ಕೊರೋನಾ-ಲಾಕ್ ಡೌನ್ ಎಫೆಕ್ಟ್ : ಈ ಬಾರಿ ಶಾಲಾ ಮಕ್ಕಳ ಬೇಸಿಗೆ ರಜೆ ಕಡಿತಗೊಳಿಸಿದ ಶಿಕ್ಷಣ ಇಲಾಖೆ - Karavali Times ಕೊರೋನಾ-ಲಾಕ್ ಡೌನ್ ಎಫೆಕ್ಟ್ : ಈ ಬಾರಿ ಶಾಲಾ ಮಕ್ಕಳ ಬೇಸಿಗೆ ರಜೆ ಕಡಿತಗೊಳಿಸಿದ ಶಿಕ್ಷಣ ಇಲಾಖೆ - Karavali Times

728x90

25 February 2022

ಕೊರೋನಾ-ಲಾಕ್ ಡೌನ್ ಎಫೆಕ್ಟ್ : ಈ ಬಾರಿ ಶಾಲಾ ಮಕ್ಕಳ ಬೇಸಿಗೆ ರಜೆ ಕಡಿತಗೊಳಿಸಿದ ಶಿಕ್ಷಣ ಇಲಾಖೆ

ಬೆಂಗಳೂರು, ಫೆಬ್ರವರಿ 25, 2022 (ಕರಾವಳಿ ಟೈಮ್ಸ್) : ಕಳೆದೆರಡು ವರ್ಷಗಳಿಂದ ಕೋವಿಡ್ ವೈರಸ್ ಹಾಗೂ ಲಾಕ್ ಡೌನ್ ಕಾರಣದಿಂದ ಮೊಟಕುಗೊಂಡಿದ್ದ ಶೈಕ್ಷಣಿಕ ವರ್ಷವನ್ನು ಸರಿದೂಗಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಮುಂದಾಗಿದ್ದು, ಈ ಬಾರಿಯ ಬೇಸಿಗೆ ರಜೆಯನ್ನು ಕಡಿತಗೊಳಿಸಲಾಗಿದೆ. ಮುಂದಿನ ಅಂದರೆ 2022-23ನೇ ಸಾಲಿನ ಶೈಕ್ಷಣಿಕ ವರ್ಷವನ್ನು ವಿಸ್ತರಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ. 

ಸಾಮಾನ್ಯವಾಗಿ ಶೈಕ್ಷಣಿಕ ವರ್ಷ ಮೇ 29 ರಿಂದ ಆರಂಭವಾಗಿ ಎಪ್ರಿಲ್ 10ಕ್ಕೆ ಮುಕ್ತಾಯಗೊಳ್ಳುವ ಮೂಲಕ ಶೈಕ್ಷಣಿಕ ಚಟುವಟಿಕೆಗಳು 10 ತಿಂಗಳುಗಳ ಕಾಲ ನಿರ್ವಹಣೆಯಲ್ಲಿರಲಿದೆ. ಕನಿಷ್ಠ 220 ಶಾಲಾ ಕರ್ತವ್ಯದ ದಿನಗಳನ್ನು ನಿಗದಿಪಡಿಸಿ, ವಿದ್ಯಾರ್ಥಿಗಳ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಹಂಚಿಕೆ ಮಾಡಲಾಗುತ್ತದೆ. ಆದರೆ ಕಳೆದೆರಡು ಶೈಕ್ಷಣಿಕ ವರ್ಷಗಳಲ್ಲಿ ವಿದ್ಯಾರ್ಥಿಗಳ ಕಲಿಕಾ ಪ್ರಮಾಣ ತೀರಾ ಕೆಳಮಟ್ಟದಲ್ಲಿದ್ದು, ಭೌತಿಕ ತರಗತಿಗಳೂ ಗಣನೀಯ ಪ್ರಮಾಣದಲ್ಲಿ ಕಡಿಮೆ ಇದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿನ್ನಡೆಯನ್ನು ಹಾಗೂ  ಕಲಿಕಾ ಕೊರತೆಯನ್ನು ಸರಿದೂಗಿಸಲು ಬೇಸಿಗೆ ರಜೆಯನ್ನು ಕಡಿಮೆ ಗೊಳಿಸಿ ಪ್ರಕಟಣೆ ಹೊರಡಿಸಲಾಗಿದೆ.

ಈ ಸಂಬಂಧ ಆದೇಶ ಹೊರಡಿಸಿರುವ ಶಿಕ್ಷಣ ಇಲಾಖೆ ಆಯುಕ್ತರು, ಮುಂಬರುವ ಶೈಕ್ಷಣಿಕ ವರ್ಷ 2022-23 ರಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷ 2021-22 ವನ್ನು ಎಪ್ರಿಲ್ 9ಕ್ಕೆ ಮುಕ್ತಾಯಗೊಳಿಸಲು ನಿರ್ಧರಿಸಲಾಗಿರುವ ಜೊತೆಗೆ 2021-22ನೇ ಸಾಲಿನ ಬೇಸಿಗೆ ರಜೆಯನ್ನು ಎಪ್ರಿಲ್ 10 ರಿಂದ ಮೇ 15ರವರೆಗೆ ನೀಡಲು ಆದೇಶಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷವನ್ನು ಮೇ 16 ರಿಂದ ಪ್ರಾರಂಭಿಸಲು ನಿರ್ದೇಶಿಸಲಾಗಿದೆ. 

ಸಾಮಾನ್ಯವಾಗಿ ಬೇಸಿಗೆ ರಜೆ ಎಪ್ರಿಲ್ ಮೊದಲ ವಾರದಿಂದ ಆರಂಭಗೊಂಡು ಮೇ ಅಂತ್ಯದವರೆಗೆ ಇರುತ್ತದೆ. ಜೂನ್ ಮೊದಲ ವಾರದಲ್ಲಿ ಹೊಸ ಶೈಕ್ಷಣಿಕ ವರ್ಷ ಆರಂಭವಾಗುತ್ತದೆ. ಆದರೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿನ ಬೇಸಿಗೆ ರಜೆಯನ್ನು 36 ದಿನಗಳಿಗೆ ಸೀಮಿತಗೊಳಿಸಲಾಗಿದೆ. ಈ ಬಾರಿ ಹೊಸ ಶೈಕ್ಷಣಿಕ ವರ್ಷ ಮೇ 16 ರಿಂದ ಪ್ರಾರಂಭವಾಗಲಿದೆ. ಆ ಮೂಲಕ ಕಳೆದ ಎರಡು ವರ್ಷದಿಂದ ಕುಂಠಿತವಾದ ಶೈಕ್ಷಣಿಕ ವರ್ಷವನ್ನು ಸರಿದೂಗಿಸಲು ಶಿಕ್ಷಣ ಇಲಾಖೆ ಯೋಜನೆ ರೂಪಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಕೊರೋನಾ-ಲಾಕ್ ಡೌನ್ ಎಫೆಕ್ಟ್ : ಈ ಬಾರಿ ಶಾಲಾ ಮಕ್ಕಳ ಬೇಸಿಗೆ ರಜೆ ಕಡಿತಗೊಳಿಸಿದ ಶಿಕ್ಷಣ ಇಲಾಖೆ Rating: 5 Reviewed By: karavali Times
Scroll to Top