ಬಂಟ್ವಾಳ : ಭಯೋತ್ಪಾದನಾ ವಿರೋಧಿ ದಿನಾಚರಣೆ - Karavali Times ಬಂಟ್ವಾಳ : ಭಯೋತ್ಪಾದನಾ ವಿರೋಧಿ ದಿನಾಚರಣೆ - Karavali Times

728x90

22 May 2021

ಬಂಟ್ವಾಳ : ಭಯೋತ್ಪಾದನಾ ವಿರೋಧಿ ದಿನಾಚರಣೆ

ಂಟ್ವಾಳ, ಮೇ 22, 2021 (ಕರಾವಳಿ ಟೈಮ್ಸ್) : ರಾಷ್ಟ್ರವ್ಯಾಪ್ತಿ ಭಯೋತ್ಪಾದನೆ ವಿರೋಧಿ ದಿನಾಚರಣೆ ಅಂಗವಾಗಿ ಶುಕ್ರವಾರ ಬಂಟ್ವಾಳ ತಾಲೂಕು ಕಚೇರಿ ಸಿಬ್ಬಂದಿಗಳಿಂದ ಮಿನಿ ವಿಧಾನಸೌಧದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಈ ಸಂದರ್ಭ ಮಾತನಾಡಿದ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ಅಣ್ಣು ನಾಯ್ಕ್, ನಮ್ಮ ದೇಶ ಶಾಂತಿ ಸೌಹಾರ್ದತೆಗೆ ಹೆಸರಾಗಿದೆ. ಭಯೋತ್ಪಾದಕ ಶಕ್ತಿಗಳನ್ನು ನಾವೆಲ್ಲರೂ ಒಗ್ಗಟ್ಟಿನಿಂದ ಎದುರಿಸಬೇಕು ಪರಸ್ಪರ ಸಹಕಾರದಿಂದ ಬದುಕಬೇಕು ಎಂದರು. ಈ ಸಂದರ್ಭ ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.
  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ಭಯೋತ್ಪಾದನಾ ವಿರೋಧಿ ದಿನಾಚರಣೆ Rating: 5 Reviewed By: karavali Times
Scroll to Top