ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನ - Karavali Times ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನ - Karavali Times

728x90

26 May 2021

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನ


ಬೆಂಗಳೂರು, ಮೇ 26, 2021 (ಕರಾವಳಿ ಟೈಮ್ಸ್) :
ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ಎಚ್.ಎಸ್. ದೊರೆಸ್ವಾಮಿ (103) ಬುಧವಾರ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದೊರೆಸ್ವಾಮಿ ಅವರು ಬುಧವಾರ ಹೃದಯಾಘಾತದಿಂದ ನಿಧನರಾದರು. 


    ಕೊರೊನಾದಿಂದ ಗುಣಮುಖರಾದ 4 ದಿನದ ಬಳಿಕ ದೊರೆಸ್ವಾಮಿ ಅವರಿಗೆ ಮತ್ತೆ ಉಸಿರಾಟದ ತೊಂದರೆ ಎದುರಾದ ಹಿನ್ನೆಲೆಯಲ್ಲಿ 8 ದಿನದಿಂದ ನಗರದ ಜಯದೇವ ಆಸ್ಪತ್ರೆಯಲ್ಲಿ ಮತ್ತೆ ಚಿಕಿತ್ಸೆಗೊಳಗಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.


    ಪದೇ ಪದೇ ನನಗೆ ವಯಸ್ಸಾಗಿದೆ. ಆಸ್ಪತ್ರೆಗೆ ಬರಲ್ಲ, ನನ್ನ ಬೆಡ್ ಯುವಕರಿಗೆ ಉಪಯೋಗವಾಗಲಿ ಅಂತ ದೊರೆಸ್ವಾಮಿ ಈ ಹಿಂದೆ ಹೇಳಿದ್ದರು. ಈ ವೇಳೆ ಜಯದೇವ ವೈದ್ಯ ಡಾ ಮಂಜುನಾಥ್ ಅವರು, ಬೆಡ್ ಕೊರತೆ ಇಲ್ಲ ಅಂತ ಮನವೊಲಿಸಿ ಮತ್ತೆ ಉಸಿರಾಟದ ತೊಂದರೆ ಬಂದಾಗ ಆಸ್ಪತ್ರೆಗೆ ದಾಖಲು ಮಾಡಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನ Rating: 5 Reviewed By: karavali Times
Scroll to Top