ಮಹಾರಾಷ್ಟ್ರದಲ್ಲಿ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿ : ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರಕಾರ - Karavali Times ಮಹಾರಾಷ್ಟ್ರದಲ್ಲಿ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿ : ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರಕಾರ - Karavali Times

728x90

28 March 2021

ಮಹಾರಾಷ್ಟ್ರದಲ್ಲಿ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿ : ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರಕಾರ


ಮುಂಬೈ, ಮಾ. 28, 2021 (ಕರಾವಳಿ ಟೈಮ್ಸ್) : ರೂಪಾಂತರಿ ಕೊರೋನಾ ವೈರಸ್ ಪ್ರಾಬಲ್ಯ ದಿನದಿಂದ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕಠಿಣ ನಿಯಂತ್ರಣ ಕ್ರಮವಾಗಿ ಮಹಾರಾಷ್ಟ್ರ ಸರಕಾರ ಇಂದಿನಿಂದ (ಮಾ 28) ನೈಟ್ ಕಫ್ರ್ಯೂ ಜಾರಿಗೊಳಿಸುತ್ತಿದೆ. ರಾತ್ರಿ 8 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರಲಿದ್ದು, ಕಫ್ರ್ಯೂ ಉಲ್ಲಂಘಿಸಿದಲ್ಲಿ ಕಠಿಣ ಕ್ರಮ ಜರುಗಿಸುವುದಾಗಿ ಸರಕಾರ ಎಚ್ಚರಿಸಿದೆ. ಸರಕಾರದ ಮುಂದಿನ ಆದೇಶದವರೆಗೂ ಈ ರಾತ್ರಿ ಕಫ್ರ್ಯೂ ಜಾರಿಯಲ್ಲಿರಲಿದೆ ಎಂದು ಮಹಾ ಮುಖ್ಯಮಂತ್ರಿ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ. 

ಭಾರತದಲ್ಲಿ ಶನಿವಾರ 62,714 ಹೊಸ ಕೊರೋನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ ಮಹಾರಾಷ್ಟ್ರದಲ್ಲಿ 35,726 ಹೊಸ ಪ್ರಕರಣಗಳು ದಾಖಲಾಗಿವೆ. ಈಗಾಗಲೇ ಭಾರತದಲ್ಲಿ ಸಕ್ರಿಯ ಪ್ರಕರಣಗಳು 4.86 ಲಕ್ಷಕ್ಕಿಂತ ಹೆಚ್ಚಾಗಿದ್ದು, ಶನಿವಾರ 312 ಜನರು ಕೊರೋನಾ ವೈರಸ್ಸಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ. 

ಕೊವೀಡ್-19 ಕಾರಣದಿಂದಾಗಿ ಮಹಾರಾಷ್ಟ್ರದಲ್ಲಿ ಶನಿವಾರ 166 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು,  ಮಾರ್ಚ್ 27 ರಿಂದ ಧಾರ್ಮಿಕ ಮತ್ತು ರಾಜಕೀಯ ಸೇರಿದಂತೆ ರಾಜ್ಯದಲ್ಲಿ ಎಲ್ಲಾ ರೀತಿಯ ಸಾರ್ವಜನಿಕ ಕಾರ್ಯಕ್ರಮಗಳನ್ನು ಮಹಾರಾಷ್ಟ್ರ ಸರಕಾರ ನಿಷೇಧಿಸಿ ಆದೇಶ ಹೊರಡಿಸಿದೆ. ಮಾಲ್‍ಗಳು, ರೆಸ್ಟೋರೆಂಟ್‍ಗಳು ಹಾಗೂ ಉದ್ಯಾನಗಳು ರಾಜ್ಯದಲ್ಲಿ ರಾತ್ರಿ 8 ರಿಂದ ಬೆಳಗ್ಗೆ 7 ರವರೆಗೆ ಮುಚ್ಚಲ್ಪಡಲಿದೆ. ಹೋಮ್ ಡೆಲವರಿಗೆ ಅವಕಾಶ ನೀಡಲಿದೆ. 

ಸೋಂಕು ಹರಡುವುದನ್ನು ತಡೆಯಲು ರಾತ್ರಿ ಕರ್ಫ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಖ್ಯಮಂತ್ರಿ ಠಾಕ್ರೆ ಅವರು ಎಲ್ಲ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಹಾರಾಷ್ಟ್ರ ಸರಕಾರ ಕೊರೊನಾ ತಡೆ ಅಭಿಯಾನವನ್ನು ಮತ್ತೆ ಪ್ರಾರಂಭಿಸಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಸರಕಾರದ ಈ ನಿಯಮಗಳನ್ನು ಉಲ್ಲಂಘಿಸಿದೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಲಾಗಿದೆ. 

ಕೊರೋನಾ ಮಾರ್ಗಸೂಚಿ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ, ಪಾನ್, ಗುಟ್ಕಾ, ತಂಬಾಕು ಸೇವನೆಯನ್ನು ನಿಷೇಧಿಸಲಾಗಿದೆ, ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಸ್ಥಳದಲ್ಲಿ ಹಾಗೂ ಪ್ರಯಾಣದ ಸಮಯದಲ್ಲಿ  ಮಾಸ್ಕ್ ಧಾರಣೆ ಕಡ್ಡಾಯಗೊಳಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೂ ಕಡ್ಡಾಯ, ರಾತ್ರಿ ಕರ್ಫ್ಯೂ ನಿಯಮ ಉಲ್ಲಂಘಿಸಿದರೆ 1 ಸಾವಿರ ಹಾಗೂ ಮಾಸ್ಕ್ ಧಾರಣೆ ಮಾಡದಿದ್ದರೆ 500 ರೂಪಾಯಿ ದಂಡ ವಿಧಿಸಲಾಗುತ್ತದೆ, ಎಲ್ಲಾ ಖಾಸಗಿ ಕಚೇರಿಗಳಲ್ಲಿ ಶೇ. 50ರಷ್ಟು ಸಾಮರ್ಥ್ಯದಲ್ಲಿ ನೌಕರರಿಂದ ಕಾರ್ಯನಿರ್ವಹಿಸಬೇಕು. ಉಳಿದಂತೆ ವರ್ಕ್ ಫ್ರಂ ಹೋಂಗೆ ಆದ್ಯತೆ ನೀಡಬೇಕು, ಕೊರೊನಾ ನಿಯಮಗಳ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೂ ದಂಡ ವಿಧಿಸಬಹುದಾಗಿದೆ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಮಹಾರಾಷ್ಟ್ರದಲ್ಲಿ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿ : ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರಕಾರ Rating: 5 Reviewed By: karavali Times
Scroll to Top