ಕೊರೋನಾ ಆರ್ಭಟ ನಿಯಂತ್ರಣಕ್ಕೆ ಕಠಿಣ ನಿರ್ಧಾರಕ್ಕೆ ಬಂದ ರಾಜ್ಯ ಸರಕಾರ : ಎಪ್ರಿಲ್ 27 ರಿಂದ 14 ದಿನ ಸಂಪೂರ್ಣ ಕಫ್ರ್ಯೂ ಘೋಷಿಸಿದ ಸಿಎಂ - Karavali Times ಕೊರೋನಾ ಆರ್ಭಟ ನಿಯಂತ್ರಣಕ್ಕೆ ಕಠಿಣ ನಿರ್ಧಾರಕ್ಕೆ ಬಂದ ರಾಜ್ಯ ಸರಕಾರ : ಎಪ್ರಿಲ್ 27 ರಿಂದ 14 ದಿನ ಸಂಪೂರ್ಣ ಕಫ್ರ್ಯೂ ಘೋಷಿಸಿದ ಸಿಎಂ - Karavali Times

728x90

26 April 2021

ಕೊರೋನಾ ಆರ್ಭಟ ನಿಯಂತ್ರಣಕ್ಕೆ ಕಠಿಣ ನಿರ್ಧಾರಕ್ಕೆ ಬಂದ ರಾಜ್ಯ ಸರಕಾರ : ಎಪ್ರಿಲ್ 27 ರಿಂದ 14 ದಿನ ಸಂಪೂರ್ಣ ಕಫ್ರ್ಯೂ ಘೋಷಿಸಿದ ಸಿಎಂ

ಬೆಂಗಳೂರು, ಎಪ್ರಿಲ್ 26, 2021 (ಕರಾವಳಿ ಟೈಮ್ಸ್) : ಕೋವಿಡ್-19 2ನೇ ಅಲೆಯ ಆರ್ಭಟ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗಿದ್ದು, ಮಂಗಳವಾರ ರಾತ್ರಿ 9 ಗಂಟೆಯಿಂದ ಮುಂದಿನ 14  ದಿನಗಳ ಕಾಲ ರಾಜ್ಯಾದ್ಯಂತ ಲಾಕ್‍ಡೌನ್ ಘೋಷಿಸಿ ಸಿಎಂ ಯಡಿಯೂರಪ್ಪ ಆದೇಶಿಸಿದ್ದಾರೆ. 

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸೋಮವಾರ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆಯ ಬಳಿಕ ಸರಕಾರ ಈ ನಿರ್ಧಾರ ಕೈಗೊಂಡಿದೆ. 15 ದಿನದ ಬಳಿಕವೂ ಪರಿಸ್ಥಿತಿ ಹತೋಟಿಗೆ ಬಾರದಿದ್ದಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ಸಿಎಂ ತಿಳಿಸಿದ್ದಾರೆ. 

ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ವೈರಸ್ ದೊಡ್ಡ ಪ್ರಮಾಣದಲ್ಲಿ ಪರಿಣಾಮ ಬೀರುತ್ತಿದ್ದು, ಮಹಾರಾಷ್ಟ್ರವನ್ನೂ ಮೀರಿಸಿ, ಬೆಂಗಳೂರು ಸುತ್ತಮುತ್ತ ಜಾಸ್ತಿಯಾಗುತ್ತಿದೆ. ಸಚಿವ ಸಂಪುಟದ ಸಹೋದ್ಯೋಗಿಗಳು, ತಜ್ಞರೊಂದಿಗೆ ಸಮಾಲೋಚಿಸಿ ಕೆಲವು ನಿರ್ಧಾರಕ್ಕೆ ಬರಲಾಗಿದೆ ಎಂದರು.

ಸರಕಾರಿ ಆಸ್ಪತ್ರೆಯಲ್ಲಿ 18 ರಿಂದ 45 ವಯಸ್ಸಿನೊಳಗಿರುವವರಿಗೆ ಲಸಿಕೆಯನ್ನು ಉಚಿತವಾಗಿ ಪೂರೈಕೆ ನೀಡಲಾಗುವುದು. ನಾಳೆ ರಾತ್ರಿಯಿಂದ ಇಡೀ ರಾಜ್ಯಾದಂತ್ಯ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದವರು ಹೇಳಿದರು. 

ಬೆಳಿಗ್ಗೆ 6 ರಿಂದ 10 ಗಂಟೆ ನಡುವೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಉಳಿದಂತೆ ರಾಜ್ಯದಲ್ಲಿ ಎಂದಿನಂತೆ ಕರ್ಫ್ಯೂ ಮುಂದುವರೆಯಲಿದೆ.  ಗಾರ್ಮೆಂಟ್ಸ್ ನೌಕರರನ್ನು ಹೊರತುಪಡಿಸಿ, ಉತ್ಪಾದನಾ, ಕ್ಷೇತ್ರ, ಕೃಷಿ, ಕಟ್ಟಡ ವೈದ್ಯಕೀಯ ಚಟುವಟಿಕೆಗಳು ಮುಂದುವರೆಯುತ್ತದೆ. 

ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯರೆಗೂ ಕರ್ಫ್ಯೂ ಮುಂದುವರೆಯಲಿದೆ. ಈ ಸಂದರ್ಭದಲ್ಲಿ ಸಾರಿಗೆ ಸಂಚಾರ ಇರುವುದಿಲ್ಲ. ಸರಕು- ಸಾಗಾಣಿಕೆ ವಾಹನಗಳಿಗೆ ಮಾತ್ರ ಈ ಅವಧಿಯಲ್ಲಿ ವಿನಾಯಿತಿ ನೀಡಲಾಗಿದೆ. ತಾಲೂಕು ಅಧಿಕಾರಿಗಳು ಬಿಗಿ ಕ್ರಮ ಕೈಗೊಳ್ಳಲಾಗಬೇಕು ಎಂದ ಸಿಎಂ ರಾಜ್ಯಕ್ಕೆ ಆಕ್ಸಿಜನ್ 800 ಮೆಟ್ರಿಕ್ ಟನ್ ನೀಡಲು ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ ಎಂದು ಹೇಳಿದರು. 

  • Blogger Comments
  • Facebook Comments

0 comments:

Post a Comment

Item Reviewed: ಕೊರೋನಾ ಆರ್ಭಟ ನಿಯಂತ್ರಣಕ್ಕೆ ಕಠಿಣ ನಿರ್ಧಾರಕ್ಕೆ ಬಂದ ರಾಜ್ಯ ಸರಕಾರ : ಎಪ್ರಿಲ್ 27 ರಿಂದ 14 ದಿನ ಸಂಪೂರ್ಣ ಕಫ್ರ್ಯೂ ಘೋಷಿಸಿದ ಸಿಎಂ Rating: 5 Reviewed By: karavali Times
Scroll to Top