ಮುಂಬೈ, ಮಾ 27, 2021 (ಕರಾವಳಿ ಟೈಮ್ಸ್) : ದೇಶಾದ್ಯಂತ ಕೊರೋನಾ ರೂಪಾಂತರಿ ವೈರಸ್ ವೇಗವಾಗಿ ಹರಡುತ್ತಿರುವ ಮಧ್ಯೆ ಈಗಾಗಲೇ ಕರೋನಾ ಸೂಕ್ಷ್ಮ ಪ್ರದೇಶವಾಗಿ ಗುರುತಿಸಿಲ್ಪಟ್ಟಿರುವ ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಸರಕಾರ ಕಠಿಣ ನಿರ್ಧಾರ ಕೈಗೊಂಡಿದೆ. 
    ಮಹಾರಾಷ್ಟ್ರದಲ್ಲಿ ಕೊರೋನಾ ರೂಪಾಂತರಿ ಸೋಂಕು ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸರಕಾರ ಈ ನಿರ್ಧಾರಕ್ಕೆ ಬಂದಿದ್ದು, ಮಾರ್ಚ್ 28ರ ಭಾನುವಾರದಿಂದಲೇ ನೈಟ್ ಕಫ್ರ್ಯೂ ಜಾರಿಗೊಳಿಸಿ ಆದೇಶಿಸಲಾಗಿದೆ. ಈ ಬಗ್ಗೆ ಪ್ರತಿಕ್ರಯಿಸಿರುವ ಸಿಎಂ ಕಚೇರಿ, ಕೋವಿಡ್-19 ಹರಡುವಿಕೆಯನ್ನು ತಡೆಯುವ ಸಲುವಾಗಿ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.  ಅದರಂತೆ ಮಹಾರಾಷ್ಟ್ರದಲ್ಲಿ ರಾತ್ರಿ 8 ರಿಂದ ಬೆಳಿಗ್ಗೆ 7ರವರೆಗೆ ಎಲ್ಲಾ ಮಾಲ್‍ಗಳು ಮುಚ್ಚಲ್ಪಡುತ್ತವೆ. ಅಲ್ಲದೆ ಸೋಂಕು ಹೆಚ್ಚಿರುವ ಆಯ್ದ ಪ್ರದೇಶಗಳಲ್ಲಿ ಸಂಭವನೀಯ ಲಾಕ್ ಡೌನ್ ಕೂಡ ಜಾರಿ ಮಾಡಬಹುದು ಎಂದು ಹೇಳಿಕೊಂಡಿದೆ. 
    ಕೊರೊನಾ ವೈರಸ್£ಂದ ಅಪಾಯ ಎದುರಾಗುವುದು ಮುಗಿದಿಲ್ಲ. ಇದಕ್ಕೆ ಬದಲಾಗಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಜನರು ಇದನ್ನು ಅರ್ಥಮಾಡಿಕೊಳ್ಳಬೇಕು. ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲಾಧಿಕಾರಿಗಳು ಲಾಕ್‍ಡೌನ್ ವಿಧಿಸಬಹುದು. ಆದರೆ ಅವರು ಮೊದಲೇ ಜನರಿಗೆ ಸಾಕಷ್ಟು ಸಮಯವನ್ನು ನೀಡಬೇಕಾಗುತ್ತದೆ. ಹೆಚ್ಚುತ್ತಿರುವ ಪ್ರಕರಣಗಳು ಆತಂಕಕ್ಕೆ ಕಾರಣವಾಗಿದೆ. ಲಾಕ್‍ಡೌನ್ ಹೇರಲು ನಾನು ಬಯಸುವುದಿಲ್ಲ. ಆದಾಗ್ಯೂ, ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಆರೋಗ್ಯ ಮೂಲಸೌಕರ್ಯಗಳು ಕಡಿಮೆಯಾಗಬಹುದು ಎಂದು ಸಿಎಂ ಕಚೇರಿ ಎಚ್ಚರಿಸಿದೆ. 
    ಎಲ್ಲಾ ಜಿಲ್ಲೆಗಳಲ್ಲಿ ತಮ್ಮ ಆರೋಗ್ಯ ಮೂಲಸೌಕರ್ಯ ಮತ್ತು ಹಾಸಿಗೆಯ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು. ಎಲ್ಲಾ ವಿಭಾಗೀಯ ಆಯುಕ್ತರು, ಜಿಲ್ಲಾಧಿಕಾರಿಗಳು, ನಗರಸಭೆ ಆಯುಕ್ತರು, ಪೆÇಲೀಸ್ ಆಯುಕ್ತರು, ಪೆÇಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ನಾಗರಿಕ ಶಸ್ತ್ರಚಿಕಿತ್ಸಕರು ಮತ್ತು ಕೋವಿಡ್-19 ಕಾರ್ಯಪಡೆಯ ಸದಸ್ಯರು ಹಾಜರಿದ್ದ ಸಭೆಯಲ್ಲಿ ಸಿಎಂ ಉದ್ಧವ್ ಠಾಕ್ರೆ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಸಾರ್ವಜನಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಾಜೇಶ್ ತೋಪೆ, ವೈದ್ಯಕೀಯ ಶಿಕ್ಷಣ ಸಚಿವ ಅಮಿತ್ ದೇಶ್‍ಮುಖ್ ಮತ್ತು ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು. 
 
 







 
 
 
 


 



 




0 comments:
Post a Comment