ಈ ಬಾರಿ ಬೇಸಿಗೆ ರಜೆಯಲ್ಲಿ ಕುಕ್ಕಿಂಗ್ ಕಾಸ್ಟ್ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆಗೆ ಶಿಕ್ಷಣ ಇಲಾಖೆ ಕ್ರಮ - Karavali Times ಈ ಬಾರಿ ಬೇಸಿಗೆ ರಜೆಯಲ್ಲಿ ಕುಕ್ಕಿಂಗ್ ಕಾಸ್ಟ್ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆಗೆ ಶಿಕ್ಷಣ ಇಲಾಖೆ ಕ್ರಮ - Karavali Times

728x90

15 July 2021

ಈ ಬಾರಿ ಬೇಸಿಗೆ ರಜೆಯಲ್ಲಿ ಕುಕ್ಕಿಂಗ್ ಕಾಸ್ಟ್ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆಗೆ ಶಿಕ್ಷಣ ಇಲಾಖೆ ಕ್ರಮ

ಬೆಂಗಳೂರು ಜುಲೈ 15, 2021 (ಕರಾವಳಿ ಟೈಮ್ಸ್) :  ರಾಜ್ಯದ 1 ರಿಂದ 8ನೇ ತರಗತಿವರೆಗಿನ ಸರಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ 2021ರ ಮೇ ಮತ್ತು ಜೂನ್ ತಿಂಗಳ ಬೇಸಿಗೆ ರಜೆಯ ಆಹಾರ ಭದ್ರತಾ ಭತ್ಯೆಯ ಪರಿವರ್ತನಾ ವೆಚ್ಚವನ್ನು (ಕುಕಿಂಗ್ ಕಾಸ್ಟ್) ನಗದು ರೂಪದಲ್ಲಿ ನೀಡಲು ಈ ಬಾರಿ ಸರಕಾರ ನಿರ್ಧರಿಸಿದೆ.

ಈ ಸಂಬಂಧ ನಗದನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ನೇರ ವರ್ಗಾವಣೆಗೆ ತೀರ್ಮಾನಿಸಲಾಗಿದ್ದು, ಸಂಬಂಧಿಸಿದ ಎಲ್ಲ ಮಕ್ಕಳ ಬ್ಯಾಂಕ್ ಖಾತೆಗಳ ಮಾಹಿತಿ ಸಂಗ್ರಹಿಸಿ ನೀಡುವಂತೆ ರಾಜ್ಯದ ಎಲ್ಲಾ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಇಲಾಖೆಯ ಆಯುಕ್ತ ವಿ. ಅನ್ಬುಕುಮಾರ್ ಸೂಚನೆ ನೀಡಿದ್ದಾರೆ.

ಕಳೆದ ವರ್ಷ ಕೋವಿಡ್ ಹಿನ್ನಲೆಯಲ್ಲಿ ಶಾಲೆಗಳು ಭೌತಿಕವಾಗಿ ನಡೆಯದ ಕಾರಣ ಮಧ್ಯಾಹ್ನದ ಬಿಸಿಯೂಟ ಯೋಜನೆ ಸ್ಥಗಿತವಾಗಿತ್ತು. ಇದಕ್ಕೆ ಪರ್ಯಾಯವಾಗಿ ಆಹಾರ ಧಾನ್ಯಗಳನ್ನು ಮಕ್ಕಳ ಮನೆ ಬಾಗಿಲಿಗೇ ಇಲಾಖೆ ತಲುಪಿಸಿತ್ತು. ಅದೇ ರೀತಿ ಪ್ರತೀ ವರ್ಷ ಬೇಸಿಗೆ ರಜೆ ಅವಧಿಯಲ್ಲೂ ಮಕ್ಕಳಿಗೆ ಬಿಸಿಯೂಟ ನೀಡಲಾಗಿತ್ತು.

ಆದರೆ, ಈ ಬಾರಿ ಕೇಂದ್ರ ಸರಕಾರದ ಕೋವಿಡ್ ಸಂದರ್ಭದಲ್ಲಿ ಪ್ರತಿ ಕುಟುಂಬಗಳಿಗೂ ಹೆಚ್ಚುವರಿ ಪಡಿತರ ನೀಡಿದ್ದರಿಂದ ಬೇಸಿಗೆ ಅವಧಿಯ ಬಿಸಿಯೂಟ ನೀಡಬೇಕಿಲ್ಲ ಎಂದು ಆದೇಶಿಸಿದ್ದು, ಕೇವಲ ಆಹಾರ ತಯಾರಿಕಾ ವೆಚ್ಚ (ಕುಕಿಂಗ್ ಕಾಸ್ಟ್) ನೀಡಲು ಆದೇಶಿಸಿತ್ತು. ಅದರಂತೆ, 1 ರಿಂದ 5ನೇ ತರಗತಿವರೆಗಿನ ಪ್ರತಿ ಮಗುವಿಗೆ ದಿನಕ್ಕೆ 5.70 ರೂಪಾಯಿ, 6 ರಿಂದ 8ನೇ ತರಗತಿವರೆಗಿನ ಮಕ್ಕಳಿಗೆ 6.40 ರೂಪಾಯಿಯಂತೆ ಒಟ್ಟು ಮೇ ಮತ್ತು ಜೂನ್ ತಿಂಗಳಿಗೆ ಸುಮಾರು 300 ರಿಂದ 400 ರೂಪಾಯಿಯಷ್ಟು ಆಹಾರ ತಯಾರಿಕಾ ಪರಿವರ್ತನಾ ವೆಚ್ಚವನ್ನು ನೀಡಲಾಗುವುದು. ಇದಕ್ಕಾಗಿ 1 ರಿಂದ 8ನೇ ತರಗತಿವರೆಗಿನ ಎಲ್ಲ ಮಕ್ಕಳ ಬ್ಯಾಂಕ್ ಖಾತೆಗಳ ಮಾಹಿತಿ ನೀಡಲು ಸೂಚಿಸಲಾಗಿದೆ ಎಂದು ಶಿಕ್ಷಣ ಆಯುಕ್ತರು ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಈ ಬಾರಿ ಬೇಸಿಗೆ ರಜೆಯಲ್ಲಿ ಕುಕ್ಕಿಂಗ್ ಕಾಸ್ಟ್ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆಗೆ ಶಿಕ್ಷಣ ಇಲಾಖೆ ಕ್ರಮ Rating: 5 Reviewed By: karavali Times
Scroll to Top