ಮೇ 19 ಗುರುವಾರ ಮಧ್ಯಾಹ್ನ 12.30ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಮಧ್ಯಾಹ್ನ 1 ಗಂಟೆ ಬಳಿಕ ವೆಬ್ ಸೈಟ್, ಶಾಲೆಗಳಲ್ಲಿ ರಿಸಲ್ಟ್ ಲಭ್ಯ : ಸಚಿವ ನಾಗೇಶ್ - Karavali Times ಮೇ 19 ಗುರುವಾರ ಮಧ್ಯಾಹ್ನ 12.30ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಮಧ್ಯಾಹ್ನ 1 ಗಂಟೆ ಬಳಿಕ ವೆಬ್ ಸೈಟ್, ಶಾಲೆಗಳಲ್ಲಿ ರಿಸಲ್ಟ್ ಲಭ್ಯ : ಸಚಿವ ನಾಗೇಶ್ - Karavali Times

728x90

18 May 2022

ಮೇ 19 ಗುರುವಾರ ಮಧ್ಯಾಹ್ನ 12.30ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಮಧ್ಯಾಹ್ನ 1 ಗಂಟೆ ಬಳಿಕ ವೆಬ್ ಸೈಟ್, ಶಾಲೆಗಳಲ್ಲಿ ರಿಸಲ್ಟ್ ಲಭ್ಯ : ಸಚಿವ ನಾಗೇಶ್

ಬೆಂಗಳೂರು, ಮೇ 18, 2022 (ಕರಾವಳಿ ಟೈಮ್ಸ್) : ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಮೇ 19 ರಂದು ಗುರುವಾರ (ನಾಳೆ) ಮಧ್ಯಾಹ್ನ 12.30ಕ್ಕೆ ಪ್ರಕಟಿಸಲಾಗುವುದು ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖಾ ಸಚಿವ ಬಿ ಸಿ ನಾಗೇಶ್ ಪ್ರಕಟಿಸಿದ್ದಾರೆ. 

 ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಗುರುವಾರ ಮಧ್ಯಾಹ್ನ 12.30ಕ್ಕೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‍ಸೈಟ್‍ನಲ್ಲಿ, ಬಳಿಕ ಶಾಲೆಗಳಲ್ಲಿ ಫಲಿತಾಂಶ ಲಭ್ಯ. ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ karresults.nic.in ಗೆ ಭೇಟಿ ನೀಡಬಹುದು ಎಂದಿದ್ದಾರೆ. 

 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್ ಗಳಿಗೂ ಎಸ್ ಎಂ ಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ. ಎಂದು ಸಚಿವರು ತಿಳಿಸಿದ್ದಾರೆ. 

 ಮಾರ್ಚ್ 28 ರಿಂದ ಎಪ್ರಿಲ್ 11 ರವರಗೆ 2022 ನೇ ಸಾಲಿನ ಎಸ್‍ಎಸ್‍ಎಲ್‌ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ರಾಜ್ಯದಲ್ಲಿ ಎಸ್‍ಎಸ್‍ಎಲ್‍ಸಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು. ಅಲ್ಲದೆ ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಮೇ 19 ಗುರುವಾರ ಮಧ್ಯಾಹ್ನ 12.30ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಮಧ್ಯಾಹ್ನ 1 ಗಂಟೆ ಬಳಿಕ ವೆಬ್ ಸೈಟ್, ಶಾಲೆಗಳಲ್ಲಿ ರಿಸಲ್ಟ್ ಲಭ್ಯ : ಸಚಿವ ನಾಗೇಶ್ Rating: 5 Reviewed By: karavali Times
Scroll to Top