ರಾಜ್ಯದಲ್ಲಿ ಉತ್ಪಾದನೆ ಆಗುವ ಆಮ್ಲಜನಕ ರಾಜ್ಯದಲ್ಲೇ ಬಳಸಿಕೊಳ್ಳಲು ಅವಕಾಶ ನೀಡುವಂತೆ ಕೇಂದ್ರ ಸಚಿವರೊಂದಿಗೆ ಸಮಾಲೋಚನೆ : ಸಚಿವ ಜಗದೀಶ್ ಶೆಟ್ಟರ್ - Karavali Times ರಾಜ್ಯದಲ್ಲಿ ಉತ್ಪಾದನೆ ಆಗುವ ಆಮ್ಲಜನಕ ರಾಜ್ಯದಲ್ಲೇ ಬಳಸಿಕೊಳ್ಳಲು ಅವಕಾಶ ನೀಡುವಂತೆ ಕೇಂದ್ರ ಸಚಿವರೊಂದಿಗೆ ಸಮಾಲೋಚನೆ : ಸಚಿವ ಜಗದೀಶ್ ಶೆಟ್ಟರ್ - Karavali Times

728x90

5 May 2021

ರಾಜ್ಯದಲ್ಲಿ ಉತ್ಪಾದನೆ ಆಗುವ ಆಮ್ಲಜನಕ ರಾಜ್ಯದಲ್ಲೇ ಬಳಸಿಕೊಳ್ಳಲು ಅವಕಾಶ ನೀಡುವಂತೆ ಕೇಂದ್ರ ಸಚಿವರೊಂದಿಗೆ ಸಮಾಲೋಚನೆ : ಸಚಿವ ಜಗದೀಶ್ ಶೆಟ್ಟರ್

ಬೆಂಗಳೂರು, ಮೇ 05, 2021 (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವ ಆಮ್ಲಜನಕವನ್ನು ರಾಜ್ಯದಲ್ಲೇ ಬಳಸಿಕೊಳ್ಳಲು ಅನುಮತಿ ನೀಡುವಂತೆ ಕೇಂದ್ರ ಸಚಿವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಲಾಗಿದೆ. ಶೀಘ್ರದಲ್ಲೇ ಈ ಬಗ್ಗೆ ಅನುಮತಿ ದೊರೆಯಲಿದೆ ಎಂದು ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. 

ವಿಧಾನಸೌಧದಲ್ಲಿ ಬುಧವಾರ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದಲ್ಲಿ ಆಕ್ಸಿಜನ್ ಪೂರೈಕೆ ಮತ್ತು ಸರಬರಾಜು ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗಿನ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಮ್ಲಜನಕ ಉತ್ಪಾದನೆಯ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಬಳ್ಳಾರಿಯ ಜಿಂದಾಲ್‍ನಲ್ಲಿ ಈಗಾಗಲೇ ಉತ್ಪಾದನೆ ಹೆಚ್ಚಾಗಿದೆ. ಅಲ್ಲದೆ, ಕೇಂದ್ರ ಸರಕಾರ ಹೊರ ರಾಜ್ಯಗಳಿಂದ ಆಮ್ಲಜನಕ ಹಂಚಿಕೆಯನ್ನು ನೀಡಿದೆ. ಆದರೆ, ದೂರದ ರಾಜ್ಯಗಳಿಂದ ಆಮ್ಲಜನಕವನ್ನು ರಾಜ್ಯಕ್ಕೆ ತರಿಸಿಕೊಳ್ಳುವುದು ಬಹಳ ವಿಳಂಬವಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದಿಂದ ಬೇರೆ ರಾಜ್ಯಗಳಿಗೆ ಕಳುಹಿಸಲಾಗುತ್ತಿರುವ ಆಮ್ಲಜನಕದ ಪ್ರಮಾಣವನ್ನು ಕಡಿಮೆ ಮಾಡಿ ಅದನ್ನು ರಾಜ್ಯದಲ್ಲೇ ಬಳಸಿಕೊಳ್ಳಲು ಅವಕಾಶ ನೀಡುವಂತೆ ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಹಾಗೂ ಪ್ರಹ್ಲಾದ್ ಜೋಷಿ ಅವರೊಂದಿಗೆ ಸಮಾಲೋಚನೆ ನಡೆಸಿದ್ದೇನೆ. ಈ ಬಗ್ಗೆ ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶೆಟ್ಟರ್ ಹೇಳಿದರು. 

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಮ್ಲಜನಕ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಆಯಾ ಜಿಲ್ಲೆಗಳಿಗೆ ಅಗತ್ಯವಿರುವಷ್ಟು ಆಮ್ಲಜನಕ ಪೂರೈಕೆ ಸರಬರಾಜಿನಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಇದೇ ವೇಳೆ ಸಚಿವ ಶೆಟ್ಟರ್ ಸೂಚಿಸಿದರು. 

ರಾಜ್ಯದಲ್ಲಿ ಪ್ರಸ್ತುತ 170 ಆಮ್ಲಜನಕ ಸಾಗಾಣಿಕಾ ಟ್ಯಾಂಕರ್‍ಗಳು ಕಾರ್ಯನಿರ್ವಹಿಸುತ್ತಿವೆ. ಅದರಲ್ಲಿ 68 ಟ್ಯಾಂಕರ್‍ಗಳು ಬೇರೆ ರಾಜ್ಯಕ್ಕೆ ಪೂರೈಕೆ ಮಾಡುವ ಕಾರ್ಯದಲ್ಲಿವೆ. ರಾಜ್ಯಕ್ಕೆ ಇನ್ನಷ್ಟು ಟ್ಯಾಂಕರ್‍ಗಳ ಅವಶ್ಯಕತೆ ಇದ್ದು, ಇನ್ನೂ ಹೆಚ್ಚಿನ ಟ್ಯಾಂಕರ್‍ಗಳನ್ನು ಮಾರ್ಪಾಡಿಸುವ ಕಾರ್ಯವನ್ನು ಚುರುಕುಗೊಳಿಸುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿ ಸೂಚಿಸಿದರು. 

ದೂರದ ಓರಿಸ್ಸಾ ಹಾಗೂ ಇನ್ನಿತರೆ ರಾಜ್ಯಗಳಿಂದ ಆಮ್ಲಜನಕ ಸಾಗಾಣಿಕೆಯನ್ನು ಚುರುಕುಗೊಳಿಸಲು ಹಾಗೂ ಖರ್ಚನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರೈಲ್ವೇ ಟ್ಯಾಂಕರ್‍ಗಳ ಬಳಕೆ ಅವಶ್ಯಕ. ಈ ನಿಟ್ಟಿನಲ್ಲಿ 4 ಕಂಟೇನರ್‍ಗಳು ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಲಭಿಸಲಿದೆ. ಇವುಗಳ ಮೂಲಕ 80 ಎಂ.ಟಿ.ಯಷ್ಟು ಆಮ್ಲಜನಕ ರಾಜ್ಯಕ್ಕೆ ತರಬಹುದಾಗಿದೆ ಎಂದು ಜಗದೀಶ್ ಶೆಟ್ಟರ್ ಅಭಿಪ್ರಾಯಪಟ್ಟರು. 

ಬಹರೇನ್ ದೇಶದಿಂದ ಭಾರತಕ್ಕೆ ಭಾರತೀಯ ನೌಕಾ ಸೇನೆಯ ಹಡುಗುಗಳ ಮೂಲಕ 40 ಎಂ.ಟಿ ಆಮ್ಲಜನಕ ರಾಜ್ಯಕ್ಕೆ ಬರುತ್ತಿದೆ. ಇದಲ್ಲದೆ ಇತರೆ ರಾಜ್ಯಗಳಿಂದಲೂ ಹೆಚ್ಚುವರಿಯಾಗಿ 40 ಎಂ.ಟಿ.ಗಳಷ್ಟು ಆಮ್ಲಜನಕ ಬರಲಿದೆ ಎಂದ ಸಚಿವರು ಜಿಂದಾಲ್ ಮುಖ್ಯಸ್ಥರೊಂದಿಗೆ ಮಾತನಾಢಿದ್ದು ಸ್ಟೀಲ್ ಉತ್ಪಾದನೆಯನ್ನು ಕಡಿಮೆಗೊಳಿಸಿ ಆಮ್ಲಜನಕ ಉತ್ಪಾದನೆ ಹೆಚ್ಚಿಸುವಂತೆ ಸೂಚನೆ ನೀಡಿದ್ದೇವೆ. ಈ ನಿಟ್ಟಿನಲ್ಲಿ ಅವರು ಈಗಾಗಲೇ ಕಾರ್ಯಪ್ರಾರಂಭಿಸಿದ್ದು ರಾಜ್ಯಕ್ಕೆ ಹೆಚ್ಚಿನ ಆಮ್ಲಜನಕ ದೊರೆಯಲಿದೆ. ರಾಜ್ಯದಲ್ಲಿರುವ ಕಠಿಣ ಪರಿಸ್ಥಿತಿಯನ್ನು ಕೇಂದ್ರ ಸರಕಾರಕ್ಕೆ ವಿವರಿಸಿದ್ದು ಕೇಂದ್ರ ಸರಕಾರದಿಂದ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದರು. 

ಸಭೆಯಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರಾಜ್ ಕುಮಾರ್ ಖತ್ರಿ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣಾ, ಆಕ್ಸಿಜನ್ ಸರಬರಾಜು ಸಮಿತಿಯ ನೇತೃತ್ವ ವಹಿಸಿರುವ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ,  ಕೆಐಎಡಿಬಿ ಸಿಇಓ ಡಾ ಶಿವಶಂಕರ್, ಡ್ರಗ್ಸ್ ಕಂಟ್ರೋಲರ್ ಅಮರೇಶ್ ತುಬಗಿ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ ಮೊದಲಾದ ಅಧಿಕಾರಿಗಳು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ರಾಜ್ಯದಲ್ಲಿ ಉತ್ಪಾದನೆ ಆಗುವ ಆಮ್ಲಜನಕ ರಾಜ್ಯದಲ್ಲೇ ಬಳಸಿಕೊಳ್ಳಲು ಅವಕಾಶ ನೀಡುವಂತೆ ಕೇಂದ್ರ ಸಚಿವರೊಂದಿಗೆ ಸಮಾಲೋಚನೆ : ಸಚಿವ ಜಗದೀಶ್ ಶೆಟ್ಟರ್ Rating: 5 Reviewed By: karavali Times
Scroll to Top