ಅಲ್ಪಸಂಖ್ಯಾತ ವರ್ಗದ ಪೋಸ್ಟ್ ಮೆಟ್ರಿಕ್, ಮೆರಿಟ್ ಕಂ ಮೀನ್ಸ್ ಜ 15ರವರೆಗೆ ಹಾಗೂ ವಿದ್ಯಾಸಿರಿ ಜ 10ರವರೆಗೆ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ - Karavali Times ಅಲ್ಪಸಂಖ್ಯಾತ ವರ್ಗದ ಪೋಸ್ಟ್ ಮೆಟ್ರಿಕ್, ಮೆರಿಟ್ ಕಂ ಮೀನ್ಸ್ ಜ 15ರವರೆಗೆ ಹಾಗೂ ವಿದ್ಯಾಸಿರಿ ಜ 10ರವರೆಗೆ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ - Karavali Times

728x90

4 January 2022

ಅಲ್ಪಸಂಖ್ಯಾತ ವರ್ಗದ ಪೋಸ್ಟ್ ಮೆಟ್ರಿಕ್, ಮೆರಿಟ್ ಕಂ ಮೀನ್ಸ್ ಜ 15ರವರೆಗೆ ಹಾಗೂ ವಿದ್ಯಾಸಿರಿ ಜ 10ರವರೆಗೆ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು, ಜನವರಿ 04, 2022 (ಕರಾವಳಿ ಟೈಮ್ಸ್) : ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ನೀಡಲ್ಪಡುವ ಪೋಸ್ಟ್ ಮೆಟ್ರಿಕ್ (ಪಿಯುಸಿಯಿಂದ ಪದವಿವರೆಗೆ) ಹಾಗೂ ಮೆರಿಟ್ ಕಂ ಮೀನ್ಸ್ (ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ) ಸ್ಕಾಲರ್ ಶಿಪ್ ಆನ್ ಲೈನ್ ಅರ್ಜಿ ಸಲ್ಲಿಕೆಯ ಅವಧಿ ಜನವರಿ 15ರವರೆಗೆ ಹಾಗೂ ವಿದ್ಯಾಸಿರಿ ಯೋಜನೆಯ ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 10ರವರೆಗೆ ವಿಸ್ತರಿಸಿ ಇಲಾಖೆ ಆದೇಶಿಸಿದೆ. 

ಪೋಸ್ಟ್ ಮೆಟ್ರಿಕ್ ಹಾಗೂ ಮೆರಿಟ್ ಕಂ ಮೀನ್ಸ್ ಸ್ಕಾಲರ್ ಶಿಪ್ ಅರ್ಜಿ ಎನ್ ಎಸ್ ಪಿ ಪೋರ್ಟಲ್ ನಲ್ಲಿ ಆನ್ ಲೈನ್ ಅರ್ಜಿ ಸಲ್ಲಿಸಿ ಹಾರ್ಡ್ ಕಾಪಿಯನ್ನು ಪೂರಕ ದಾಖಲೆಗಳೊಂದಿಗೆ ವಿದ್ಯಾರ್ಥಿಗಳು ವಿದ್ಯಾಸಂಸ್ಥೆಗೆ ಸಲ್ಲಿಸಬೇಕು. ಇಲಾಖಾ ತಾಲೂಕು ಅಥವಾ ಜಿಲ್ಲಾ ಕಚೇರಿಗಾಗಲೀ, ಮಾಹಿತಿ ಕೇಂದ್ರಕ್ಕಾಗಲೀ ಸಲ್ಲಿಸುವ ಅಗತ್ಯ ಇರುವುದಿಲ್ಲ. 

ವಿದ್ಯಾಸಿರಿ ಯೋಜನೆಗೆ ರಾಜ್ಯ ಸರಕಾರದ ಸೇವಾಸಿಂಧು ಪೋರ್ಟಲ್ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಿ ಬಳಿಕ ದೃಢೀಕೃತ ಪೂರಕ ದಾಖಲೆಗಳೊಂದಿಗೆ ಜಿಲ್ಲಾ ಅಲ್ಪಸಂಖ್ಯಾತ ಇಲಾಖಾ ಕಚೇರಿಗೆ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ ಎಂದು ಇಲಾಖಾ ಕಚೇರಿ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಅಲ್ಪಸಂಖ್ಯಾತ ವರ್ಗದ ಪೋಸ್ಟ್ ಮೆಟ್ರಿಕ್, ಮೆರಿಟ್ ಕಂ ಮೀನ್ಸ್ ಜ 15ರವರೆಗೆ ಹಾಗೂ ವಿದ್ಯಾಸಿರಿ ಜ 10ರವರೆಗೆ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ Rating: 5 Reviewed By: karavali Times
Scroll to Top