ಸೆಕೆಂಡ್ ಪಿಯುಸಿ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟ   - Karavali Times ಸೆಕೆಂಡ್ ಪಿಯುಸಿ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟ   - Karavali Times

728x90

7 March 2022

ಸೆಕೆಂಡ್ ಪಿಯುಸಿ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟ  

 ಬೆಂಗಳೂರು, ಮಾರ್ಚ್ 08, 2022 (ಕರಾವಳಿ ಟೈಮ್ಸ್) : ಸೆಕೆಂಡ್ ಪಿಯುಸಿ ಅಂತಿಮ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಎಪ್ರಿಲ್‌ 22 ರಿಂದ ಮೇ 18ರವರೆಗೆ ಪರೀಕ್ಷೆಗಳು ನಡೆಯಲಿದೆ. 

 ಎಪ್ರಿಲ್ 22 ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಎಪ್ರಿಲ್ 23 ರಂದು ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ, ಎಪ್ರಿಲ್ 25 ರಂದು ಅರ್ಥಶಾಸ್ತ್ರ, ಎಪ್ರಿಲ್ 26 ರಂದು ರಸಾಯನಶಾಸ್ತ್ರ ಹಿಂದುಸ್ಥಾನಿ ಸಂಗೀತ, ಮನಃಶಾಸ್ತ್ರ, ಎಪ್ರಿಲ್ 27 ರಂದು ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, ಎಪ್ರಿಲ್ 28 ರಂದು ಕನ್ನಡ, ಅರೇಬಿಕ್, ಮೇ 2 ರಂದು ಭೂಗೋಳಶಾಸ್ತ್ರ, ಜೀವಶಾಸ್ತ್ರ, ಮೇ 4 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್‌ಕೇರ್, ಆಟೋಮೊಬೈಲ್, ಬ್ಯೂಟಿ ಅಂಡ ವೆಲ್‌ನೆಸ್‌, ಮೇ 5 ರಂದು ಇಂಗ್ಲಿಷ್, ಮೇ 10 ರಂದು ಇತಿಹಾಸ, ಭೌತಶಾಸ್ತ್ರ, ಮೇ 12 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮೇ 14 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ, ಮೇ 17 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ ಹಾಗೂ ಮೇ 18 ರಂದು ಹಿಂದಿ ಪರೀಕ್ಷೆಗಳು ನಡೆಯಲಿದೆ ಎಂದು ಪಿಯು ಬೋರ್ಡ್ ಪ್ರಕಟಣೆ ತಿಳಿಸಿದೆ. 

 ಇದಕ್ಕೂ ಮೊದಲು ಎಪ್ರಿಲ್ 16 ರಿಂದ ಮೇ 6 ರ ವರೆಗೆ ಪರೀಕ್ಷೆಗೆ ದಿನಾಂಕ ನಿಗದಿಪಡಿಲಾಗಿತ್ತು. ಆದರೆ ಜೆಇಇ ಪರೀಕ್ಷೆಗಳು ಇದೇ ದಿನಾಂಕದಲ್ಲಿ ಇದ್ದ ಕಾರಣಕ್ಕಾಗಿ ಪಿಯು ಬೋರ್ಡ್ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ ಬದಲಾವಣೆ ಮಾಡಿ ಕರಡು ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆ ಸಲ್ಲಿಕೆಗೆ ಮಾ 5 ಅಂತಿಮ ದಿನಾಂಕ ನಿಗದಿಪಡಿಸಿತ್ತು. ಆಕ್ಷೇಪಣಾ ದಿನಾಂಕ ಮುಕ್ತಾಯವಾದ ಹಿನ್ನಲೆಯಲ್ಲಿ ಇದೀಗ ಮತ್ತೆ ಪಿಯು ಬೋರ್ಡ್ ಪರಿಷ್ಕೃತ ಅಂತಿಮ ಪಟ್ಟಿ ಪ್ರಕಟಿಸಿದೆ.

  • Blogger Comments
  • Facebook Comments

0 comments:

Post a Comment

Item Reviewed: ಸೆಕೆಂಡ್ ಪಿಯುಸಿ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟ   Rating: 5 Reviewed By: karavali Times
Scroll to Top