ಫೆ. 20 ರಂದು ದಡ್ಡಲಕಾಡು ಶಾಲೆಯಲ್ಲಿ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ಗ್ರಾಮ ವಾಸ್ತವ್ಯ - Karavali Times ಫೆ. 20 ರಂದು ದಡ್ಡಲಕಾಡು ಶಾಲೆಯಲ್ಲಿ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ಗ್ರಾಮ ವಾಸ್ತವ್ಯ - Karavali Times

728x90

16 February 2021

ಫೆ. 20 ರಂದು ದಡ್ಡಲಕಾಡು ಶಾಲೆಯಲ್ಲಿ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ಗ್ರಾಮ ವಾಸ್ತವ್ಯ

ಬಂಟ್ವಾಳ, ಫೆ. 16, 2021 (ಕರಾವಳಿ ಟೈಮ್ಸ್) : ಸರಕಾರದ ಆದೇಶದಂತೆ ಬಂಟ್ವಾಳ ತಾಲೂಕು ತಹಶೀಲ್ದಾರ್ ನೇತೃತ್ವದಲ್ಲಿ ಕಂದಾಯ ಇಲಾಖಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಫೆ 20 ರಂದು ಮೂಡನಡುಗೋಡು ಗ್ರಾಮದ ದಡ್ಡಲಕಾಡು ಸರಕಾರಿ ಉನ್ನತೀಕರಿಸಿದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಹಮ್ಮಿಕೊಳ್ಳಲಾಗಿದೆ. ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿರಲಿದ್ದು, ಗ್ರಾಮಸ್ಥರಿಗೆ ಕಂದಾಯ ಹಾಗೂ ಇತರ ಇಲಾಖಾ ಸವಲತ್ತುಗಳ ವಿತರಣೆ ನಡೆಯಲಿದ್ದು, ಸಮಸ್ಯೆಗಳ ಬಗ್ಗೆಯೂ ಗ್ರಾಮಸ್ಥರು ಇಲಾಖಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಬಹುದು. ಈ ಬಗ್ಗೆ ಗ್ರಾಮಸ್ಥರು ತಮ್ಮ ದೂರುಗಳನ್ನು ಫೆ 18ರೊಳಗೆ ಪಂಚಾಯತ್ ದೂರು ಪೆಟ್ಟಿಗೆ ಅಥವಾ ಗ್ರಾಮಕರಣಿಕರಲ್ಲಿ ಖುದ್ದಾಗಿ ಸಲ್ಲಿಸಬಹುದು ಎಂದು ಬಂಟ್ವಾಳ ತಹಶೀಲ್ದಾರರ ಕಛೇರಿ ಪ್ರಕಟಣೆ ತಿಳಿಸಿದೆ.
  • Blogger Comments
  • Facebook Comments

0 comments:

Post a Comment

Item Reviewed: ಫೆ. 20 ರಂದು ದಡ್ಡಲಕಾಡು ಶಾಲೆಯಲ್ಲಿ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ಗ್ರಾಮ ವಾಸ್ತವ್ಯ Rating: 5 Reviewed By: karavali Times
Scroll to Top