ಕೊರೊನಾವನ್ನು ಭ್ರಷ್ಟಾಚಾರಕ್ಕೆ ಬಳಸಿಕೊಂಡ ಬಿಜೆಪಿ ಸರಕಾರ ಇದೀಗ ಕೈ ಚೆಲ್ಲಿ ಕೂತಿದೆ : ಸರಕಾರದ ವೈಫಲ್ಯ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ - Karavali Times ಕೊರೊನಾವನ್ನು ಭ್ರಷ್ಟಾಚಾರಕ್ಕೆ ಬಳಸಿಕೊಂಡ ಬಿಜೆಪಿ ಸರಕಾರ ಇದೀಗ ಕೈ ಚೆಲ್ಲಿ ಕೂತಿದೆ : ಸರಕಾರದ ವೈಫಲ್ಯ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ - Karavali Times

728x90

19 April 2021

ಕೊರೊನಾವನ್ನು ಭ್ರಷ್ಟಾಚಾರಕ್ಕೆ ಬಳಸಿಕೊಂಡ ಬಿಜೆಪಿ ಸರಕಾರ ಇದೀಗ ಕೈ ಚೆಲ್ಲಿ ಕೂತಿದೆ : ಸರಕಾರದ ವೈಫಲ್ಯ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ


ಸಿಎಂ ಆಸ್ಪತ್ರೆಯಲ್ಲಿದ್ದರೆ, ರಾಜ್ಯ ಬಿಜೆಪಿ ಸರಕಾರ ಐಸಿಯುನಲ್ಲಿದೆ ಎಂದ ಸಿದ್ದು


ಬೆಂಗಳೂರು, ಎಪ್ರಿಲ್ 19, 2021 (ಕರಾವಳಿ ಟೈಮ್ಸ್) : ಕೊರೊನಾ ವೈರಸ್ ವೇಗ ನಿಯಂತ್ರಿಸುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದ್ದು, ಸಿಎಂ ಯಡಿಯೂರಪ್ಪ ಆಸ್ಪತ್ರೆಯಲ್ಲಿದ್ದರೆ, ರಾಜ್ಯ ಬಿಜೆಪಿ ಸರಕಾರ ಐಸಿಯುನಲ್ಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರಕಾರದ ವೈಫಲ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಮಾರಣಾಂತಿಕವಾಗುತ್ತಿದೆ. ಸೋಂಕು ಹರಡುವುದನ್ನು ತಡೆಯಲಿಕ್ಕಾಗದ ರಾಜ್ಯ ಬಿಜೆಪಿ ಸರಕಾರ ಜನತೆಯ ಮುಂದೆ ಬೆತ್ತಲಾಗುತ್ತಿದೆ. ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ವಿಫಲ ಪ್ರಯತ್ನದಲ್ಲಿ ತೊಡಗಿದೆ. ಕೊರೊನಾ ಸೋಂಕಿತರಿಗೆ ಸರಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ, ಖಾಸಗಿ ಆಸ್ಪತ್ರೆಗಳ ದುಬಾರಿ ಶುಲ್ಕ ತೆರುವ ಶಕ್ತಿ ಜನರಿಗಿಲ್ಲ. ಆಮ್ಲಜನಕದ ದಾಸ್ತಾನಿಲ್ಲ, ರೆಮಿಡಿಸಿವಿರ್ ನಂತಹ ಜೀವರಕ್ಷಕ ಔಷಧಿಯ ಕೊರತೆ ಇದೆ ಎಂದವರು ಕಿಡಿ ಕಾರಿದ್ದಾರೆ. 

ವರ್ಷದ ಹಿಂದೆ ಮೊದಲ ಬಾರಿ ಕೊರೊನಾ ದಾಳಿ ಮಾಡಿದಾಗ ಅದು ಅನಿರೀಕ್ಷಿತ ಆಘಾತ. ಒಂದು ವರ್ಷದ ಅನುಭವದಿಂದ ರಾಜ್ಯ ಸರಕಾರ ಕೊರೊನಾ ಎದುರಿಸಲು ತನ್ನನ್ನು ಇನ್ನಷ್ಟು ಸಜ್ಜುಗೊಳಿಸಬೇಕಾಗಿತ್ತು. ಆದರೆ ಕೊರೊನಾವನ್ನೂ ತನ್ನ ಭ್ರಷ್ಟತೆಗೆ ಬಳಸಿಕೊಂಡ ಬಿಜೆಪಿ ಸರಕಾರ ಇದೀಗ ಎಲ್ಲವೂ ಕೈ ಮೀರಿದ ಬಳಿಕ ಕೈಚೆಲ್ಲಿ ಕೂತಿದೆ ಎಂದು ಸರಕಾರದ ವಿರುದ್ದ ಹರಿಹಾಯ್ದಿದ್ದಾರೆ. 

ಬಿಜೆಪಿ ಸರಕಾರದ ಮಾರ್ಗಸೂಚಿಗಳನ್ನು ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರೇ ಬಹಿರಂಗವಾಗಿ ಉಲ್ಲಂಘಿಸುತ್ತಿದ್ದಾರೆ. ಸಿಎಂ ಅವರಿಗೆ ಸಚಿವರ ಮೇಲಾಗಲಿ, ಶಾಸಕರ ಮೇಲಾಗಲಿ ನಿಯಂತ್ರಣವೇ ಇಲ್ಲದಂತಾಗಿದ್ದು, ರಾಜ್ಯದಲ್ಲಿ ಉಂಟಾಗಿರುವ ಅರಾಜಕತೆಯೇ ಇಂದಿನ ದುಸ್ಥಿತಿಗೆ ಕಾರಣ ಎಂದು ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಯಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಕೊರೊನಾವನ್ನು ಭ್ರಷ್ಟಾಚಾರಕ್ಕೆ ಬಳಸಿಕೊಂಡ ಬಿಜೆಪಿ ಸರಕಾರ ಇದೀಗ ಕೈ ಚೆಲ್ಲಿ ಕೂತಿದೆ : ಸರಕಾರದ ವೈಫಲ್ಯ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ Rating: 5 Reviewed By: karavali Times
Scroll to Top