ಎಸ್ಸೆಸ್ಸೆಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದ ಸಚಿವರು - Karavali Times ಎಸ್ಸೆಸ್ಸೆಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದ ಸಚಿವರು - Karavali Times

728x90

28 January 2021

ಎಸ್ಸೆಸ್ಸೆಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದ ಸಚಿವರು

ಬೆಂಗಳೂರು, ಜ. 28, 2021 (ಕರಾವಳಿ ಟೈಮ್ಸ್) : 2020-21ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದ್ದು, ಶಿಕ್ಷಣ ಡಚಿವ ಸುರೇಶ್ ಕುಮಾರ್ ಗುರುವಾರ ಬೆಂಗಳೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು. ಜೂನ್ 14 ರಿಂದ 25 ರವರೆಗೆ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆ ನಡೆಯಲಿದ್ದು, ಜೂ. 14 ರಂದು ಪ್ರಥಮ ಭಾಷೆ, ಜೂ. 16 ರಂದು ಗಣಿತ, ಜೂ. 18ರಂದು ಇಂಗ್ಲೀಷ್ ಹಾಗೂ ಕನ್ನಡ, ಜೂ. 21 ರಂದು ವಿಜ್ಞಾನ, ಜೂ. 23 ರಂದು ಹಿಂದಿ ಹಾಗೂ ಜೂ. 25 ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು. ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಇದಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಬೋರ್ಡ್ ಗೆ ಸಲ್ಲಿಸಬಹುದು ಎಂದ ಸುರೇಶ್ ಕುಮಾರ್ ಆಕ್ಷೇಪಣೆಗಳಿದ್ದಲ್ಲಿ ಅವುಗಳ ಬಗ್ಗೆ ಪರಿಶೀಲನೆ ನಡೆಸಿ ಬಳಿಕ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದರು.
  • Blogger Comments
  • Facebook Comments

0 comments:

Post a Comment

Item Reviewed: ಎಸ್ಸೆಸ್ಸೆಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದ ಸಚಿವರು Rating: 5 Reviewed By: karavali Times
Scroll to Top