ಸಂಕಷ್ಟದಲ್ಲಿರುವ ಕಲಾಕಾರರಿಗೆ ಪ್ರೋತ್ಸಾಹ ನೀಡಬೇಕಾಗಿದೆ : ಸಂಗೀತ ನಿರ್ದೇಶಕ ವಿ ಮನೋಹರ್ - Karavali Times ಸಂಕಷ್ಟದಲ್ಲಿರುವ ಕಲಾಕಾರರಿಗೆ ಪ್ರೋತ್ಸಾಹ ನೀಡಬೇಕಾಗಿದೆ : ಸಂಗೀತ ನಿರ್ದೇಶಕ ವಿ ಮನೋಹರ್ - Karavali Times

728x90

3 January 2021

ಸಂಕಷ್ಟದಲ್ಲಿರುವ ಕಲಾಕಾರರಿಗೆ ಪ್ರೋತ್ಸಾಹ ನೀಡಬೇಕಾಗಿದೆ : ಸಂಗೀತ ನಿರ್ದೇಶಕ ವಿ ಮನೋಹರ್ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಬೆಂಗಳೂರು ಆರ್ಟ್ಸ್ ಆಂಡ್ ಕ್ರಾಫ್ಟ್ ಮೇಳಕ್ಕೆ ಚಾಲನೆ


ಬೆಂಗಳೂರು, ಜ, 03, 2021 (ಕರಾವಳಿ ಟೈಮ್ಸ್) : ಕರೋನ ಸಂಕಷ್ಟ ಕಾಲದಲ್ಲಿ ತೊಂದರೆಗೀಡಾಗಿರುವ ದೇಶದ ಕರಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದು ಸಂಗೀತ ನಿರ್ದೇಶಕ ವಿ ಮನೋಹರ್ ಹೇಳಿದರು. 

ನಗರದ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿರುವ ಬೆಂಗಳೂರು ಆರ್ಟ್ಸ್ ಆಂಡ್ ಕ್ರಾಫ್ಟ್ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕರೋನಾ ಸಂಕಷ್ಟ ಕಾಲದಲ್ಲಿ ಕಲಾವಿದರುಗಳು ತೀವ್ರ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಲಾಕ್‍ಡೌನ್ ನಂತರದಲ್ಲೂ ಪರಿಸ್ಥಿತಿ ಬದಲಾಗಿಲ್ಲ. ಇಂತಹ ಕರಕುಶಲಕಾರರಿಗೆ ಹಾಗೂ ಅವರ ಕಲೆಗೆ ಸೂಕ್ತ ಮಾರುಕಟ್ಟೆ ಒದಗಿಸುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನಂತಹ ಸಂಸ್ಥೆಗಳು ನಿರ್ವಹಿಸುತ್ತಿರುವ ಕಾರ್ಯ ಶ್ಲಾಘನೀಯ. ಮುಂದಿನ ದಿನಗಳಲ್ಲಿ ಈ ಪರಿಸ್ಥಿತಿ ಸಕಾರಾತ್ಮಕವಾಗಿ ಬದಲಾಗುವ ಮೂಲಕ ಕಲಾವಿದರುಗಳಿಗೆ ಒಳ್ಳೆಯ ದಿನಗಳು ಮರಳಲಿವೆ ಎಂದು ಆಶಿಸಿದರು. 

ಚಿತ್ರಕಲಾ ಪರಿಷತ್ ಪ್ರಧಾನ ಕಾರ್ಯದರ್ಶಿ ಅಪ್ಪಾಜಯ್ಯ, ಚಿತ್ರ ನಟ ನಿರಂಜನ್, ರೂಪದರ್ಶಿ ಹಾಗೂ ನಟಿ ಐಶಾನ ಸಣ್ಣಪ್ಪನವರ್ ಭಾಗವಹಿಸಿದ್ದರು. 

ಜನವರಿ 1 ರಿಂದ 10 ರ ವರೆಗೆ ನಡೆಯಲಿರುವ ಈ ಕಲಾವಸ್ತು ಪ್ರದರ್ಶನ ಹಾಗೂ ಮೇಳದಲ್ಲಿ ನೂರಕ್ಕೂ ಹೆಚ್ಚು ಸ್ಟಾಲ್‍ಗಳಲ್ಲಿ ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್ ಲೂಮ್ ಸ್ಯಾರಿಯನ್ನು ಸೆಲೆಕ್ಟ್ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ. 

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯಲಿವೆ.
  • Blogger Comments
  • Facebook Comments

0 comments:

Post a Comment

Item Reviewed: ಸಂಕಷ್ಟದಲ್ಲಿರುವ ಕಲಾಕಾರರಿಗೆ ಪ್ರೋತ್ಸಾಹ ನೀಡಬೇಕಾಗಿದೆ : ಸಂಗೀತ ನಿರ್ದೇಶಕ ವಿ ಮನೋಹರ್ Rating: 5 Reviewed By: karavali Times
Scroll to Top