ಶಾಲಾ-ಕಾಲೇಜು ದಾಖಲಾತಿ ಫೆ 20ರವರೆಗೆ ವಿಸ್ತರಿಸಲು ಸಚಿವ ಸುರೇಶ್ ಕುಮಾರ್ ಸೂಚನೆ - Karavali Times ಶಾಲಾ-ಕಾಲೇಜು ದಾಖಲಾತಿ ಫೆ 20ರವರೆಗೆ ವಿಸ್ತರಿಸಲು ಸಚಿವ ಸುರೇಶ್ ಕುಮಾರ್ ಸೂಚನೆ - Karavali Times

728x90

6 February 2021

ಶಾಲಾ-ಕಾಲೇಜು ದಾಖಲಾತಿ ಫೆ 20ರವರೆಗೆ ವಿಸ್ತರಿಸಲು ಸಚಿವ ಸುರೇಶ್ ಕುಮಾರ್ ಸೂಚನೆ

ಬೆಂಗಳೂರು, ಫೆ. 07, 2021 (ಕರಾವಳಿ ಟೈಮ್ಸ್) : ಈ ಬಾರಿ ಕೋವಿಡ್ ಹಾಗೂ ಲಾಕ್ ಡೌನ್ ಕಾರಣದಿಂದ ಶಾಲಾ ಕಾಲೇಜುಗಳ ಶೈಕ್ಷಣಿಕ ವರ್ಷ ತಡವಾಗಿ ಆರಂಭವಾಗಿರುವ ಹಿನ್ನೆಲೆಯಲ್ಲಿ ತರಗತಿಗಳ ದಾಖಲಾತಿಯನ್ನು ಫೆಬ್ರವರಿ 20 ರವರೆಗೆ ವಿಸ್ತರಿಸುವಂತೆ ರಾಜ್ಯ ಪ್ರಾಥಮಿಕ ಮತ್ತು ಪ್ರೌ ಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಶಾಲಾ-ಕಾಲೇಜುಗಳಿಗೆ ಸೂಚಿಸಿದ್ದಾರೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲಾ-ಕಾಲೇಜುಗಳು ಫೆ.1 ರಿಂದ ಪೂರ್ಣ ಪ್ರಮಾಣದಲ್ಲಿ ಪ್ರಾರಂಭಗೊಂಡಿವೆ. 9 ರಿಂದ 12ನೇ ತರಗತಿವರೆಗೆ ಭೌತಿಕ ತರಗತಿಗಳು ಆರಂಭವಾಗಿದ್ದರೆ, ಉಳಿದ ತರಗತಿಗಳು ಪರ್ಯಾಯ ಬೋಧನೆಯಲ್ಲಿ ಸಾಗುತ್ತಿವೆ. ರಾಜ್ಯದ ವಿವಿಧ ಭಾಗಗಳ ವಿದ್ಯಾರ್ಥಿಗಳು ತಾವು ಬಯಸಿದ ಕಾಲೇಜುಗಳಲ್ಲಿ ದಾಖಲಾತಿ ಪಡೆಯುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ವರ್ಷದ ದಾಖಲಾತಿಗೆ ಫೆಬ್ರವರಿ 6 ಕಡೆಯ ದಿನವಾಗಿದ್ದು, ಹಲವು ಮಂದಿ ವಿದ್ಯಾರ್ಥಿಗಳು ಇನ್ನೂ ತರಗತಿಗಳಿಗೆ ದಾಖಲಾಗಲು ಸಾಧ್ಯವಾಗಿಲ್ಲ. ಈ ವರ್ಷ ತರಗತಿಗಳು ತಡವಾಗಿ ಪ್ರಾರಂಭವಾಗಿರುವುದರಿಂದ ದಾಖಲಾತಿಗೆ ಸಮಯ ನೀಡಬೇಕೆಂದು ಕೋರಿ ರಾಜ್ಯದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ಜನಪ್ರತಿನಿಧಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಾಖಲಾತಿಯನ್ನು ಫೆ. 20 ರವರೆಗೆ ವಿಸ್ತರಿಸುವಂತೆ ಸಚಿವರು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಟಿಪ್ಪಣಿಯಲ್ಲಿ ಸೂಚನೆ ನೀಡಿದ್ದಾರೆ.  ಎಲ್ಲ ತರಗತಿಗಳ ಸೇರ್ಪಡೆಗೆ ದಾಖಲಾತಿಯನ್ನು ಕಡ್ಡಾಯಗೊಳಿಸಲಾಗಿರುವುದರಿಂದ ವಿದ್ಯಾರ್ಥಿಗಳ ದಾಖಲಾತಿಗೆ ಅನುಕೂಲ ಕಲ್ಪಿಸಲು ಪ್ರಸ್ತುತ ವರ್ಷದ ಶಾಲಾ ಕಾಲೇಜುಗಳ ದಾಖಲಾತಿ ಪ್ರವೇಶ ಅವಧಿಯನ್ನು ವಿಸ್ತರಿಸುವಂತೆ ಸಚಿವ ಸುರೇಶ್ ಕುಮಾರ್ ಈ ಸೂಚನೆ ನೀಡಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ಶಾಲಾ-ಕಾಲೇಜು ದಾಖಲಾತಿ ಫೆ 20ರವರೆಗೆ ವಿಸ್ತರಿಸಲು ಸಚಿವ ಸುರೇಶ್ ಕುಮಾರ್ ಸೂಚನೆ Rating: 5 Reviewed By: karavali Times
Scroll to Top