ಬಿಪಿಎಲ್ ಕುಟುಂಬದ ದುಡಿಯುವ ವ್ಯಕ್ತಿ ಕೋವಿಡ್ ಸೋಂಕಿನಿಂದ ಮೃತಪಟ್ಟರೆ ಕುಟುಂಬಕ್ಕೆ 1 ಲಕ್ಷ ಪರಿಹಾರ : ಸಿಎಂ ಯಡಿಯೂರಪ್ಪ ಘೋಷಣೆ - Karavali Times ಬಿಪಿಎಲ್ ಕುಟುಂಬದ ದುಡಿಯುವ ವ್ಯಕ್ತಿ ಕೋವಿಡ್ ಸೋಂಕಿನಿಂದ ಮೃತಪಟ್ಟರೆ ಕುಟುಂಬಕ್ಕೆ 1 ಲಕ್ಷ ಪರಿಹಾರ : ಸಿಎಂ ಯಡಿಯೂರಪ್ಪ ಘೋಷಣೆ - Karavali Times

728x90

14 June 2021

ಬಿಪಿಎಲ್ ಕುಟುಂಬದ ದುಡಿಯುವ ವ್ಯಕ್ತಿ ಕೋವಿಡ್ ಸೋಂಕಿನಿಂದ ಮೃತಪಟ್ಟರೆ ಕುಟುಂಬಕ್ಕೆ 1 ಲಕ್ಷ ಪರಿಹಾರ : ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು, ಜೂನ್ 14, 2021 (ಕರಾವಳಿ ಟೈಮ್ಸ್) : ಕೋವಿಡ್-19 ಸೋಂಕಿಗೆ ತುತ್ತಾಗಿ ಬಿಪಿಎಲ್ ಕುಟುಂಬಕ್ಕೆ ಸೇರಿದ ಹಿರಿಯ ಅಂದರೆ ದುಡಿಯುವ ವ್ಯಕ್ತಿ ಮೃತಪಟ್ಟರೆ ಸರಕಾರದ ವತಿಯಿಂದ 1 ಲಕ್ಷ ರೂಪಾಯಿ ವಿಶೇಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಘೋಷಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಕೊರೊನಾ ಸೋಂಕಿನಿಂದ ಮೃತಪಟ್ಟು ಹಲವಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಕೆಲ ಕುಟುಂಬಗಳು ಬೀದಿಪಾಲಾಗಿವೆ. ಇದನ್ನು ಮನಗಂಡು ಬಿಪಿಎಲ್ ಕುಟುಂಬದಲ್ಲಿ ಕೊರೊನಾದಿಂದ ವಯಸ್ಕರು ಅಥವಾ ದುಡಿಯುವ ವ್ಯಕ್ತಿ ಮೃತಪಟ್ಟರೆ ಅಂತಹ ಕುಟುಂಬದ ಒಬ್ಬರಿಗೆ ಸೀಮಿತಗೊಂಡು ಒಂದು ಲಕ್ಷ ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಸರಕಾರ 250-300 ಕೋಟಿ ರೂಪಾಯಿ ವ್ಯಯಿಸಲಿದೆ ಎಂದರು.

ಕೊರೋನಾ ಸಂಬಂಧಿಸಿ ದೇಶದಲ್ಲಿಯೇ ನಮ್ಮ ಸರಕಾರ ಮೊತ್ತ ಮೊದಲನೆಯದಾಗಿ ಈ ಪರಿಹಾರ ಘೋಷಣೆ ಮಾಡುತ್ತಿದೆ ಎಂದು ಸಿಎಂ ಇದೇ ವೇಳೆ ಹೇಳಿದರು. 

  • Blogger Comments
  • Facebook Comments

0 comments:

Post a Comment

Item Reviewed: ಬಿಪಿಎಲ್ ಕುಟುಂಬದ ದುಡಿಯುವ ವ್ಯಕ್ತಿ ಕೋವಿಡ್ ಸೋಂಕಿನಿಂದ ಮೃತಪಟ್ಟರೆ ಕುಟುಂಬಕ್ಕೆ 1 ಲಕ್ಷ ಪರಿಹಾರ : ಸಿಎಂ ಯಡಿಯೂರಪ್ಪ ಘೋಷಣೆ Rating: 5 Reviewed By: karavali Times
Scroll to Top