ಕಾಂಗ್ರೆಸ್ ಮುಖಂಡ ಉಮ್ಮರ್ ಫಜೀರ್ ಹೃದಯಾಘಾತದಿಂದ ನಿಧನ - Karavali Times ಕಾಂಗ್ರೆಸ್ ಮುಖಂಡ ಉಮ್ಮರ್ ಫಜೀರ್ ಹೃದಯಾಘಾತದಿಂದ ನಿಧನ - Karavali Times

728x90

21 January 2021

ಕಾಂಗ್ರೆಸ್ ಮುಖಂಡ ಉಮ್ಮರ್ ಫಜೀರ್ ಹೃದಯಾಘಾತದಿಂದ ನಿಧನ

ಬಂಟ್ವಾಳ, ಜ. 22, 2021 (ಕರಾವಳಿ ಟೈಮ್ಸ್) : ಇಲ್ಲಿನ ತಾ ಪಂ ಮಾಜಿ ಉಪಾಧ್ಯಕ್ಷ, ಬಂಟ್ವಾಳ ಎಪಿಎಂಸಿ ಮಾಜಿ ನಿರ್ದೇಶಕ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಹಾಲಿ ಕಾರ್ಯದರ್ಶಿ, ಫಜೀರು ನಿವಾಸಿ ಉಮ್ಮರ್ ಫಜೀರು (60) ಹಠಾತ್ ಹೃದಯಾಘಾತಕ್ಕೊಳಗಾಗಿ ಶುಕ್ರವಾರ ಮುಂಜಾನೆ ನಿಧನರಾದರು. ಶುಕ್ರವಾರ ಮುಂಜಾನೆ ವೇಳೆಗೆ ಹೃದಯ ಬೇನೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಕ್ಷಣ ಅವರನ್ನು ಕಣಚೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ಕಾಂಗ್ರೆಸ್ ಮುಖಂಡ ಉಮ್ಮರ್ ಫಜೀರ್ ಹೃದಯಾಘಾತದಿಂದ ನಿಧನ Rating: 5 Reviewed By: karavali Times
Scroll to Top