ಕೊರೋನಾ ವೈರಸ್ ತಡೆಯಲು ಕ್ರಿಸ್ಮಸ್ ಹಾಗೂ ಹೊಸ ವರ್ಷಕ್ಕೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಸರಕಾರ - Karavali Times ಕೊರೋನಾ ವೈರಸ್ ತಡೆಯಲು ಕ್ರಿಸ್ಮಸ್ ಹಾಗೂ ಹೊಸ ವರ್ಷಕ್ಕೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಸರಕಾರ - Karavali Times

728x90

17 December 2020

ಕೊರೋನಾ ವೈರಸ್ ತಡೆಯಲು ಕ್ರಿಸ್ಮಸ್ ಹಾಗೂ ಹೊಸ ವರ್ಷಕ್ಕೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಸರಕಾರ

 


ಬೆಂಗಳೂರು, ಡಿ. 18, 2020 (ಕರಾವಳಿ ಟೈಮ್ಸ್) : ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ  ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದ ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿದೆ.  ಎಂದಿನಂತೆ ಕ್ಲಬ್-ಪಬ್‌ಗಳನ್ನು ತೆರೆಯಲು ಅವಕಾಶ ನೀಡಲಾಗಿದ್ದು, ಈ ಸಂಬಂಧ ಸರಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. 

ಚರ್ಚ್‌ಗಳಲ್ಲಿ ಏಕಕಾಲದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನ ಸೇರದಂತೆ ಸಾಮಾಜಿಕ ಅಂತ ಕಾಯ್ದುಕೊಳ್ಳಲು ಮೇಲ್ವಿಚಾರಕರು, ಆಯೋಜಕರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಹಬ್ಬಾಚರಣೆಯ ಸಂದರ್ಭದಲ್ಲಿ  ಸಾಂಕ್ರಾಮಿಕ ಸೋಂಕು ತಡೆಗಟ್ಟಲು ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಲಾಗಿದೆ.

ಹೊಸ ವರ್ಷದ ಸಂದರ್ಭದಲ್ಲಿ ಕ್ಲಬ್, ಪಬ್, ರೆಸ್ಟೋರೆಂಟ್ ಗಳು ಸಾಮಾನ್ಯ ದಿನಗಳಂತೆ ವ್ಯವಹಾರ ನಡೆಸಲು ಅವಕಾಶವಿದೆ. ಮದ್ಯ ಮಾರಾಟದ ಮೇಲೆ ನಿರ್ಬಂಧವಿಲ್ಲ. ಆದರೆ, ವಿಶೇಷ ಪಾರ್ಟಿ ಹಾಗೂ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಜನರು ಒಂದೆಡೆ ಸೇರುವ ಹಾಗಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಆಚರಣೆ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅವಕಾಶ ನೀಡಲಾಗಿದ್ದು, ಕೋವಿಡ್ ಹರಡುವಿಕೆ ತಡೆಯುವ ಸಂಬಂಧ ಕ್ರಿಸ್ ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸುವಂತೆ ಸರಕಾರ ಹೊಸ ಮಾರ್ಗಸೂಚಿಯಲ್ಲಿ ಆದೇಶಿಸಿದೆ.







  • Blogger Comments
  • Facebook Comments

0 comments:

Post a Comment

Item Reviewed: ಕೊರೋನಾ ವೈರಸ್ ತಡೆಯಲು ಕ್ರಿಸ್ಮಸ್ ಹಾಗೂ ಹೊಸ ವರ್ಷಕ್ಕೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಸರಕಾರ Rating: 5 Reviewed By: karavali Times
Scroll to Top