ಜನನ ಪ್ರಮಾಣ ಪತ್ರ ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಾಲನೆ - Karavali Times ಜನನ ಪ್ರಮಾಣ ಪತ್ರ ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಾಲನೆ - Karavali Times

728x90

7 April 2022

ಜನನ ಪ್ರಮಾಣ ಪತ್ರ ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಾಲನೆ

ಮಂಗಳೂರು, ಎಪ್ರಿಲ್ 07, 2022 (ಕರಾವಳಿ ಟೈಮ್ಸ್) : ಭಾರತೀಯ ಅಂಚೆ ಇಲಾಖೆಯ ಮಂಗಳೂರು ವಿಭಾಗವು ಮಂಗಳೂರಿನ ಲೇಡಿಗೋಷನ್ ಸರಕಾರಿ ಆಸ್ಪತ್ರೆಯೊಂದಿಗೆ ಒಡಂಬಡಿಕೆ ಮಾಡಿಕೊಂಡು ಸ್ಪೀಡ್ ಪೆÇೀಸ್ಟ್ ಮೂಲಕ ಜನನ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ತಲುಪಿಸುವ ವಿಶಿಷ್ಟ ಸೇವೆಯನ್ನು ಆರಂಭಿಸಿದೆ. 

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಸೇವೆಗೆ ಕರ್ನಾಟಕದಲ್ಲೇ ಪ್ರಪ್ರಥಮ ಬಾರಿಗೆ ಚಾಲನೆ ನೀಡಲಾಗಿದ್ದು, ಇಂದು ಈ ಉಪಕ್ರಮದೊಂದಿಗೆ, ದಕ್ಷಿಣ ಕನ್ನಡದಲ್ಲಿ  ಜನನ/ ಮರಣ ಪ್ರಮಾಣ ಪತ್ರಗಳನ್ನು ಸ್ಪೀಡ್ ಪೆÇೀಸ್ಟ್ ಸೇವೆಯ ಮೂಲಕ ಅರ್ಜಿದಾರರ ಮನೆ ಬಾಗಿಲಿಗೆ ತಲುಪಿಸುವ ಸೇವೆಯ ವಿಸ್ತರಣೆಗೆ ಮೊದಲ ಹೆಜ್ಜೆ ಇಡಲಾಯಿತು. 

ಪ್ರಸ್ತುತ ಲೇಡಿಗೋಷನ್ ಸರಕಾರಿ ಆಸ್ಪತ್ರೆಯಲ್ಲಿ ಪ್ರತೀ ತಿಂಗಳು ಸುಮಾರು 400 ರಿಂದ 600 ಮಕ್ಕಳ ಜನನವಾಗುತ್ತಿದ್ದು, ಕರ್ನಾಟಕದ ಸುಮಾರು 9 ಜಿಲ್ಲೆ ಹಾಗೂ ಕೇರಳದ 3 ಜಿಲ್ಲೆಯ ನಾಗರೀಕರು ಈ ಆಸ್ಪತ್ರೆಯ ಸೇವೆಯನ್ನು ಪಡೆಯುತ್ತಿದ್ದಾರೆ.

ಪ್ರಸ್ತುತ ವ್ಯವಸ್ಥೆಯಲ್ಲಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ನಡೆಯುವ ಜನನಗಳಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಲೇಡಿಗೋಷನ್ ಆಸ್ಪತ್ರೆಯಲ್ಲಿಯೇ ನೀಡಲಾಗುತ್ತಿದೆ.  ಇವನ್ನು  ಪಡೆಯಲು ಅರ್ಜಿದಾರರು ಎರಡು ಬಾರಿ ಲೇಡಿಗೋಷನ್ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಬೇಕಿತ್ತು. ಈ ಪ್ರಸ್ತುತ ಕಾರ್ಯವಿಧಾನದಲ್ಲಿ ಸಾಮಾನ್ಯ ಜನರಿಗೆ ಹಲವು ಅನಾನುಕೂಲತೆಗಳಿವೆ. ಕಾಸರಗೋಡು, ಕಾರವಾರ, ಶಿರಸಿ, ಕೊಡಗು ಮುಂತಾದ ದೂರದ ಸ್ಥಳಗಳಿಂದ ಸಾರ್ವಜನಿಕರು ಹೆರಿಗೆಗಾಗಿ ಲೇಡಿಗೋಷನ್ ಸರಕಾರಿ ಆಸ್ಪತ್ರೆಯನ್ನು ಅವಲಂಬಿಸಿದ್ದಾರೆ. ಕೆಲವೊಮ್ಮೆ ತಾಂತ್ರಿಕ ದೋಷ ಹಾಗೂ ಇನ್ನಿತರ ಕಾರಣಗಳಿಂದ ಅರ್ಜಿದಾರರು ಎರಡಕ್ಕಿಂತ ಹೆಚ್ಚಿನ ಬಾರಿ ಲೇಡಿಗೋಷನ್ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಬೇಕಾಗುತ್ತದೆ. ಆದ್ದರಿಂದ ಈ ವ್ಯವಸ್ಥೆಯಲ್ಲಿ ದೂರದ ಸ್ಥಳಗಳಿಂದ ಬರುವ ಸಾರ್ವಜನಿಕರು ಪ್ರಮಾಣ ಪತ್ರಗಳನ್ನು ಪಡೆಯಲು ಸಮಯ ಹಾಗೂ ಹೆಚ್ಚಿನ ಹಣವನ್ನು ವ್ಯಯಿಸಬೇಕಾಗುತ್ತದೆ. 

ಈ ಎಲ್ಲಾ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಭಾರತೀಯ ಅಂಚೆ ಇಲಾಖೆ ಹಾಗೂ ಲೇಡಿಗೋಷನ್ ಸರಕಾರಿ ಆಸ್ಪತ್ರೆಯು ಒಡಂಬಂಡಿಕೆಯನ್ನು ಮಾಡಿಕೊಂಡಿದ್ದು ಈ ಸೇವೆಯ ಅಡಿಯಲ್ಲಿ ಜನನ ಪ್ರಮಾಣ ಪತ್ರಗಳಿಗೆ ಅರ್ಜಿ ಸಲ್ಲಿಸುವಾಗ ಅರ್ಜಿದಾರರಿಗೆ 2 ಆಯ್ಕೆಗಳನ್ನು ನೀಡಲಾಗುತ್ತದೆ. 

ಅರ್ಜಿದಾರರು ಖುದ್ದಾಗಿ ಲೇಡಿಗೋಷನ್ ಸರಕಾರಿ ಆಸ್ಪತ್ರೆಗೆ ಮತ್ತೊಮ್ಮೆ ಭೇಟಿ ನೀಡಿ ಈ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬೇಕು ಅಥವಾ ಸ್ಪೀಡ್ ಪೆÇೀಸ್ಟ್ ಸೇವೆಯ ಮೂಲಕ ಪ್ರಮಾಣ ಪತ್ರವನ್ನು ತಮ್ಮ ಮನೆಬಾಗಿಲಲ್ಲಿ ಪಡೆದುಕೊಳ್ಳಬಹುದು. 

ಗ್ರಾಹಕರ ಆಯ್ಕೆಯು ಕ್ರ,ಸಂ 2 ಆಗಿದ್ದಲ್ಲಿ, ಹೆಚ್ಚುವರಿ ಅರ್ಜಿಯೊಂದನ್ನು ಭರ್ತಿ ಮಾಡಿ ಕೌಂಟರಿನಲ್ಲಿ ನೀಡಬೇಕು. ಈ ಅರ್ಜಿಯು ಸರಳವಾಗಿದ್ದು, ಕೇವಲ ಬಟವಾಡೆಯಾಗಬೇಕಾಗಿರುವ ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ಭರ್ತಿ ಮಾಡಬೇಕು ಹಾಗೂ 100/- ಶುಲ್ಕವನ್ನು ಬಟವಾಡೆ ಮಾಡುವ ಸಂದರ್ಭದಲ್ಲಿ ಅಂಚೆ ಪಾಲಕರಲ್ಲಿ ನೀಡಲು ತಮ್ಮ ಸಮ್ಮತಿ ಇದೆ ಎಂದು ಸಹಿ ಮಾಡಬೇಕು. ಪ್ರಮಾಣ ಪತ್ರವು ಮುದ್ರಣಗೊಂಡ ಬಳಿಕ ಅಂಚೆ ಇಲಾಖೆಯು ಈ ಜನನ ಪ್ರಮಾಣ ಪತ್ರವನ್ನು ಸ್ಪೀಡ್ ಪೆÇೀಸ್ಟ್ ಮೂಲಕ ಅರ್ಜಿದಾರರ ಮನೆಗೆ ಬಟವಾಡೆ ಮಾಡುವುದು.

ಈ ಸೇವೆಯ ವಿಶೇಷತೆಗಳೇನೆಂದರೆ, ಈ ಸೇವೆಯು ಸಂಪೂರ್ಣವಾಗಿ ಐಚ್ಭಿಕವಾಗಿದೆ., ಈ ಪ್ರಮಾಣ ಪತ್ರವನ್ನು ಭಾರತದ ಯಾವುದೇ ಊರಿಗೂ ಸ್ಪೀಡ್ ಪೆÇೀಸ್ಟ್ ಸೇವೆಯ ಮೂಲಕ ತಲುಪಿಸಬಹುದು., ಪ್ರಮಾಣ ಪತ್ರದ ಪ್ರತಿಗಳು ಎಷ್ಟೇ ಇದ್ದರೂ ಮತ್ತು ಯಾವುದೇ ಊರಿಗೂ ಸ್ಪೀಡ್ ಪೆÇೀಸ್ಟ್ ಮೂಲಕ ಮನೆ ಬಾಗಿಲಿಗೆ ತಲುಪಿಸಲು ನಿಗದಿಪಡಿಸಿದ ಶುಲ್ಕ ಕೇವಲ ರೂ. 100/- ಮಾತ್ರ., ಬಟವಾಡೆಯಾಗಬೇಕಾಗಿರುವ ವಿಳಾಸವು ಪ್ರಮಾಣ ಪತ್ರದ ಅರ್ಜಿಯಲ್ಲಿ ನಮೂದಿಸಲಾದ ವಿಳಾಸಕ್ಕಿಂತ ಬೇರೆ ಕೂಡಾ ಆಗಿರಬಹುದು. ಅರ್ಜಿದಾರರು ಪ್ರಮಾಣ ಪತ್ರವನ್ನು ಮನೆಯ ವಿಳಾಸದಲ್ಲಿ ಅಥವಾ ಕಛೇರಿಯ ವಿಳಾಸದಲ್ಲೂ ಪಡೆಯಬಹುದು., ಅರ್ಜಿದಾರರ ಅನುಪಸ್ಥಿತಿಯಲ್ಲಿ ಅವರ ಕುಟುಂಬದ ಯಾವುದೇ ಸದಸ್ಯರು ಬಟವಾಡೆ ಪಡೆದುಕೊಳ್ಳಬಹುದು., ಲೇಡಿಗೋಷನ್ ಸರಕಾರಿ ಆಸ್ಪತ್ರೆಗೆ ಅರ್ಜಿ ಸಲ್ಲಿಸಿದ 3 ರಿಂದ 30 ದಿನಗಳ ಒಳಗಾಗಿ ಪ್ರಮಾಣ ಪತ್ರವು ಮುದ್ರಣ ಗೊಂಡು ನಂತರ ಅದನ್ನು 2 ರಿಂದ 5 ದಿನಗಳ ಒಳಗಾಗಿ ಸ್ಪೀಡ್ ಪೆÇೀಸ್ಟ್ ಮೂಲಕ ಅರ್ಜಿದಾರರ ಮನೆ ಬಾಗಿಲಿಗೆ ತಲುಪಿಸಲಾಗುವುದು., ರವಾನೆಯಿಂದ ಬಟವಾಡೆವರೆಗೆ ವಿವಿಧ ಹಂತಗಳಲ್ಲಿ ಅರ್ಜಿದಾರರಿಗೆ ಮೊಬೈಲ್ ಸಂದೇಶದ ಮೂಲಕ ಮಾಹಿತಿ ನೀಡಲಾಗುವುದು., ಈ ಸೇವೆಯನ್ನು ಪಡೆಯಲು, ಸಲ್ಲಿಸಬೇಕಾದ ಅರ್ಜಿಯು ಲೇಡಿಗೋಷನ್ ಸರಕಾರಿ ಆಸ್ಪತ್ರೆ ಕೌಂಟರಿನಲ್ಲಿ ಲಭ್ಯವಿದ್ದು, ಉಚಿತವಾಗಿರುತ್ತದೆ., ಈ ಸೇವೆಯನ್ನು ಪಡೆಯಲು ಲೇಡಿಗೋಷನ್ ಸರಕಾರಿ ಆಸ್ಪತ್ರೆಯ ಕೌಂಟರಿನಲ್ಲಿ ಯಾವುದೇ ಶುಲ್ಕ ಭರಿಸಬೇಕಾಗಿಲ್ಲ., ಸ್ಪೀಡ್ ಪೆÇೀಸ್ಟ್ ವಿತರಣೆಯ ಸಂದರ್ಭದಲ್ಲಿ, ಪೆÇೀಸ್ಟ್ ಮ್ಯಾನ್ ಮೂಲಕ ರೂ. 100/- ನಿಗದಿತ ಶುಲ್ಕವನ್ನು ಅಂಚೆ ಕಚೇರಿಗೆ ಪಾವತಿಸಬೇಕು.

  • Blogger Comments
  • Facebook Comments

0 comments:

Post a Comment

Item Reviewed: ಜನನ ಪ್ರಮಾಣ ಪತ್ರ ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಾಲನೆ Rating: 5 Reviewed By: karavali Times
Scroll to Top