ಕೊರೋನಾ ಹೆಚ್ಚಳ ಹಿನ್ನಲೆ : ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿದ ಕರ್ನಾಟಕ ಸರಕಾರ - Karavali Times ಕೊರೋನಾ ಹೆಚ್ಚಳ ಹಿನ್ನಲೆ : ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿದ ಕರ್ನಾಟಕ ಸರಕಾರ - Karavali Times

728x90

13 May 2021

ಕೊರೋನಾ ಹೆಚ್ಚಳ ಹಿನ್ನಲೆ : ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿದ ಕರ್ನಾಟಕ ಸರಕಾರ

 ಬೆಂಗಳೂರು, ಮೇ 13, 2021 (ಕರಾವಳಿ ಟೈಮ್ಸ್) : ಜೂನ್ 21 ರಿಂದ ನಡೆಸಲು ನಿಗದಿಯಾಗಿದ್ದ ಎಸ್ಸೆಸ್ಸೆಲ್ಸಿ ಬೋರ್ಡ್ ಪರೀಕ್ಷೆಯನ್ನು  ಕೊರೊನಾ ವೈರಸ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರಕಾರ ಮುಂದೂಡಿದೆ.

ರಾಜ್ಯದಲ್ಲಿ ನಡೆಯ ಬೇಕಾಗಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯೊಂದಿಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಕೂಡ ಸರ್ಕಾರ ಮುಂದೂಡಿಕೆ ಮಾಡಿದೆ. ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬಂದ ನಂತರ ಮುಂದಿನ ದಿನಾಂಕ ಮರು ನಿಗದಿ ಮಾಡಲು ಶಿಕ್ಷಣ ಇಲಾಖೆ ನಿರ್ಧಾರ ಕೈಗೊಂಡಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು, ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ. ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್-19 ಎರಡನೇ ಅಲೆಯ ಪ್ರಸರಣ ಸಂಪೂರ್ಣ ಹತೋಟಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು, ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಕೊರೋನಾ ಹೆಚ್ಚಳ ಹಿನ್ನಲೆ : ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿದ ಕರ್ನಾಟಕ ಸರಕಾರ Rating: 5 Reviewed By: karavali Times
Scroll to Top