ಕೋವಿಡ್ 2ನೇ ಅಲೆ ಎಫೆಕ್ಟ್ : ಕರ್ನಾಟಕ ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ : ಪ್ರಥಮ ಪಿಯು ಪರೀಕ್ಷೆ ರದ್ದು, ವಿದ್ಯಾರ್ಥಿಗಳಿಗೆ ಪ್ರೊಮೋಷನ್ - Karavali Times ಕೋವಿಡ್ 2ನೇ ಅಲೆ ಎಫೆಕ್ಟ್ : ಕರ್ನಾಟಕ ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ : ಪ್ರಥಮ ಪಿಯು ಪರೀಕ್ಷೆ ರದ್ದು, ವಿದ್ಯಾರ್ಥಿಗಳಿಗೆ ಪ್ರೊಮೋಷನ್ - Karavali Times

728x90

4 May 2021

ಕೋವಿಡ್ 2ನೇ ಅಲೆ ಎಫೆಕ್ಟ್ : ಕರ್ನಾಟಕ ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ : ಪ್ರಥಮ ಪಿಯು ಪರೀಕ್ಷೆ ರದ್ದು, ವಿದ್ಯಾರ್ಥಿಗಳಿಗೆ ಪ್ರೊಮೋಷನ್


ಬೆಂಗಳೂರು, ಮೇ 04, 2021 (ಕರಾವಳಿ ಟೈಮ್ಸ್) : ಕೋವಿಡ್ 2ನೇ ಅಲೆ ವ್ಯಾಪಕತೆ ಹಿನ್ನಲೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮೇ 24 ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಿ ಆದೇಶಿಸಿದೆ. 

ಮಂಗಳವಾರ ವಿಧಾನಸೌಧದಲ್ಲಿ ಶಿಕ್ಷಣ ಇಲಾಖಾಧಿಕಾರಿಘಳೊಂದಿಗೆ ಚರ್ಚಿಸಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಸರಕಾರದ ಮುಂದಿನ ಆದೇಶದವರೆಗೂ ಪರೀಕ್ಷೆ ಮುಂದೂಡಿಕೆ ಮಾಡಲಾಗಿದ್ದು, ಮುಂದಿನ ದಿನಾಂಕಗಳನ್ನು ಪರೀಕ್ಷೆ ಆರಂಭಕ್ಕೆ 15-20 ದಿನಗಳ ಮುಂಚಿತವಾಗಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಸಚಿವರು ಮನವಿ ಮಾಡಿದ್ದಾರೆ.

ದ್ವಿತೀಯ ಪಿಯು ಪರೀಕ್ಷೆಗಳ ನಂತರ ನಡೆಸಲು ನಿರ್ಧರಿಸಲಾಗಿದ್ದ ಪ್ರಥಮ ಪಿಯು ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದು, ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಪ್ರೊಮೋಷನ್ ಮಾಡುವ ಬಗ್ಗೆಯೂ ಇದೇ ವೇಳೆ ನಿರ್ಧರಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದ ಮುನ್ನ ಬ್ರಿಡ್ಜ್ ಕೋರ್ಸ್ ಗಳನ್ನು ನಡೆಸಲಾಗುತ್ತದೆ. ಹಾಗೆಯೇ ಇಲಾಖೆಯ ಯೂ-ಟ್ಯೂಬ್ ಚಾನಲ್ ಮೂಲಕ ಈಗಿನಿಂದಲೇ ಈ ಬ್ರಿಡ್ಜ್ ಕೋರ್ಸ್ ಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದವರು ತಿಳಿಸಿದರು.

ಪರೀಕ್ಷೆಗಳನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುವಂತೆ ಉಪನ್ಯಾಸಕರು ವರ್ಕ್ ಫ್ರಂ ಹೋಂ ಕೆಲಸ ಮಾಡುವಂತೆ ಸೂಚಿಸಿರುವ ಸಚಿವರು, ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕ, ಇಲಾಖೆಯ ಪಠ್ಯ ಬೋಧನಾ ಕ್ರಮಗಳನ್ನು ಅವರೊಂದಿಗೆ ಚರ್ಚಿಸುವುದು ಸೇರಿದಂತೆ ಎಲ್ಲ ಆಡಳಿತಾತ್ಮಕ ಕ್ರಮಗಳಿಗೆ ಅವರು ಸದಾ ಲಭ್ಯವಾಗಬೇಕಿದೆ. ಹಾಗೆಯೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಉಪನ್ಯಾಸಕರು ತಮ್ಮ ಕೋವಿಡ್ ಜವಾಬ್ದಾರಿಗಳನ್ನು ಪೂರೈಸಬೇಕಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಮೇ 24 ರಿಂದ ಜೂ. 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಈ ಮೊದಲು ನಿರ್ಧರಿಸಲಾಗಿತ್ತು. ರಾಜ್ಯಾದ್ಯಂತ 1047 ಕೇಂದ್ರಗಳಲ್ಲಿನ 5562 ಕಾಲೇಜುಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು.

ಈ ಬಾರಿ 5,92,816 ಹೊಸ ವಿದ್ಯಾರ್ಥಿಗಳು, 76,422 ಪುನರಾವರ್ತಿತ ಅಭ್ಯಗಳು ಹಾಗೂ 17,470 ಖಾಸಗಿ ಅಭ್ಯರ್ಥಿಗಳು ಸೇರಿ 68,6708 ಅಭ್ಯರ್ಥಿಗಳು ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದರು. ಪ್ರಾಯೋಗಿಕ ಪರೀಕ್ಷೆಗಳನ್ನು ಈಗಾಗಲೇ ಮುಂದೂಡಲಾಗಿದೆ. ರಾಜ್ಯಾದ್ಯಂತ ಕೋವಿಡ್ ಎರಡನೇ ಅಲೆ ತೀವ್ರವಾಗುತ್ತಿರುವ ಹಿನ್ನಲೆಯಲ್ಲಿ ಪರೀಕ್ಷೆಗೆ ಸಹಕಾರ ನೀಡಬೇಕಿದ್ದ ಇಲಾಖೆಗಳು ಕೋವಿಡ್ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವುದು ಹಾಗೆಯೇ ಪರೀಕ್ಷೆ ತೆಗೆದುಕೊಳ್ಳಬೇಕಿದ್ದ ವಿದ್ಯಾರ್ಥಿಗಳು ತಮ್ಮ ತಮ್ಮ ಊರಿನಲ್ಲಿ ವಾಸ್ತವ್ಯ ಮಾಡಿರುವುದು, ವಿದ್ಯಾರ್ಥಿಗಳ ಮತ್ತು ಪೆÇೀಷಕರ ಮಾನಸಿಕ ಒತ್ತಡಗಳು ಸೇರಿದಂತೆ ಎಲ್ಲ ಆಯಾಮಗಳನ್ನು ಸಮಗ್ರವಾಗಿ ಚರ್ಚಿಸಿ ಪರೀಕ್ಷೆ ಮುಂದೂಡುವ ನಿರ್ಧಾರಕ್ಕೆ ಸರಕಾರ ಬಂದಿದೆ ಎನ್ನಲಾಗಿದೆ. 

ಸಿಬಿಎಸ್‍ಇ ಸಹಿತ ಕೇಂದ್ರ ಮಂಡಳಿ ಪರೀಕ್ಷೆಗಳು, ಅದೇ ರೀತಿ ಮಧ್ಯಪ್ರದೇಶ, ಜಾರ್ಖಂಡ್, ಮಹಾರಾಷ್ಟ್ರ, ತಮಿಳುನಾಡು, ಹಿಮಾಚಲ ಪ್ರದೇಶ, ಛತ್ತೀಸಗಡ, ರಾಜಸ್ಥಾನ, ಪಂಜಾಬ್ ಹಾಗೂ ತೆಲಂಗಾಣ ರಾಜ್ಯಗಳ 12ನೇ ತರಗತಿ ಮಂಡಳಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಪರೀಕ್ಷೆ ಮುಂದೂಡುವ ನಿರ್ಧಾರಕ್ಕೆ ಕರ್ನಾಟಕ ಸರಕಾರ ಕೂಡಾ ನಿರ್ಧರಿಸಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. 

ಸಚಿವರ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್, ಪಿಯು ಮಂಡಳಿ ನಿರ್ದೇಶಕಿ ಆರ್. ಸ್ನೇಹಲ್ ಮೊದಲಾದವರು ಭಾಗವಹಿಸಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಕೋವಿಡ್ 2ನೇ ಅಲೆ ಎಫೆಕ್ಟ್ : ಕರ್ನಾಟಕ ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ : ಪ್ರಥಮ ಪಿಯು ಪರೀಕ್ಷೆ ರದ್ದು, ವಿದ್ಯಾರ್ಥಿಗಳಿಗೆ ಪ್ರೊಮೋಷನ್ Rating: 5 Reviewed By: karavali Times
Scroll to Top