ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ - Karavali Times ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ - Karavali Times

728x90

6 January 2022

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು, ಜನವರಿ 06, 2022 (ಕರಾವಳಿ ಟೈಮ್ಸ್) : 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ಪ್ರಕಟಿಸಿದೆ. ತಾತ್ಕಾಲಿಕ ವೇಳಾಪಟ್ಟಿಯಂತೆ ಮಾರ್ಚ್ 28 ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆ ನಡೆಯಲಿದೆ. ಈ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಜನವರಿ 14ರೊಳಗೆ ಆಕ್ಷೇಪಣೆ ಸಲ್ಲಿಸಲು ಪೆÇೀಷಕರಿಗೆ ಅವಕಾಶ ಕಲ್ಪಿಸಲಾಗಿದೆ.

ಮಾರ್ಚ್ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಎಪ್ರಿಲ್ 4 ರಂದು ಗಣಿತ, ಸಮಾಜಶಾಸ್ತ್ರ, ಎಪ್ರಿಲ್ 6 ರಂದು ಸಮಾಜ ವಿಜ್ಞಾನ, ಎಪ್ರಿಲ್ 6 ರಂದು ತೃತೀಯ ಭಾಷೆ, ಎಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ.

ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಪರೀಕ್ಷೆಗಳು ನಡೆಯಲಿವೆ. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.

ವೇಳಾಪಟ್ಟಿಗೆ ಅಭ್ಯರ್ಥಿಗಳು / ಪೆÇೀಷಕರು ಆಕ್ಷೇಪಣೆ ಸಲ್ಲಿಸಲು ಜನವರಿ 6- 14 ರವರೆಗೆ ಅವಕಾಶ ಇದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ವೆಬ್ ಸೈಟಿನಲ್ಲಿ ಸಲ್ಲಿಸಬಹುದು ಎಂದು ಪರೀಕ್ಷಾ ಮಂಡಳಿ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ Rating: 5 Reviewed By: karavali Times
Scroll to Top