ಬಂಟ್ವಾಳದಲ್ಲಿ ಸಂತ ಶ್ರೀ ಸೇವಾಲಾಲ ಜಯಂತಿ ಆಚರಣೆ - Karavali Times ಬಂಟ್ವಾಳದಲ್ಲಿ ಸಂತ ಶ್ರೀ ಸೇವಾಲಾಲ ಜಯಂತಿ ಆಚರಣೆ - Karavali Times

728x90

15 February 2021

ಬಂಟ್ವಾಳದಲ್ಲಿ ಸಂತ ಶ್ರೀ ಸೇವಾಲಾಲ ಜಯಂತಿ ಆಚರಣೆ

ಬಂಟ್ವಾಳ, ಫೆ. 15, 2021 (ಕರಾವಳಿ ಟೈಮ್ಸ್) : ಬಾಲಕನಾಗಿದ್ದಾಗಲೇ ತನ್ನ ಪವಾಡಗಳ ಮೂಲಕ ಜನರನ್ನು ಪರಿವರ್ತಿಸಲು ಪ್ರಯತ್ನ ಪಟ್ಟವರು ಸಂತ ಶ್ರೀ ಸೇವಾಲಾಲರು. ಅಲೆಮಾರಿ ಜೀವನ ನಡೆಸುತ್ತಿದ್ದ ಬಂಜಾರ ಸಮುದಾಯವನ್ನು ಮೇಲೆತ್ತಿ ಅವರಿಗೆ ಸಮಾಜದಲ್ಲಿ ವಿಶೇಷ ಸ್ಥಾನ ಕಲ್ಪಿಸಿಕೊಟ್ಟ ಸಂತರಾಗಿದ್ದಾರೆ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್ ಹೇಳಿದರು. ಬಂಟ್ವಾಳ ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರ ಇಲ್ಲಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ಸಂತ ಶ್ರೀ ಸೇವಾಲಾಲ್ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಕರಾವಳಿ ಶ್ರೀ ಸೇವಾಲಾಲ್ ಬಂಜಾರ (ಲಂಬಾಣಿ) ಸಂಘ (ರಿ) ಮಂಗಳೂರು ಇದರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜುನಾಥ್ ಕೆ ಎಚ್, ನಿಕಟ ಪೂರ್ವ ಜಂಟಿ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ್, ಸಲಹಾ ಸಮಿತಿ ಸದಸ್ಯರುಗಳಾದ ಚಂದ್ರಶೇಖರ ನಾಯಕ್, ಕಲ್ಲುದೇನು ಲಮಾಣಿ, ಲೋಕಾ ನಾಯ್ಕ್, ದಿಲೀಪ್ ಕುಮಾರ್ ರಜಪೂತ್, ಸಂಘದ ಸದಸ್ಯರಾದ ತಾರೇಶ್ ನಾಯ್ಕ್, ವಿಜಯಲಕ್ಷ್ಮಿ ಬಾಯಿ, ಹೀರ್ಯ ನಾಯ್ಕ್, ಜ್ಯೋತಿ ಬಾಯಿ, ರಾಜು ಲಮಾಣಿ, ವಿಶ್ವನಾಥ ರಾಥೋಡ್, ಕಿರಣ್ ಕುಮಾರ್ ಡಿ ರಜಪೂತ್, ಗೌತಮಿ ನಾಯಕ್, ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಭಾಗವಹಿಸಿದ್ದರು. ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳದಲ್ಲಿ ಸಂತ ಶ್ರೀ ಸೇವಾಲಾಲ ಜಯಂತಿ ಆಚರಣೆ Rating: 5 Reviewed By: karavali Times
Scroll to Top