ಐಟಿ ರಿಟರ್ನ್ ಸಲ್ಲಿಕೆ ಗಡುವು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿ ಕೇಂದ್ರ ಸರಕಾರ ಆದೇಶ  - Karavali Times ಐಟಿ ರಿಟರ್ನ್ ಸಲ್ಲಿಕೆ ಗಡುವು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿ ಕೇಂದ್ರ ಸರಕಾರ ಆದೇಶ  - Karavali Times

728x90

20 May 2021

ಐಟಿ ರಿಟರ್ನ್ ಸಲ್ಲಿಕೆ ಗಡುವು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿ ಕೇಂದ್ರ ಸರಕಾರ ಆದೇಶ 

 

 ನವದೆಹಲಿ, ಮೇ 20, 2021 (ಕರಾವಳಿ ಟೈಮ್ಸ್) : 2020-21ನೇ ಸಾಲಿನ ಹಣಕಾಸು ವರ್ಷದ ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ದಿನಾಂಕವನ್ನು ಕೇಂದ್ರ ಸರಕಾರ 2 ತಿಂಗಳ ಕಾಲ ವಿಸ್ತರಿಸಿದೆ. ಸೆಪ್ಟೆಂಬರ್ 30 ರವರೆಗೆ ಕಾಲಾವಾಧಿ ವಿಸ್ತರಿಸಿ ಸರಕಾರ ಆದೇಶಿಸಿದೆ. 

ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಕಂಪೆನಿಗಳಿಗೆ ಐಟಿಆರ್ ಸಲ್ಲಿಸುವ ಗಡುವನ್ನು ನವೆಂಬರ್ 30 ರವರೆಗೆ ವಿಸ್ತರಿಸಿದೆ. ಆದಾಯ ತೆರಿಗೆ ಕಾನೂನಿನ ಪ್ರಕಾರ, ಲೆಕ್ಕಪರಿಶೋಧನೆಯ ಅಗತ್ಯವಿಲ್ಲದ ಮತ್ತು ಸಾಮಾನ್ಯವಾಗಿ ಐಟಿಆರ್ -1 ಅಥವಾ ಐಟಿಆರ್ -4 ಬಳಸಿ ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ವ್ಯಕ್ತಿಗಳಿಗೆ ಐಟಿಆರ್ ಸಲ್ಲಿಸಲು ಅಂತಿಮ ದಿನಾಂಕ ಜುಲೈ 31 ಆಗಿತ್ತು. ಅದನ್ನು ಈಗ ಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. 

 ಕಂಪನಿಗಳು ಅಥವಾ ಸಂಸ್ಥೆಗಳ ತೆರಿಗೆ ಪಾವತಿದಾರರಿಗೆ ಆಡಿಟ್ ಮಾಡಬೇಕಾದ ಗಡುವು ಅಕ್ಟೋಬರ್ 31 ಆಗಿತ್ತು. ಅದನ್ನು ನವೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ. ತೀವ್ರವಾದ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ತೆರಿಗೆದಾರರಿಗೆ ರಿಲೀಫ್ ನೀಡಲು ಕೆಲವು ತೆರಿಗೆ ಅನುಸರಣೆಗಾಗಿ ಸಮಯ ಮಿತಿಗಳ ವಿಸ್ತರಣೆಯನ್ನು ನೀಡಲಾಗುತ್ತಿದೆ ಎಂದು ಸಿಬಿಡಿಟಿ ಸುತ್ತೋಲೆಯಲ್ಲಿ ತಿಳಿಸಿದೆ.

  • Blogger Comments
  • Facebook Comments

0 comments:

Post a Comment

Item Reviewed: ಐಟಿ ರಿಟರ್ನ್ ಸಲ್ಲಿಕೆ ಗಡುವು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿ ಕೇಂದ್ರ ಸರಕಾರ ಆದೇಶ  Rating: 5 Reviewed By: karavali Times
Scroll to Top