ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ : ಪ್ರಧಾನಿ ಭಾಷಣದಲ್ಲಿ ಹಲವು ಘೋಷಣೆಗಳು - Karavali Times ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ : ಪ್ರಧಾನಿ ಭಾಷಣದಲ್ಲಿ ಹಲವು ಘೋಷಣೆಗಳು - Karavali Times

728x90

15 August 2021

ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ : ಪ್ರಧಾನಿ ಭಾಷಣದಲ್ಲಿ ಹಲವು ಘೋಷಣೆಗಳು

ನವದೆಹಲಿ, ಆಗಸ್ಟ್ 15, 2021 (ಕರಾವಳಿ ಟೈಮ್ಸ್) : ಪ್ರಧಾನಿ ನರೇಂದ್ರ ಮೋದಿ ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪುಕೋಟೆ ಮೇಲೆ ಭಾನುವಾರ ಧ್ವಜಾರೋಹಣ ನೆರವೇರಿಸಿದರು. 

ಪ್ರಧಾನಿಗಳು ತಮ್ಮ ಭಾಷಣದಲ್ಲಿ ಹಲವು ಘೋಷಣೆಗಳನ್ನು ಮಾಡಿದ್ದಾರೆ. ನಮ್ಮ ದೇಶದ ಬಹುದೊಡ್ಡ ಗುರಿಯೆಂದರೆ ಅದು ಹಸಿರು ಹೈಡ್ರೋಜನ್ ಕ್ಷೇತ್ರದಲ್ಲಿ ಅಗತ್ಯ ಅಭಿವೃದ್ಧಿ ಕಾಣುವುದು. ಇಂದು ಈ ತ್ರಿವರ್ಣ ಧ್ವಜದ ಬೆಳಕಿನಡಿಯಲ್ಲಿ ನಾನು ರಾಷ್ಟ್ರೀಯ ಹೈಡ್ರೋಜನ್ ಮಿಷನ್ ಘೋಷಿಸುತ್ತಿದ್ದೇನೆಂದು ಎಂದರು. 

ಮಿಜೊರಾಮ್‍ನಲ್ಲಿ ಎರಡುವರೆ ವರ್ಷಗಳ ಹಿಂದೆ ಸೈನಿಕ ಶಾಲೆಗಳಲ್ಲಿ ಬಾಲಕಿಯರಿಗೆ ಪ್ರವೇಶ ನೀಡುವ ಪ್ರಯೋಗವನ್ನು ಉಲ್ಲೇಖಿಸಿದ ಪ್ರಧಾನಿ ಎಲ್ಲಾ ಸೈನಿಕ ಶಾಲೆಗಳಲ್ಲಿಯೂ ಬಾಲಕಿ/ ಯುವತಿಯರಿಗೆ ಪ್ರವೇಶ ಲಭ್ಯವಿರಲಿದೆ ಎಂದು ಘೋಷಣೆ ಮಾಡಿದರು. 

ಭಾರತ ಸರಕಾರವು ಇ-ಕಾಮರ್ಸ್ ಪ್ಲಾಟ್‍ಫಾರ್ಮ್ ಶುರು ಮಾಡಲಿದ್ದು, ಹಳ್ಳಿಯ ಕರಕುಶಲಗಾರರಿಗೆ ಜಗತ್ತಿನೊಂದಿಗೆ ಸಂಪರ್ಕ ಕಲ್ಪಿಸಲು ಸಹಕಾರಿಯಾಗಲಿದೆ ಎಂದರು. ಭಾರತ ಸರಕಾರವು ಇ-ಕಾಮರ್ಸ್ ಪ್ಲಾಟ್‍ಫಾರ್ಮ್ ಶುರು ಮಾಡಲಿದ್ದು, ಹಳ್ಳಿಯ ಕರಕುಶಲಗಾರರಿಗೆ ಜಗತ್ತಿನೊಂದಿಗೆ ಸಂಪರ್ಕ ಕಲ್ಪಿಸಲು ಸಹಕಾರಿಯಾಗಲಿದೆ. ಹಳ್ಳಿಯ ಅಭಿವೃದ್ಧಿ ಪಥವು ಹೊಸ ಆಯಾಮವನ್ನು ಪಡೆಯುತ್ತಿದೆ. ಹಳ್ಳಿಗಳಲ್ಲಿ ವಿದ್ಯುತ್ ಮತ್ತು ನೀರಿನ ಸಂಪರ್ಕ ಮಾತ್ರವೇ ಇಲ್ಲ, ಡಿಜಿಟಲ್ ಉದ್ಯಮಿಗಳೂ ರೂಪುಗೊಳ್ಳುತ್ತಿದ್ದಾರೆಂದು ತಿಳಿಸಿದರು.

ಮುಂದಿನ 25 ವರ್ಷಗಳಲ್ಲಿ ಭಾರತ ಸ್ವಾತಂತ್ರ್ಯ ಶತಮಾನೋತ್ಸವ ಆಚರಿಸಲಾಗುತ್ತದೆ. ಅಲ್ಲಿಯವರೆಗೆ ನಮ್ಮ ಗುರಿ ಭಾರತದ ನಿರ್ಮಾಣ ಆಗಿರಬೇಕು. ಯಾವ ರಾಷ್ಟ್ರಕ್ಕೂ ನಾವು ಕಡಿಮೆ ಇಲ್ಲ ಎನ್ನುವಂತೆ ಬೆಳೆಯಬೇಕು. ನಮ್ಮ ಎಲ್ಲಾ ಗುರಿಗಳ ಸಾಧನೆಗೆ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಮತ್ತು ಸಬ್ ಕಾ ಪ್ರಯಾಸ್ ಬಹಳ ಮುಖ್ಯವಾಗಿದೆ. 

ಮುಂದಿನ ದಿನಗಳಲ್ಲಿ, ಪ್ರಧಾನಿ ಗತಿ ಶಕ್ತಿ ಯೋಜನೆಯನ್ನು ಪ್ರಾರಂಭಿಸುತ್ತೇವೆ, 100 ಲಕ್ಷ ಕೋಟಿ ರಾಷ್ಟ್ರೀಯ ಮೂಲ ಸೌಕರ್ಯ ಮಾಸ್ಟರ್ ಪ್ಲಾನ್ ಇದಾಗಿದ್ದು, ಈ ಯೋಜನೆ ಸಮಗ್ರ ಮೂಲ ಸೌಕರ್ಯಕ್ಕೆ ಅಡಿಪಾಯವನ್ನು ನೀಡಲಿದೆ ಮತ್ತು ನಮ್ಮ ಆರ್ಥಿಕತೆಗೆ ಸಮಗ್ರ ಮಾರ್ಗವನ್ನು ನೀಡುತ್ತದೆ ಎಂದರು. 

ದೇಶದ 75ನೇ ಸ್ವಾತಂತ್ರೋತ್ಸವದ 75 ವಾರಗಳ ಆಚರಣೆಗೆ ಪಣತೊಟ್ಟಿದ್ದೇವೆ. 2021ರ ಮಾರ್ಚ್ 12 ರಿಂದ 2023ರ ಆಗಸ್ಟ್ 15ರವರೆಗೂ ‘ಅಮೃತ ಮಹೋತ್ಸವ’ ನಡೆಯಲಿದೆ. ಭಾರತೀಯ ರೈಲ್ವೆ ಸಹ ದೇಶದ ಜೊತೆಗೆ ಮಹತ್ತರ ಪರಿವರ್ತನೆಯನ್ನು ಕಂಡಿದೆ. 75 ವಂದೇ ಭಾರತ್ ರೈಲುಗಳು ಸ್ವಾತಂತ್ರ್ಯದ ಅಮೃತ್ ಮಹೋತ್ಸವದ ಹಿನ್ನೆಲೆಯಲ್ಲಿ 75 ವಾರಗಳಲ್ಲಿ ಭಾರತದ ಮೂಲೆ ಮೂಲೆಯನ್ನು ಸಂಪರ್ಕಿಸಲಿದೆ ಎಂದು ಪ್ರಧಾನಿ ತಿಳಿಸಿದರು. 

2030 ಹೊತ್ತಿಗೆ ರೈಲ್ವೆಯಲ್ಲಿ ಶೂನ್ಯ ಮಾಲಿನ್ಯ ನಿರ್ಮಾಣ ಮಾಡಲು ಪಣ ತೊಡಲಾಗಿದೆ. ನ್ಯಾಷನಲ್ ಹೈಡ್ರೋಜನ್ ಘೋಷಣೆ ಮಾಡುತ್ತಿದ್ದೇನೆ. ಈ ತ್ರಿವರ್ಣ ಧ್ವಜ ಸಾಕ್ಷಿಯಾಗಿಟ್ಟು ಘೋಷಣೆ ಮಾಡುತ್ತಿದ್ದೇನೆ. ಭಾರತವನ್ನು ಹೈಡ್ರೋಜನ್ ರಫ್ತು ಮಾಡುವ ಹಬ್ ಮಾಡಲಾಗುತ್ತದೆ ಎಂದರು. 

ಸಬ್‍ಕಾ ಸಾತ್ ಸಬ್‍ಕಾ ವಿಕಾಸ್ ಸಬ್‍ಕಾ ವಿಶ್ವಾಸ್‍ನಲ್ಲಿ ನಾವೆಲ್ಲರೂ ನಂಬಿಕೆ ಇಟ್ಟಿದ್ದೇವೆ. ನಮ್ಮ ಎಲ್ಲರ ಗುರಿಯನ್ನು ಸಾಧಿಸಲು ‘ಸಬ್‍ಕಾ ಸಾತ್ ಸಬ್‍ಕಾ ವಿಕಾಸ್, ಸಬ್‍ಕಾ ವಿಶ್ವಾಸ್ ಮತ್ತು ಸಬ್‍ಕಾ ಪ್ರಯಾಸ್ ಎಲ್ಲರ ಜೊತೆ, ಎಲ್ಲರ ಏಳಿಗೆಗೆ ಎಲ್ಲರ ಪ್ರಯತ್ನಅತ್ಯಗತ್ಯವಾಗಿದೆ ಎಂದು ನಾನು ಈಗ ಘೋಷಣೆ ಮಾಡುತ್ತಿದ್ದೇನೆಂದು ಪ್ರಧಾನಿ ತಿಳಿಸಿದರು. 

ಬಡವರಿಗೆ ಪೌಷ್ಟಿಕಾಂಶಯುಕ್ತ ಅಕ್ಕಿಯನ್ನು ಸರಕಾರ ನೀಡಲಿದೆ. ಪಡಿತರ ಅಂಗಡಿಯಲ್ಲಿ ಸಿಗುವ ಅಕ್ಕಿ ಇರಲಿ, ಮಧ್ಯಾಹ್ನ ಊಟಕ್ಕೆ ಲಭ್ಯವಾಗುವ ಅಕ್ಕಿ ಇರಲಿ, ಪ್ರತಿ ಯೋಜನೆಯಿಂದ ಲಭ್ಯವಾಗುವ ಅಕ್ಕಿಯ ಗುಣಮಟ್ಟವನ್ನೂ 2024ರ ವೇಳೆಗೆ ಹೆಚ್ಚಿಸಲಾಗುವುದು ಎಂದು ಪ್ರಧಾನಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ : ಪ್ರಧಾನಿ ಭಾಷಣದಲ್ಲಿ ಹಲವು ಘೋಷಣೆಗಳು Rating: 5 Reviewed By: karavali Times
Scroll to Top