ನವೆಂಬರ್ 19 ರಂದು ಪೆರಾಜೆ ಗ್ರಾಮದಲ್ಲಿ ಬಂಟ್ವಾಳ ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ - Karavali Times ನವೆಂಬರ್ 19 ರಂದು ಪೆರಾಜೆ ಗ್ರಾಮದಲ್ಲಿ ಬಂಟ್ವಾಳ ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ - Karavali Times

728x90

16 November 2022

ನವೆಂಬರ್ 19 ರಂದು ಪೆರಾಜೆ ಗ್ರಾಮದಲ್ಲಿ ಬಂಟ್ವಾಳ ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ

ಬಂಟ್ವಾಳ, ನವೆಂಬರ್ 16, 2022 (ಕರಾವಳಿ ಟೈಮ್ಸ್) : ತಾಲೂಕಿನ ಪೆರಾಜೆ ಗ್ರಾಮದಲ್ಲಿ ಬಂಟ್ವಾಳ ತಾಲೂಕು ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನವೆಂಬರ್ 19 ರಂದು ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. 

ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಎಲ್ಲಾ ಇಲಾಖಾಧಿಕಾರಿಗಳು ಉಪಸ್ಥಿತರಿರಲಿದ್ದು, ಕಂದಾಯ ಇಲಾಖೆ ಸಹಿತ ವಿವಿಧ ಇಲಾಖೆಗಳ ಸವಲತ್ತುಗಳ ವಿತರಣೆ ಹಾಗೂ ಇಲಾಖಾ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚಿಸುವ ಅವಕಾಶ ಗ್ರಾಮಸ್ಥರಿಗೆ ದೊರೆಯಲಿದೆ. 

ಪೆರಾಜೆ ಗ್ರಾಮದ ಸಾರ್ವಜನಿಕರ ಯಾವುದೇ ಅಹವಾಲುಗಳಿದ್ದಲ್ಲಿ ನವೆಂಬರ್ 18ರೊಳಗೆ ಗ್ರಾ ಪಂ ದೂರು ಪೆಟ್ಟಿಗೆ, ಗ್ರಾಮ ಲೆಕ್ಕಿಗರು ಅಥವಾ ತಾಲೂಕು ಕಚೇರಿಗೆ ಖುದ್ದಾಗಿ ಸಲ್ಲಿಸಬಹುದು. ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗಪಡೆದುಕೊಳ್ಳುವಂತೆ ತಾಲೂಕು ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ.

  • Blogger Comments
  • Facebook Comments

0 comments:

Post a Comment

Item Reviewed: ನವೆಂಬರ್ 19 ರಂದು ಪೆರಾಜೆ ಗ್ರಾಮದಲ್ಲಿ ಬಂಟ್ವಾಳ ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ Rating: 5 Reviewed By: karavali Times
Scroll to Top