ಎಸ್ಸೆಸ್ಸೆಲ್ಸಿ ಅಂತಿಮ ವೇಳಾಪಟ್ಟಿ ಪ್ರಕಟ : ಜೂನ್ 21 ರಿಂದ ಜುಲೈ 5ರವರೆಗೆ ಪರೀಕ್ಷೆ - Karavali Times ಎಸ್ಸೆಸ್ಸೆಲ್ಸಿ ಅಂತಿಮ ವೇಳಾಪಟ್ಟಿ ಪ್ರಕಟ : ಜೂನ್ 21 ರಿಂದ ಜುಲೈ 5ರವರೆಗೆ ಪರೀಕ್ಷೆ - Karavali Times

728x90

1 March 2021

ಎಸ್ಸೆಸ್ಸೆಲ್ಸಿ ಅಂತಿಮ ವೇಳಾಪಟ್ಟಿ ಪ್ರಕಟ : ಜೂನ್ 21 ರಿಂದ ಜುಲೈ 5ರವರೆಗೆ ಪರೀಕ್ಷೆ

ಬೆಂಗಳೂರು, ಮಾ. 01, 2021 (ಕರಾವಳಿ ಟೈಮ್ಸ್) : ಕೋವಿಡ್ ಹಾಗೂ ಲಾಕ್ ಡೌನ್ ಕಾರಣದಿಂದಾಗಿ ತಡವಾಗಿ ಶಾಲೆಗಳು ಆರಂಭವಾಗಿರುವ ಹಿನ್ನಲೆಯಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮಾರ್ಚ್ ತಿಂಗಳ ಬದಲಿಗೆ, ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿವೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್‍ಕುಮಾರ್, ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಸಲಹೆ, ಮನವಿಗಳನ್ನು ಪರಿಗಣಿಸಿ ಇದೀಗ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದರು. ಜೂನ್ 21 ರಂದು ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ, ಜೂ. 24 ರಂದು ಗಣಿತ, ಜೂ. 28 ರಂದು ವಿಜ್ಞಾನ, ಜೂ. 30 ರಂದು ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಜುಲೈ 2 ರಂದು ದ್ವಿತೀಯ ಭಾಷೆ ಇಂಗ್ಲಿಷ್/ಕನ್ನಡ, ಜುಲೈ 5 ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ಎಸ್ಸೆಸ್ಸೆಲ್ಸಿ ಅಂತಿಮ ವೇಳಾಪಟ್ಟಿ ಪ್ರಕಟ : ಜೂನ್ 21 ರಿಂದ ಜುಲೈ 5ರವರೆಗೆ ಪರೀಕ್ಷೆ Rating: 5 Reviewed By: karavali Times
Scroll to Top