ಜೂನ್ 3 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ : ಮುಂದಿನ 5 ದಿನ ಭಾರೀ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ - Karavali Times ಜೂನ್ 3 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ : ಮುಂದಿನ 5 ದಿನ ಭಾರೀ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ - Karavali Times

728x90

2 June 2021

ಜೂನ್ 3 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ : ಮುಂದಿನ 5 ದಿನ ಭಾರೀ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು, ಜೂನ್ 02, 2021 (ಕರಾವಳಿ ಟೈಮ್ಸ್) : ರಾಜ್ಯಕ್ಕೆ ಗುರುವಾರ (ಜೂನ್ 3) ಮುಂಗಾರು ಪ್ರವೇಶ ಮಾಡಲಿದ್ದು, ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಎಚ್ವರಿಸಿದೆ.

ಪೂರ್ವ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನಲೆಯಲ್ಲಿ ಕರ್ನಾಟಕ ಹಾಗೂ ಕೇರಳ ಕರಾವಳಿ ತೀರಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಚಿತ್ರದುರ್ಗ, ಕೊಡಗು, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ, ಬಿಜಾಪುರ, ಕಲಬುರ್ಗಿ, ಬೀದರ್, ಬಾಗಲಕೋಟೆ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಎಚ್ಚರಿಸಿರುವ ಹವಾಮಾನ ಇಲಾಖೆ ಎಲ್ಲೋ ಎಲರ್ಟ್ ಘೋಷಿಸಿದೆ.

ಮೇಲಿನ ಜಿಲ್ಲೆಗಳಲ್ಲದೆ ಬೆಂಗಳೂರಿನ ಹಲವೆಡೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖಾ ನಿರ್ದೇಶಕ ಚೆನ್ನಬಸವನಗೌಡ ಪಾಟೀಲ್ ಎಚ್ಚರಿಸಿದ್ದಾರೆ

  • Blogger Comments
  • Facebook Comments

0 comments:

Post a Comment

Item Reviewed: ಜೂನ್ 3 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ : ಮುಂದಿನ 5 ದಿನ ಭಾರೀ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ Rating: 5 Reviewed By: lk
Scroll to Top