ಡಿನೋಟಿಫೈ ಪ್ರಕರಣ ಎಫ್.ಐ.ಆರ್. ರದ್ದು‌ ಕೋರಿ ಸಿಎಂ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈ : ತನಿಖೆ ಮುಂದುವರಿಸಲು ಲೋಕಾಯುಕ್ತಕ್ಕೆ ಸೂಚನೆ - Karavali Times ಡಿನೋಟಿಫೈ ಪ್ರಕರಣ ಎಫ್.ಐ.ಆರ್. ರದ್ದು‌ ಕೋರಿ ಸಿಎಂ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈ : ತನಿಖೆ ಮುಂದುವರಿಸಲು ಲೋಕಾಯುಕ್ತಕ್ಕೆ ಸೂಚನೆ - Karavali Times

728x90

5 January 2021

ಡಿನೋಟಿಫೈ ಪ್ರಕರಣ ಎಫ್.ಐ.ಆರ್. ರದ್ದು‌ ಕೋರಿ ಸಿಎಂ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈ : ತನಿಖೆ ಮುಂದುವರಿಸಲು ಲೋಕಾಯುಕ್ತಕ್ಕೆ ಸೂಚನೆ

 


ಬೆಂಗಳೂರು, ಜ. 05, 2021 (ಕರಾವಳಿ ಟೈಮ್ಸ್) : ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಎಫ್‍ಐಆರ್ ರದ್ದುಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಜಯಕುಮಾರ್‌ ಹಿರೇಮಠ್‌ ಎಂಬುವರು ಲೋಕಾಯುಕ್ತಕ್ಕೆ ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ದಾಖಲಾಗಿರುವ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಮೈಕೆಲ್‌ ಡಿ. ಕುನ್ಹಾ ಅವರಿದ್ದ ನ್ಯಾಯಪೀಠ ಮಂಗಳವಾರ ಪ್ರಕಟಿಸಿದೆ. 

 ದೂರಿಗೆ ಸಂಬಂಧಪಟ್ಟಂತೆ ತನಿಖೆ ಮುಂದುವರಿಸುವಂತೆಯೂ ಹೈಕೋರ್ಟ್ ಲೋಕಾಯುಕ್ತಕ್ಕೆ ಸೂಚಿಸಿದೆ. ಕೋರ್ಟ್ ತೀರ್ಪಿನಿಂದ ಸಿಎಂ ಯಡಿಯೂರಪ್ಪ ಅವರಿಗೆ ತೀವ್ರ ಹಿನ್ನೆಡೆಯಾದಂತಾಗಿದೆ.

ಯಡಿಯೂರಪ್ಪ ಅವರು 2015ರಲ್ಲಿ ಆರ್.ಟಿ. ನಗರದ ಗಂಗೇನಹಳ್ಳಿ ವ್ಯಾಪ್ತಿಯ ಮಠದ ಹಳ್ಳಿ ಬಡಾವಣೆಯಲ್ಲಿ 1.1 ಎಕರೆ ಭೂಮಿಯನ್ನು ತಮ್ಮ ಅಧಿಕಾರ ಬಳಸಿ ಕಾನೂನುಬಾಹಿರವಾಗಿ ಡಿನೋಟಿಫೈ ಮಾಡಲು ಆದೇಶ ನೀಡಿದ್ದಾರೆ ಎಂದು ಆರೋಪಿಸಿ ಜಯಕುಮಾರ್‌ ಹಿರೇಮಠ್ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. 

ದೂರಿನ ಆರೋಪಗಳ ಕುರಿತು ಪ್ರಾಥಮಿಕ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಆರೋಪಗಳಲ್ಲಿ ಮೇಲ್ನೋಟಕ್ಕೆ ಸತ್ಯಾಂಶ ಕಂಡು ಬಂದ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.







  • Blogger Comments
  • Facebook Comments

0 comments:

Post a Comment

Item Reviewed: ಡಿನೋಟಿಫೈ ಪ್ರಕರಣ ಎಫ್.ಐ.ಆರ್. ರದ್ದು‌ ಕೋರಿ ಸಿಎಂ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈ : ತನಿಖೆ ಮುಂದುವರಿಸಲು ಲೋಕಾಯುಕ್ತಕ್ಕೆ ಸೂಚನೆ Rating: 5 Reviewed By: karavali Times
Scroll to Top