ಬಂಟ್ವಾಳದಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ - Karavali Times ಬಂಟ್ವಾಳದಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ - Karavali Times

728x90

2 December 2020

ಬಂಟ್ವಾಳದಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ

 



ಬಂಟ್ವಾಳ, ಡಿ. 03, 2020 (ಕರಾವಳಿ ಟೈಮ್ಸ್) : ಕನಕದಾಸರು ಕರ್ನಾಟಕದ ಸಂಗೀತದ ಕೀರ್ತನ ಸಾಹಿತ್ಯಕ್ಕೆ ಅಮೂಲ್ಯ ಕಾಣಿಕೆ ನೀಡಿದ್ದಾರೆ. ಭಕ್ತಿಯ ಮೂಲಕ ಭಗವಂತನನ್ನು ಒಲಿಸಿಕೊಳ್ಳಬಹುದೆಂಬುದಕ್ಕೆ ಸಾಕ್ಷಿಯಾಗಿದ್ದಾರೆ. ದಾಸ ಪರಂಪರೆಯ ಶ್ರೇಷ್ಠ ದಾಸರಲ್ಲಿ ಕನಕದಾಸರು ಒಬ್ಬರು ಎಂದು ಬಂಟ್ವಾಳ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ಎ. ಅಣ್ಣು ನಾಯ್ಕ್ ಕೊಂಡಾಡಿದರು. 

ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಗುರುವಾರ ನಡೆದ ಭಕ್ತ ಕನಕದಾಸರ ಜಯಂತಿ ಆಚರಣೆ ಉದ್ಘಾಟಿಸಿ ಅವರು ಮಾತನಾಡಿದರು. 

ಈ ಸಂದರ್ಭ ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಭಾಗವಹಿಸಿದ್ದರು. ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ ವಂದಿಸಿದರು.









  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳದಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ Rating: 5 Reviewed By: karavali Times
Scroll to Top