ಹಿರಿಯ ಕಾಂಗ್ರೆಸ್ಸಿಗ ಅಹ್ಮದ್ ಪಟೇಲ್ ಕೊರೋನಾಗೆ ಬಲಿ - Karavali Times ಹಿರಿಯ ಕಾಂಗ್ರೆಸ್ಸಿಗ ಅಹ್ಮದ್ ಪಟೇಲ್ ಕೊರೋನಾಗೆ ಬಲಿ - Karavali Times

728x90

24 November 2020

ಹಿರಿಯ ಕಾಂಗ್ರೆಸ್ಸಿಗ ಅಹ್ಮದ್ ಪಟೇಲ್ ಕೊರೋನಾಗೆ ಬಲಿ



ನವದೆಹಲಿ, ನ. 25, 2020 (ಕರಾವಳಿ ಟೈಮ್ಸ್) : ಹಿರಿಯ ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯ ಅಹ್ಮದ್ ಪಟೇಲ್ (71) ಬುಧವಾರ ನಿಧನರಾಗಿದ್ದಾರೆ. ಕೆಲ ವಾರಗಳ ಹಿಂದಷ್ಟೇ ಅಹ್ಮದ್ ಪಟೇಲ್ ಅವರಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿತ್ತು. ಫರೀದಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ಬಳಿಕ ಗುರುಗ್ರಾಮದ ಮೆಡಂತಾ ಅಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೂ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಬೆಳವಣಿಗೆ ಕಂಡು ಬಂದಿರಲಿಲ್ಲ. ಚಿಕಿತ್ಸೆಗೆ ಸ್ಪಂದಿಸದ ಅವರು ಬುಧವಾರ ಮೃತಪಟ್ಟಿದ್ದಾರೆ.

ತಮಗೆ ಕೊರೋನಾ ಸೋಂಕು ತಗುಲಿರುವ ಕುರಿತು ಅಕ್ಟೋಬರ್ 1 ರಂದು ಸ್ವತಃ ಅಹ್ಮದ್ ಪಟೇಲ್ ಅವರೇ ಹೇಳಿಕೊಂಡಿದ್ದರು. ಅಲ್ಲದೆ ಹೋಂ ಐಸೋಲೇಶನ್ ಪಡೆದುಕೊಂಡಿರುವುದಾಗಿಯೂ ಅವರು ಮಾಹಿತಿ ಹಂಚಿಕೊಂಡಿದ್ದರು. ಬಳಿಕ ಆರೋಗ್ಯದಲ್ಲಿ ಚೇತರಿಕೆಗಳು ಕಂಡು ಬರದ ಹಿನ್ನೆಲೆಯಲ್ಲಿ ಫರೀದಾಬಾದ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೂ ಚೇತರಿಕೆ ಕಂಡು ಬರದ ಹಿನ್ನೆಲಯೆಲ್ಲಿ ಮೆಡಂತಾ ಆಸ್ಪತ್ರೆಗೆ ದಾಖಲಾಗಿದ್ದರು. 

ಮೃತ ಪಟೇಲ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕಾಂಗ್ರೆಸ್ ಪಕ್ಷದ ಖಜಾಂಚಿಯಾಗಿದ್ದ ಅಹ್ಮದ್ ಪಟೇಲ್ ಅವರು, ಕಾಂಗ್ರೆಸ್’ನ ಹಿರಿಯ ನಾಯಕರು ಹಾಗೂ ಸೋನಿಯಾ ಗಾಂಧಿ ಕುಟುಂಬದ ಆಪ್ತರಾಗಿದ್ದರು. 1949ರ ಆ. 21 ರಂದು ಗುಜರಾತ್‍ನಲ್ಲಿ ಜನಿಸಿದ್ದ ಅಹ್ಮದ್ ಪಟೇಲ್ ಲೋಕಸಭೆಗೆ 3 ಬಾರಿ ಆಯ್ಕೆಯಾಗಿದ್ದರು. 5 ಬಾರಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಜೊತೆಗೆ ಸೋನಿಯಾಗಾಂಧಿ ರಾಜಕೀಯ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು. 









  • Blogger Comments
  • Facebook Comments

0 comments:

Post a Comment

Item Reviewed: ಹಿರಿಯ ಕಾಂಗ್ರೆಸ್ಸಿಗ ಅಹ್ಮದ್ ಪಟೇಲ್ ಕೊರೋನಾಗೆ ಬಲಿ Rating: 5 Reviewed By: karavali Times
Scroll to Top