ಸಾವಿಗೆ ಸಚಿವ ಈಶ್ವರಪ್ಪ ಕಾರಣ ಎಂದು ಸಂದೇಶ ರವಾನಿಸಿ ಆತ್ಮಹತ್ಯೆಗೈದ ಗುತ್ತಿಗೆದಾರ ಸಂತೋಷ್ ಪಾಟೀಲ್ - Karavali Times ಸಾವಿಗೆ ಸಚಿವ ಈಶ್ವರಪ್ಪ ಕಾರಣ ಎಂದು ಸಂದೇಶ ರವಾನಿಸಿ ಆತ್ಮಹತ್ಯೆಗೈದ ಗುತ್ತಿಗೆದಾರ ಸಂತೋಷ್ ಪಾಟೀಲ್ - Karavali Times

728x90

12 April 2022

ಸಾವಿಗೆ ಸಚಿವ ಈಶ್ವರಪ್ಪ ಕಾರಣ ಎಂದು ಸಂದೇಶ ರವಾನಿಸಿ ಆತ್ಮಹತ್ಯೆಗೈದ ಗುತ್ತಿಗೆದಾರ ಸಂತೋಷ್ ಪಾಟೀಲ್

 ಉಡುಪಿ, ಎಪ್ರಿಲ್ 12, 2022 (ಕರಾವಳಿ ಟೈಮ್ಸ್) : ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ದ ಶೇಕಡಾ 40ರಷ್ಟು ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಸುದ್ದಿಯಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಮೃತದೇಹ ಮಂಗಳವಾರ ಉಡುಪಿ ಹೋಟೆಲಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. 

ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಮಂಗಳವಾರ ಆತ್ಮಹತ್ಯೆಗೆ ಶರಣಾಗಿರುವ ಸ್ಥಿತಿಯಲ್ಲಿ ಅವರ ಮೃತದೇಹ ದೊರೆತಿದ್ದು, ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರೇ ಕಾರಣ ಎಂದು ವಾಟ್ಸಾಪ್ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಸಾವಿಗೆ ಮುನ್ನ ಈ ಸಂದೇಶವನ್ನು ಮಾಧ್ಯಮಗಳಿಗೂ ರವಾನಿಸಿದ್ದು, ನನ್ನ ಪತ್ನಿ ಮಕ್ಕಳಿಗೆ ಸಹಾಯ ಮಾಡಿ ಎಂದು ಪ್ರಧಾನಿ ಮೋದಿ ಹಾಗೂ ಬಿ ಎಸ್ ಯಡಿಯೂರಪ್ಪನವರಿಗೆ ಮನವಿ ಮಾಡಿಕೊಂಡಿದ್ದಾರೆ. 

ನನ್ನ ಜೊತೆ ಬಂದಿರುವ ಇಬ್ಬರು ಸ್ನೇಹಿತರು ನನ್ನ ಸಾವಿಗೆ ಕಾರಣವಲ್ಲ, ನನ್ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪ ಕಾರಣ. ಸಚಿವರ ವಿರುದ್ಧ ಶಿಕ್ಷೆಯಾಗಬೇಕು, ನನ್ನೆಲ್ಲಾ ಆಸೆ ಬದಿಗೊತ್ತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ ಮಕ್ಕಳಿಗೆ ಪ್ರಧಾನಿಗಳು, ಮುಖ್ಯಮಂತ್ರಿಗಳು, ಬಿ.ಎಸ್. ಯಡಿಯೂರಪ್ಪ ಸಹಾಯ ಮಾಡಬೇಕೆಂದು ಎಂದು ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಕೆಲ ದಿನಗಳ ಹಿಂದೆ ಸಂತೋಷ್ ಪಾಟೀಲ್ ಮನೆಯಿಂದ ಕಾಣೆಯಾಗಿದ್ದರು. ಗೆಳೆಯರನ್ನು ಪ್ರವಾಸ ಹೋಗೋಣ ಎಂದು ಕರೆದುಕೊಂಡು ಬಂದಿದ್ದೇನೆ, ನನ್ನ ಸಾವಿಗೂ ಗೆಳಯರಿಗೂ ಸಂಬಂಧವಿಲ್ಲ. ಸಚಿವ ಈಶ್ವರಪ್ಪನವರೇ ನೇರ ಕಾರಣ ಎಂದು ಮಾಧ್ಯಮಗಳಿಗೆ ಕಳುಹಿಸಿರುವ ವಾಟ್ಸಾಪ್ ಸಂದೇಶದಲ್ಲಿ ತಿಳಿಸಿದ್ದಾರೆ. 

ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಬೆಳಗಾವಿ ತಾಲೂಕಿನ ಬಡಸ ಗ್ರಾಮದ ನಿವಾಸಿ. ಬಡಸ ಗ್ರಾಮ ಬಿಟ್ಟು ಬೆಳಗಾವಿ ನಗರಕ್ಕೆ ಬಂದು ನೆಲೆಸಿದ್ದರು. ಮೂರು ವರ್ಷದ ಹಿಂದೆ ಮದುವೆಯಾಗಿದ್ದರು. ಒಂದೂವರೆ

ವರ್ಷದ ಮಗು ಇದೆ.

ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಶಾಂಭವಿ ಲಾಡ್ಜ್‍ಗೆ ಎಸ್ಪಿ ಹಾಗೂ ಎಎಸ್ಪಿ ಭೇಟಿ ನೀಡಿದ್ದಾರೆ. ಮಂಗಳೂರಿನಿಂದ ವಿಧಿ ವಿಜ್ಞಾನ ತಂಡ ಆಗಮಿಸಲಿದೆ. 

ಈ ಬಗ್ಗೆ ಪ್ರತಿಕ್ರಯಿಸಿರುವ ಸಚಿವ ಈಶ್ವರಪ್ಪ ಅವರು, ಸಂತೋಷ್ ಪಾಟೀಲ್ ಏಕೆ ಆತ್ಮಹತ್ಯೆ ಮಾಡಿಕೊಂಡರು ಎಂದು ನನಗೆ ಗೊತ್ತಿಲ್ಲ, ನನ್ನ ಮೇಲೆ ಆರೋಪ ಮಾಡಿದ್ದು ನಿಜ, ಆದರೆ ಏಕೆ ಆರೋಪ ಮಾಡಿದ್ದಾರೆ ಗೊತ್ತಿಲ್ಲ, ಕೇಳೋಣವೆಂದರೆ ಅವರೇ ಇಲ್ಲವಲ್ಲ, ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಮಾಧ್ಯಮಗಳಿಂದಲೇ ಗೊತ್ತಾಗಿರುವುದು ಎಂದಿದ್ದಾರೆ. 

ನನ್ನ ವಿರುದ್ಧ ಪರ್ಸೆಂಟೆಜ್ ಆರೋಪ ಮಾಡಿದ್ದು ಹೌದು, ಅದಕ್ಕೆ ಸಂಬಂಧಪಟ್ಟಂತೆ ಕೇಸು ಕೂಡ ದಾಖಲಾಗಿತ್ತು. ಆದರೆ ಇಂದು ಅವರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ನನಗೇನೂ ಗೊತ್ತಿಲ್ಲ ಎಂದಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಸಾವಿಗೆ ಸಚಿವ ಈಶ್ವರಪ್ಪ ಕಾರಣ ಎಂದು ಸಂದೇಶ ರವಾನಿಸಿ ಆತ್ಮಹತ್ಯೆಗೈದ ಗುತ್ತಿಗೆದಾರ ಸಂತೋಷ್ ಪಾಟೀಲ್ Rating: 5 Reviewed By: karavali Times
Scroll to Top