: karavali Times
Scroll to Top