ಮೇ 19 ರಂದು ಎಸ್ಸೆಸ್ಸೆಲ್ಸಿ ರಿಸಲ್ಟ್ : ದಿನಾಂಕ ಘೋಷಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ - Karavali Times ಮೇ 19 ರಂದು ಎಸ್ಸೆಸ್ಸೆಲ್ಸಿ ರಿಸಲ್ಟ್ : ದಿನಾಂಕ ಘೋಷಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ - Karavali Times

728x90

12 May 2022

ಮೇ 19 ರಂದು ಎಸ್ಸೆಸ್ಸೆಲ್ಸಿ ರಿಸಲ್ಟ್ : ದಿನಾಂಕ ಘೋಷಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಬೆಂಗಳೂರು, ಮೇ 13, 2022 (ಕರಾವಳಿ ಟೈಮ್ಸ್) : ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಮೇ 19ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್  ಪ್ರಕಟಿಸಿದ್ದಾರೆ. 

ಮಡಿಕೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದ ಬಗ್ಗೆ ಅವರು ದಿನಾಂಕ ಘೋಷಿಸಿದ್ದಾರೆ. ಮೇ 15 ರಂದು ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಈ ಹಿಂದೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿತ್ತು. ಶಿಕ್ಷಣ ಸಚಿವರೂ ಕೂಡಾ ಮೇ ಮೂರನೇ ವಾರದಲ್ಲಿ ಫಲಿತಾಂಶ ಎಂದಷ್ಟೆ ಹೇಳಿದ್ದರು. ಇದೀಗ ಸಚಿವರು ಫಲಿತಾಂಶ ಪ್ರಕಟಿಸುವ ದಿನಾಂಕ ಪ್ರಕಟಿಸಿದ್ದಾರೆ. ಸಾಲು ಸಾಲು ರಜೆಗಳು ಬಂದ ಕಾರಣ, ಮೌಲ್ಯಮಾಪನ ಕೊಂಚ ವಿಳಂಭವಾಗಿರುವ ಹಿನ್ನಲೆಯಲ್ಲಿ ಫಲಿತಾಂಶ ಕೂಡಾ ಕೊಂಚ ತಡವಾಗುತ್ತಿದೆ. ಮೇ ಮೊದಲ ಅಥವಾ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಬಗ್ಗೆ ನಿರ್ಧಾರ ಮಾಡಲಾಗಿತ್ತು.

ಇದೀಗ ಮೌಲ್ಯ ಮಾಪನ ಪ್ರಕ್ರಿಯೆ ಮುಗಿದಿದ್ದು, ಮೌಲ್ಯ ಮಾಪನದಲ್ಲಿ ಸಣ್ಣಪುಟ್ಟ ಕೆಲವು ದೋಷಗಳಿದ್ದಲ್ಲಿ ಅವುಗಳನ್ನು ಸರಿಪಡಿಸುವ ಕಾರ್ಯ ನಡೆಸಲಾಗುತ್ತಿದೆ. ಮೌಲ್ಯಮಾಪನ ಕಾರ್ಯ ಪೂರ್ಣಗೊಂಡ ನಂತರ ಅಂಕಗಳ ದಾಖಲೀಕರಣ ಪೂರ್ಣಗೊಳಿಸಿ ಮೇ 19 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. 

ಈ ಬಾರಿ ಮಾರ್ಚ್ 28 ರಿಂದ ಎಪ್ರಿಲ್ 11 ರವರಗೆ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 15,387 ಶಾಲೆಗಳಿಂದ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು, 4 ಮಂದಿ ತೃತೀಯ ಲಿಂಗಿ ವಿದ್ಯಾರ್ಥಿಗಳು ಹಾಗೂ 5,0307 ಮಂದಿ ವಿಭಿನ್ನ ಸಾಮರ್ಥ್ಯವುಳ್ಳ ಸಹಿತ 8,73,884 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಮೇ 19 ರಂದು ಎಸ್ಸೆಸ್ಸೆಲ್ಸಿ ರಿಸಲ್ಟ್ : ದಿನಾಂಕ ಘೋಷಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ Rating: 5 Reviewed By: karavali Times
Scroll to Top