ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಮುಖ್ಯವಲ್ಲ, ಗೆದ್ದವರು, ಸೋತವರು ಎಲ್ಲರೂ ನಮ್ಮವರೇ : ಡಿಕೆಶಿ - Karavali Times ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಮುಖ್ಯವಲ್ಲ, ಗೆದ್ದವರು, ಸೋತವರು ಎಲ್ಲರೂ ನಮ್ಮವರೇ : ಡಿಕೆಶಿ - Karavali Times

728x90

7 February 2021

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಮುಖ್ಯವಲ್ಲ, ಗೆದ್ದವರು, ಸೋತವರು ಎಲ್ಲರೂ ನಮ್ಮವರೇ : ಡಿಕೆಶಿ

ಬಿಜೆಪಿ ಕಿತ್ತೊಗೆಯುವು ಮಾತ್ರ ನಮ್ಮ‌ ಗುರಿ ಎಂದ ಕೆಪಿಸಿಸಿ ಅಧ್ಯಕ್ಷ ಬೆಂಗಳೂರು, ಫೆ. 08, 2021 (ಕರಾವಳಿ ಟೈಮ್ಸ್) : ಇತ್ತೀಚಿಗೆ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಶಾಂತಿನಗರ ಕೈ ಶಾಸಕ ಎನ್ ಎ ಹಾರಿಸ್ ಅವರ ಪುತ್ರ ಮುಹಮ್ಮದ್ ನಲಪಾಡ್ ಹೆಚ್ಚು ಮತ ಪಡೆದರೂ, ಅವರ ಗೆಲುವನ್ನು ಕ್ರಿಮಿನಲ್ ಪ್ರಕರಣ ಕಾರಣಕ್ಕೆ ತಡೆಹಿಡಿದು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಸಚಿವ ಸೀತಾರಾಂ ಅವರ ಪುತ್ರ ರಕ್ಷಾ ರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಚುನಾವಣೆಯಲ್ಲಿ ನಲಪಾಡ್ 64, 203 ಮತ ಪಡೆದಿದ್ದರೆ, ರಕ್ಷಾ ರಾಮಯ್ಯ 57,271 ಮತಗಳನ್ನು ಪಡೆದುಕೊಂಡಿದ್ದರು. ಆದರೆ, ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ನಲಪಾಡ್ ಸ್ಪರ್ಧೆಯನ್ನೇ ಎಐಸಿಸಿ ಅಸಿಂಧುಗೊಳಿಸಿದ ಕಾರಣ, ರಕ್ಷಾ ರಾಮಯ್ಯ ಅವರಿಗೆ ನೂತನ ಅಧ್ಯಕ್ಷ ಪಟ್ಟ ದೊರೆತಿದೆ. ಇದು ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಪಕ್ಷದೊಳಗೆ ಪರ-ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿವಂತೆಯೇ, ಈ ಬಗ್ಗೆ ಮೊದಲ ಬಾರಿಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಯಿಸಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವ ಕುಮಾರ್, ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದವರು, ಸೋತವರು, ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲರೂ ನಮ್ಮ ಹುಡುಗರೇ. ಎಲ್ಲರೂ ಮುಂದಿನ ದಿನಗಳಲ್ಲಿ ಪಕ್ಷಕ್ಕಾಗಿ ದುಡಿಯಲಿದ್ದು, ರಾಜ್ಯದಲ್ಲಿ ಬಿಜೆಪಿಯನ್ನು ಕಿತ್ತೊಗೆದು, ಬಿಜೆಪಿ ಮುಕ್ತ ಕರ್ನಾಟಕ ಮಾಡುವುದೇ ನಮ್ಮ ಗುರಿ. ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದಿದ್ದಾರೆ. ಪಕ್ಷದಲ್ಲಿ ಆಂತರಿಕವಾಗಿ ಚುನಾವಣೆ ನಡೆದಿದೆ. ಅದರ ಫಲಿತಾಂಶ ಹೊರಬಿದ್ದಿದೆ. ಇದರಲ್ಲಿ ಗೆಲುವು, ಸೋಲು ನನಗೆ ಮುಖ್ಯ ಅಲ್ಲ. ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ತಮ್ಮ ಹೋರಾಟದ ಛಲ ತೋರಿರುವುದು ಬಹಳ ಮುಖ್ಯ. ಗೆದ್ದವರು ಹಾಗೂ ಸೋತವರನ್ನು ಸಮಾನಾಗಿ ತೆಗೆದುಕೊಂಡು ಹೋಗುವ ಕೆಲಸ ನಾನು ಮಾಡುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಮುಖ್ಯವಲ್ಲ, ಗೆದ್ದವರು, ಸೋತವರು ಎಲ್ಲರೂ ನಮ್ಮವರೇ : ಡಿಕೆಶಿ Rating: 5 Reviewed By: karavali Times
Scroll to Top