ವಾರಾಂತ್ಯ ನಿಷೇಧಾಜ್ಞೆ : ಇಂದು (ಜ 7) ರಾತ್ರಿ 10 ಗಂಟೆಯಿಂದ ಜಾರಿ - Karavali Times ವಾರಾಂತ್ಯ ನಿಷೇಧಾಜ್ಞೆ : ಇಂದು (ಜ 7) ರಾತ್ರಿ 10 ಗಂಟೆಯಿಂದ ಜಾರಿ - Karavali Times

728x90

6 January 2022

ವಾರಾಂತ್ಯ ನಿಷೇಧಾಜ್ಞೆ : ಇಂದು (ಜ 7) ರಾತ್ರಿ 10 ಗಂಟೆಯಿಂದ ಜಾರಿ

ಬೆಂಗಳೂರು, ಜನವರಿ 07, 2022 (ಕರಾವಳಿ ಟೈಮ್ಸ್) : ಕೊರೋನಾ ಹಾಗೂ ಓಮಿಕ್ರಾನ್ ಹೆಚ್ಚಳ ಆಗುತ್ತಿದೆ ಎಂಬ ಹಿನ್ನಲೆಯಲ್ಲಿ ಇಂದು (ಜ 7 ಶುಕ್ರವಾರ) ರಾತ್ರಿ 8 ಗಂಟೆಯಿಂದ ರಾಜ್ಯ ಮತ್ತೊಮ್ಮೆ ಸ್ಥಬ್ಧ ಆಗಲಿದೆ. ರಾಜ್ಯ ಸರಕಾರ ಘೋಷಿಸಿರುವ ವಾರಾಂತ್ಯ ನಿಷೇಧಾಜ್ಞೆ ರಾತ್ರಿ 10 ಗಂಟೆಗೆ ಆರಂಭವಾಗಲಿದ್ದು, ಅಗತ್ಯ ಸೇವೆ ಹೊರತುಪಡಿಸಿ ಉಳಿದಂತೆ ಎಲ್ಲವೂ ಬಂದ್ ಆಗಲಿದೆ. ಇಂದು ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಾರಾಂತ್ಯ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. 

ವಾರಾಂತ್ಯ ನಿಷೇಧಾಜ್ಞೆ ವೇಳೆ (ಜನವರಿ 7,8 ಹಾಗೂ ಜ 14, 15) ಆಹಾರ ವಸ್ತು, ಹೊಟೆಲ್‍ಗಳಲ್ಲಿ ಪಾರ್ಸೆಲ್, ಅತ್ಯಗತ್ಯ ಸೇವೆಗಳು ಲಭ್ಯವಾಗಲಿದ್ದು, ಬಿಎಂಟಿಸಿ ಬಸ್ಸುಗಳು ಇಂದು ರಾತ್ರಿಯಿಂದ ಸೋಮವಾರ ಬೆಳಗ್ಗೆ ತನಕ ಸಂಚಾರವಿರುವುದಿಲ್ಲ. ಕೇವಲ ತುರ್ತು ಸಂದರ್ಭದಲ್ಲಿ ಮಾತ್ರ ಬಸ್‍ಗಳು ಸಂಚಾರ ನಡೆಸಲಿವೆ. ಅಗತ್ಯ ಸೇವೆಗಳನ್ನು ನೀಡುವ ಸಿಬ್ಬಂದಿಗಳು ಕಚೇರಿಗೆ ತೆರಳಲು ಶೇ 10 ರಷ್ಟು ಮಾತ್ರ ಬಸ್ ಓಡಿಸಲಾಗುತ್ತದೆ. ಅಗತ್ಯ ಸೇವೆಗಳಿಗಾಗಿ ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆ ತನಕ ಮಾತ್ರ ಬಸ್ ಸಂಚಾರ ಇರುತ್ತದೆ. ಕಂಟೈನ್‍ಮೆಂಟ್ ಝೋನ್‍ಗಳಲ್ಲಿ ಬಸ್ ಸಂಚಾರ ಇರುವುದಿಲ್ಲ. 

ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗಿಗಳು. ಬೋರ್ಡ್/ ಕಾಪೆರ್Çರೇಷನ್ ಸಿಬ್ಬಂದಿಗಳು, ಪೆÇಲೀಸ್, ಹೋಂ ಗಾರ್ಡ್, ಸಿವಿಲ್ ಡಿಫೆನ್ಸ್, ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿಗಳು ಬಸ್ ಗಳಲ್ಲಿ ಸಂಚರಿಸುಲು ಅವಕಾಶ ನೀಡಲಾಗಿದೆ. ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರು, ಸಿಬ್ಬಂದಿ, ಲ್ಯಾಬ್ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಇತರ ಸಿಬ್ಬಂದಿಗಳು, ಆಸ್ಪತ್ರೆಗೆ ತೆರಳುವ ರೋಗಿಗಳು ಮತ್ತು ಅವರನ್ನು ಚಿಕಿತ್ಸೆ, ಪರೀಕ್ಷೆಗೆ ಕರೆದುಕೊಂಡು ಹೋಗವವರು ಸಂಚಾರ ನಡೆಸಬಹುದು. ಸರಕಾರಿ/ ಖಾಸಗಿ ಬ್ಯಾಂಕ್, ವಿಮೆ ಕಂಪನಿಗಳ ಸಿಬ್ಭಂದಿಗಳು, ಅಧಿಕಾರಿಗಳು. ಮುದ್ರಣ ಮತ್ತು ದೃಶ್ಯ ಮಾಧ್ಯಮದಲ್ಲಿ ಕೆಲಸ ಮಾಡುವವರು ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. 

ದೂರದ ಊರುಗಳಿಗೆ ಪ್ರಯಾಣ ಮಾಡುವ ಬಸ್, ವಿಮಾನ, ರೈಲು ಪ್ರಯಾಣಿಕರು ಟಿಕೆಟ್ ತೋರಿಸಿ ಪ್ರಯಾಣ ಮಾಡಬಹುದು. ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಪ್ರಯಾಣಿಸಬಹುದು. ಬಸ್‍ನಲ್ಲಿ ಪ್ರಯಾಣಿಸುವ ಎಲ್ಲರೂ ಕಡ್ಡಾಯವಾಗಿ ಐಡಿ ಕಾರ್ಡ್ ತೋರಿಸಬೇಕು. ಸಾಮಾನ್ಯ ಜನರಿಗೆ ಬಸ್‍ನಲ್ಲಿ ಸಂಚಾರ ನಡೆಸಲು ಅವಕಾಶವಿಲ್ಲ.

ಬಸ್ಸಿನ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಿಬ್ಬಂದಿಗಳು ಸ್ಯಾನಿಟೈಸರ್ ಬಳಕೆ ಮಾಡಬೇಕು, ಬಸ್ಸಿನಲ್ಲಿ ಸೀಟು ಇದ್ದರೆ ಮಾತ್ರ ಪ್ರಯಾಣಿಕರನ್ನು ಹತ್ತಿಸಿಕೊಳ್ಳಬೇಕು, ನಿಗದಿಪಡಿಸಿದ ಬಸ್ ನಿಲ್ದಾಣಗಳಲ್ಲಿ ಮಾತ್ರ ಬಸ್‍ಗಳನ್ನು ನಿಲ್ಲಿಸಬೇಕು, ಎಲ್ಲಾ ಪ್ರಯಾಣಿಕರ ಗುರುತಿನ ಚೀಟಿ ಪರಿಶೀಲನೆ ನಡೆಸಿಯೇ ಬಸ್‍ಗೆ ಹತ್ತಿಸಿಕೊಳ್ಳಬೇಕು.

ವಾರಾಂತ್ಯದ ಕರ್ಫ್ಯೂ ಅವಧಿಯಲ್ಲಿ ನಮ್ಮ ಮೆಟ್ರೋ ರೈಲು ಸಂಚಾರ ಇರಲಿದೆ. ಶನಿವಾರ ಮತ್ತು ಭಾನುವಾರ ಬೆಳಗ್ಗೆ 8 ರಿಂದ ರಾತ್ರಿ 9ರ ತನಕ ಮಾತ್ರ ಮೆಟ್ರೋ ರೈಲು ಸಂಚರಿಸಲಿದೆ. ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ ಮತ್ತು ಬೈಯಪ್ಪನಹಳ್ಳಿ ನಿಲ್ದಾಣದಿಂದ ಬೆಳಗ್ಗೆ 8ಕ್ಕೆ ಮೆಟ್ರೋ ರೈಲು ಹೊರಡಲಿದೆ. ಪ್ರತಿ 20 ನಿಮಿಷಕ್ಕೆ ಒಂದು ರೈಲು ಹೊರಡಲಿದೆ. ಟರ್ಮಿನಲ್ ನಿಲ್ದಾಣದಿಂದ ಕೊನೆಯ ರೈಲು ರಾತ್ರಿ 9 ಗಂಟೆಗೆ ಹೊರಡಲಿದೆ ಎಂದು ಬಿಎಂಆರ್‍ಸಿಎಲ್ ಪ್ರಕಟಣೆ ತಿಳಿಸಿದೆ.

  • Blogger Comments
  • Facebook Comments

0 comments:

Post a Comment

Item Reviewed: ವಾರಾಂತ್ಯ ನಿಷೇಧಾಜ್ಞೆ : ಇಂದು (ಜ 7) ರಾತ್ರಿ 10 ಗಂಟೆಯಿಂದ ಜಾರಿ Rating: 5 Reviewed By: karavali Times
Scroll to Top