ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ - Karavali Times ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ - Karavali Times

728x90

11 July 2021

ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ

ಬಂಟ್ವಾಳ, ಜುಲೈ 11, 2021 (ಕರಾವಳಿ ಟೈಮ್ಸ್) : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕಿನ ನಾವೂರು ಯಶಸ್ವಿ ಜ್ಞಾನವಿಕಾಸ  ಕೇಂದ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ಹಾಗೂ ಕೋವಿಡ್-19 ತಡೆಗಟ್ಟುವ ಸಲುವಾಗಿ ವ್ಯಾಕ್ಸಿನ್ ತೆಗೆದುಕೊಳ್ಳುವ ಮಹತ್ವದ ಬಗ್ಗೆ ಮಾಹಿತಿ ಕಾರ್ಯಾಗಾರ ಇಲ್ಲಿನ ಸರಕಾರಿ ಆರೋಗ್ಯ ಕೇಂದ್ರದಲ್ಲಿ ಭಾನುವಾರ ನಡೆಯಿತು. 

ಆರೋಗ್ಯ ಕಾರ್ಯಕರ್ತೆ ಮೀನಾಕ್ಷಿ ಮಾಹಿತಿ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಸಪ್ನಾ ಜೈನ್ ರೋಗ ನಿರೋಧಕ ಶಕ್ತಿ ಹೆಚ್ಚಿಸುವಂತಹ ಆಹಾರ ಕ್ರಮದ ಬಗ್ಗೆ ಹಾಗೂ ಡೆಂಗ್ಯೂ ಜ್ವರದ ಬಗ್ಗೆ ಹಾಗೂ ವ್ಯಾಕ್ಸಿನೇಷನ್ ಪಡೆದುಕೊಳ್ಳದವರು ಆದಷ್ಟು ಬೇಗ ವ್ಯಾಕ್ಸಿನೇಷನ್ ಪಡೆದುಕೊಂಡು ತಮ್ಮ ಹಾಗೂ ತಮ್ಮ ಕುಟುಂಬದ  ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಮಾಹಿತಿ ನೀಡಿದರು. 

ಯಶಸ್ವಿ ಜ್ಞಾನವಿಕಾಸ ಕೇಂದ್ರದ ಅಧ್ಯಕ್ಷೆ ಪೂವಮ್ಮ ಶುಭ ಹಾರೈಸಿದರು. ಕೇಂದ್ರದ ಸದಸ್ಯರಾದ ಇಂದಿರಾ ಸ್ವಾಗತಿಸಿ, ಸುಶೀಲತ ವಂದಿಸಿದರು. ಕೇಂದ್ರದ ಸೇವಾ ಪ್ರತಿನಿಧಿ ವಿಜಯ ಕಾರ್ಯಕ್ರಮ ನಿರೂಪಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ Rating: 5 Reviewed By: karavali Times
Scroll to Top