ಎಪ್ರಿಲ್ 16 ರಿಂದ ಮೇ 6 ರವರೆಗೆ ಸೆಕೆಂಡ್ ಪಿಯುಸಿ ವಾರ್ಷಿಕ ಪರೀಕ್ಷೆ : ಅಂತಿಮ ವೇಳಾಪಟ್ಟಿ ಪ್ರಕಟಿಸಿದ ಪಿಯು ಇಲಾಖೆ - Karavali Times ಎಪ್ರಿಲ್ 16 ರಿಂದ ಮೇ 6 ರವರೆಗೆ ಸೆಕೆಂಡ್ ಪಿಯುಸಿ ವಾರ್ಷಿಕ ಪರೀಕ್ಷೆ : ಅಂತಿಮ ವೇಳಾಪಟ್ಟಿ ಪ್ರಕಟಿಸಿದ ಪಿಯು ಇಲಾಖೆ - Karavali Times

728x90

8 February 2022

ಎಪ್ರಿಲ್ 16 ರಿಂದ ಮೇ 6 ರವರೆಗೆ ಸೆಕೆಂಡ್ ಪಿಯುಸಿ ವಾರ್ಷಿಕ ಪರೀಕ್ಷೆ : ಅಂತಿಮ ವೇಳಾಪಟ್ಟಿ ಪ್ರಕಟಿಸಿದ ಪಿಯು ಇಲಾಖೆ

ಬೆಂಗಳೂರು, ಫೆಬ್ರವರಿ 08, 2022 (ಕರಾವಳಿ ಟೈಮ್ಸ್) :  ಈ ಬಾರಿಯ ಅಂದರೆ 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳವಾರ ಪ್ರಕಟಿಸಿದ್ದು, ಎಪ್ರಿಲ್ 16 ರಿಂದ ಮೇ 6ರ ವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದೆ.

ಎಪ್ರಿಲ್ 16 ರಂದು ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ, ಎ 18 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ,  ಎ 19 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್, ಎ 20 ರಂದು ಇತಿಹಾಸ, ಭೌತಶಾಸ್ತ್ರ, ಎ 21 ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್, ಎ 22 ರಂದು ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ, ಎ 23 ರಂದು ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಎ 25 ರಂದು ಅರ್ಥ ಶಾಸ್ತ್ರ, ಎ 26 ರಂದು  ಹಿಂದಿ, ಎ 28 ರಂದು ಕನ್ನಡ, ಎ 30 ರಂದು ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಮೇ 2 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ, ಮೇ 4 ರಂದು ಇಂಗ್ಲಿಷ್ ಹಾಗೂ ಮೇ 6 ರಂದು ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ, ಐಚ್ಛಿಕ ಕನ್ನಡ ಪರೀಕ್ಷೆ ನಡೆಯಲಿದೆ ಎಂದು ಬೋರ್ಡ್ ಪ್ರಕಟಣೆ ತಿಳಿಸಿದೆ.

  • Blogger Comments
  • Facebook Comments

0 comments:

Post a Comment

Item Reviewed: ಎಪ್ರಿಲ್ 16 ರಿಂದ ಮೇ 6 ರವರೆಗೆ ಸೆಕೆಂಡ್ ಪಿಯುಸಿ ವಾರ್ಷಿಕ ಪರೀಕ್ಷೆ : ಅಂತಿಮ ವೇಳಾಪಟ್ಟಿ ಪ್ರಕಟಿಸಿದ ಪಿಯು ಇಲಾಖೆ Rating: 5 Reviewed By: karavali Times
Scroll to Top