ಇಂದು (ಜ 7) ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಾವೇಶ : ಯಶಸ್ವಿಗೊಳಿಸಲು ಅಬ್ಬಾಸ್ ಅಲಿ ಕರೆ  - Karavali Times ಇಂದು (ಜ 7) ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಾವೇಶ : ಯಶಸ್ವಿಗೊಳಿಸಲು ಅಬ್ಬಾಸ್ ಅಲಿ ಕರೆ  - Karavali Times

728x90

6 January 2022

ಇಂದು (ಜ 7) ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಾವೇಶ : ಯಶಸ್ವಿಗೊಳಿಸಲು ಅಬ್ಬಾಸ್ ಅಲಿ ಕರೆ 

 ಬಂಟ್ವಾಳ, ಜನವರಿ 07, 2022 (ಕರಾವಳಿ ಟೈಮ್ಸ್) : ಬಂಟ್ವಾಳ ವಿಧಾನಸಭಾ ಕ್ಷೇತ್ರ, ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಇವುಗಳ ಆಶ್ರಯದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಾವೇಶ ಹಾಗೂ ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷರುಗಳ, ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಇಂದು (ಜ. 7) ಅಪರಾಹ್ನ 2.30 ಕ್ಕೆ ಸರಿಯಾಗಿ ಪಾಣೆಂಗಳೂರಿನ ಸಾಗರ್ ಆಡಿಟೋರಿಯಂನಲ್ಲಿ ನಡೆಯಲಿದ್ದು, ಪಕ್ಷದ ಎಲ್ಲಾ ನಾಯಕರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಕರೆ ನೀಡಿದ್ದಾರೆ. 

 ದೇಶಾದ್ಯಂತ ಹಾಗೂ ರಾಜ್ಯಾದ್ಯಂತ ಬಿಜೆಪಿ ಪಕ್ಷದ ಆಡಳಿತ ವೈಫಲ್ಯಗಳನ್ನು ಪ್ರಜ್ಞಾವಂತ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ದೇಶದ ಎಲ್ಲಾ ರಂಗಗಳಲ್ಲೂ ಸಮರ್ಥ ಆಡಳಿತ ನಡೆಸಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂಬುದನ್ನೂ ಕೂಡಾ ಜನ ಇತಿಹಾಸ ಅಧ್ಯಯನದಿಂದ ಅರ್ಥ ಮಾಡಿಕೊಂಡಿದ್ದಾರೆ. 

ಈ ನಿಟ್ಟಿನಲ್ಲಿ ಜನ ಮತ್ತೆ ಕಾಂಗ್ರೆಸ್ ಆಡಳಿತದ ಹಾಗೂ ಅಭಿವೃದ್ದಿಯ ಯುಗವನ್ನು ಎದುರು ನೋಡುತ್ತಿರುವುದು ಸ್ಪಷ್ಟವಾಗಿದೆ. ಈ ಕಾರಣಕ್ಕಾಗಿ ಪಕ್ಷ ಸಂಘಟನೆ ದೃಷ್ಟಿಯಿಂದ ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ಎಲ್ಲಾ ಕಾರ್ಯಕರ್ತರು ಹಾಗೂ ಹಿತೈಷಿಗಳು ಉತ್ಸಾಹದಿಂದ ಭಾಗವಹಿಸುವಂತೆ ಕರೆ ನೀಡಿರುವ ಅಬ್ಬಾಸ್ ಅಲಿ ಸರಕಾರದ ಹಾಗೂ ಆರೋಗ್ಯ ಇಲಾಖೆಯ ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಇಂದು (ಜ 7) ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಾವೇಶ : ಯಶಸ್ವಿಗೊಳಿಸಲು ಅಬ್ಬಾಸ್ ಅಲಿ ಕರೆ  Rating: 5 Reviewed By: karavali Times
Scroll to Top