ಜ 7 ರಂದು ಪಾಣೆಮಂಗಳೂರಿನಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಾವೇಶ ಹಾಗೂ ಪದಾಧಿಕಾರಿಗಳ ಪದಗ್ರಹಣ - Karavali Times ಜ 7 ರಂದು ಪಾಣೆಮಂಗಳೂರಿನಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಾವೇಶ ಹಾಗೂ ಪದಾಧಿಕಾರಿಗಳ ಪದಗ್ರಹಣ - Karavali Times

728x90

5 January 2022

ಜ 7 ರಂದು ಪಾಣೆಮಂಗಳೂರಿನಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಾವೇಶ ಹಾಗೂ ಪದಾಧಿಕಾರಿಗಳ ಪದಗ್ರಹಣ

ಸಭಾಂಗಣದ ಒಳಭಾಗದಲ್ಲಿ ಕೋವಿಡ್ ಶಿಷ್ಟಾಚಾರ ಪಾಲಿಸಿ ಸಮಾವೇಶ ಎಂದ ಕೈ ನಾಯಕರುಬಂಟ್ವಾಳ, ಜನವರಿ 05, 2022 (ಕರಾವಳಿ ಟೈಮ್ಸ್) : ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಅಲ್ಪಸಂಖ್ಯಾತರ ಸಮಾವೇಶ ಹಾಗೂ ಅಲ್ಪಸಂಖ್ಯಾತ ಘಟಕದ ಬ್ಲಾಕ್ ಅಧ್ಯಕ್ಷರುಗಳ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜನವರಿ 7 ರಂದು ಶುಕ್ರವಾರ ಅಪರಾಹ್ನ 2.30ಕ್ಕೆ ಪಾಣೆಮಂಗಳೂರು ಸಾಗರ್ ಅಡಿಟೋರಿಯಂನಲ್ಲಿ ನಡೆಯಲಿದೆ ಎಂದು ಜಿ ಪಂ ಮಾಜಿ ಸದಸ್ಯ ಎಂ ಎಸ್ ಮುಹಮ್ಮದ್ ತಿಳಿಸಿದರು. 

ಬುಧವಾರ ಬಿ ಸಿ ರೋಡಿನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಸಚಿವ ಬಿ ರಮಾನಾಥ ರೈ ಸಮಾವೇಶ ಉದ್ಘಾಟಿಸಲಿದ್ದು, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಕೆ ಕೆ ಶಾಹುಲ್ ಹಮೀದ್ ಅಧ್ಯಕ್ಷತೆ ವಹಿಸುವರು. ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಕೇರಳ-ಕಲ್ಪೆಟ್ಟ ಶಾಸಕ ಅಡ್ವಕೇಟ್ ಟಿ ಸಿದ್ದೀಕ್ ಮುಖ್ಯ ಭಾಷಣಗೈಯುವರು. ಇದೇ ವೇಳೆ ಪದ್ಮಶ್ರೀ ಪ್ರಶಸ್ತಿ ಪುರಸ್ಕøತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಲಾಗುವುದು.

ವಿಧಾನ ಪರಿಷತ್ ಸದಸ್ಯರುಗಳಾದ ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ಮಾಜಿ ಸದಸ್ಯ ಐವನ್ ಡಿ’ಸೋಜ, ಎಐಸಿಸಿ ಕಾರ್ಯದರ್ಶಿ ಪಿ ವಿ ಮೋಹನ್ ಭಾಗವಹಿಸುವರು. ಅತಿಥಿಗಳಾಗಿ ನಿವೃತ್ತ ಪೊಲೀಸ್ ಅಧಿಕಾರಿ ಜಿ ಎ ಬಾವಾ, ಜಿ ಪಂ ಮಾಜಿ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ ಎಸ್ ಮುಹಮ್ಮದ್, ಬಿ ಪದ್ಮಶೇಖರ ಜೈನ್, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯ ಪಿಯೂಸ್ ಎಲ್ ರೋಡ್ರಿಗಸ್, ರಾಜ್ಯ ಗೇರು ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಹಾಜಿ ಬಿ ಎಚ್ ಖಾದರ್, ರಾಜ್ಯ ಅಲ್ಪಸಂಖ್ಯಾತಘಟಕದ ಸಂಯೋಜಕರಾದ ಮುಹಮ್ಮದ್ ನಂದರಬೆಟ್ಟು, ಆಲ್ಬರ್ಟ್ ಮಿನೇಜಸ್, ಕೆಪಿಸಿಸಿ ಕಾನೂನು, ಮಾನವ ಹಕ್ಕು ಹಾಗೂ ಆರ್ ಟಿ ಐ ಘಟಕದ ಕಾರ್ಯದರ್ಶಿ ರಿಯಾಝ್ ಹುಸೈನ್ ಬಂಟ್ವಾಳ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೆರಿಲ್ ರೇಗೋ, ಬಂಟ್ವಾಳ ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ, ಉಪಾಧ್ಯಕ್ಷೆ ಜೆಸಿಂತಾ ಡಿ’ಸೋಜ, ಸಹಕಾರಿ ಸಂಘ ಒಕ್ಕೂಟದ ಜಿಲ್ಲಾಧ್ಯಕ್ಷ ಸುದರ್ಶನ್ ಜೈನ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಿ ಸಿ ರೋಡು, ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಉದ್ಯಮಿಗಳಾದ ಹಾಜಿ ಪಿ ಎಸ್ ಅಬ್ದುಲ್ ಹಮೀದ್, ಹಾಜಿ ಜಿ ಮುಹಮ್ಮದ್ ಹನೀಫ್ ಗೋಳ್ತಮಜಲು, ಇಸ್ಮಾಯಿಲ್ ಸಿದ್ದೀಕ್ ಕಾವಳಕಟ್ಟೆ, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ನವಾಝ್ ಬಡಕಬೈಲು, ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಜೋರಾ, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ ಪೂಜಾರಿ, ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿಲ್ಮಾ ಮೊರಾಸ್, ಬಂಟ್ವಾಳ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಮಾಜಿ ಅಧ್ಯಕ್ಷ ಮುಹಮ್ಮದ್ ಸಂಗಬೆಟ್ಟು ಮೊದಲಾದವರು ಭಾಗವಹಿಸಲಿದ್ದಾರೆ ಎಂದು ವಿವರಿಸಿದ ಎಂ ಎಸ್ ಮುಹಮ್ಮದ್ ಅವರು ಸಮಾವೇಶ ಸರಕಾರದ ಕೋವಿಡ್ ಶಿಷ್ಟಾಚಾರಗಳನ್ನು ಪಾಲಿಸಿಕೊಂಡು ಸಭಾಂಗಣದ ಒಳ ಭಾಗದಲ್ಲಿ ಶಿಸ್ತು ಬದ್ದವಾಗಿ ಅತ್ಯಂತ ಯಶಸ್ವಿಯಾಗಿ ನಡೆಸಲಾಗುವುದು ಎಂದರು. 

ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಸಾಮಾಜಿಕ ಅಂತರ, ಮಾಸ್ಕ್ ಮೊದಲಾದ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸುವಂತೆ ಅವರು ಇದೇ ವೇಳೆ ಕರೆ ನೀಡಿದರು. 

ಸುದ್ದಿಗೋಷ್ಠಿಯಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನಿಯೋಜಿತ ಅಧ್ಯಕ್ಷರುಗಳಾದ ಅರ್ಶದ್ ಸರವು, ಕೆ ಮುಹಮ್ಮದ್ ಶರೀಫ್, ಜಿ ಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಪುರಸಭಾ ಸದಸ್ಯರುಗಳಾದ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಜನಾರ್ದನ ಚೆಂಡ್ತಿಮಾರ್, ಲೋಲಾಕ್ಷ ಶೆಟ್ಟಿ, ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರುಗಳಾದ ಸುರೇಶ್ ಜೋರಾ, ನವಾಝ್ ಬಡಕಬೈಲು, ಸಿದ್ದೀಕ್ ಸರವು  ಮೊದಲಾದವರು ಉಪಸ್ಥಿತರಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಜ 7 ರಂದು ಪಾಣೆಮಂಗಳೂರಿನಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಾವೇಶ ಹಾಗೂ ಪದಾಧಿಕಾರಿಗಳ ಪದಗ್ರಹಣ Rating: 5 Reviewed By: karavali Times
Scroll to Top