ಸುಳ್ಯ : ಪೊಲೀಸ್ ಅಧಿಕಾರಿ-ಸಿಬ್ಬಂದಿಗಳಿಗೆ ದೊಂಬಿ ನಿಗ್ರಹ ಕವಾಯತು ತರಬೇತಿ - Karavali Times ಸುಳ್ಯ : ಪೊಲೀಸ್ ಅಧಿಕಾರಿ-ಸಿಬ್ಬಂದಿಗಳಿಗೆ ದೊಂಬಿ ನಿಗ್ರಹ ಕವಾಯತು ತರಬೇತಿ - Karavali Times

728x90

25 February 2023

ಸುಳ್ಯ : ಪೊಲೀಸ್ ಅಧಿಕಾರಿ-ಸಿಬ್ಬಂದಿಗಳಿಗೆ ದೊಂಬಿ ನಿಗ್ರಹ ಕವಾಯತು ತರಬೇತಿ

ಸುಳ್ಯ, ಫೆಬ್ರವರಿ 25, 2023 (ಕರಾವಳಿ ಟೈಮ್ಸ್) : ಸುಳ್ಯ ಪೊಲೀಸ್ ವೃತ್ತ ವ್ಯಾಪ್ತಿಯ ಬೆಳ್ಳಾರೆ,  ಸುಬ್ರಮಣ್ಯ ಪೆÇಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಗಳಿಗೆ ಆಂಟಿ ರಯೋಟ್ ಡ್ರಿಲ್ (ದೊಂಬಿ ನಿಗ್ರಹ ಕವಾಯತು) ತರಭೇತಿಯನ್ನು ಶನಿವಾರ ನೀಡಲಾಯಿತು.

ಈ ಮೂಲಕ ಪೆÇಲೀಸ್ ಅಧಿಕಾರಿ ಸಿಬ್ಬಂದಿಗಳು ತುರ್ತು ಸಂದರ್ಭಗಳಲ್ಲಿ ಯಾವ ರೀತಿ ಸ್ಪಂದಿಸಬೇಕು, ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾದಾಗ ಯಾವ ರೀತಿ ರಕ್ಷಣಾತ್ಮಕವಾಗಿ ಪ್ರತಿಕ್ರಿಯಿಸಿ ಎದುರಿಸಬೇಕು ಎಂಬುದರ ಬಗ್ಗೆ ಪ್ರಾಯೋಗಿಕವಾಗಿ ತಿಳಿಸಲಾಯಿತು.

ಇಂತಹ ತರಭೇತಿಗಳಿಂದ ಪೆÇಲೀಸ್ ಅಧಿಕಾರಿ, ಸಿಬ್ಬಂದಿಗಳು ವೃತ್ತಿ ಕೌಶಲ್ಯ, ಜ್ಞಾನ, ಮಾನಸಿಕ ಸ್ಥೈರ್ಯ, ಆತ್ಮ ವಿಶ್ವಾಸಗಳನ್ನು ಹೆಚ್ಚಿಸಿಕೊಂಡು ವೃತ್ತಿಪರತೆಯಿಂದ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ.

ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲ ಪೆÇಲೀಸ್ ವೃತ್ತ ಹಾಗೂ ಪೆÇಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇಂತಹ ತರಭೇತಿಗಳನ್ನು ನೀಡಲಾಗುವುದು ಎಂದು ಜಿಲ್ಲಾ ಎಸ್ಪಿ ಕಚೇರಿಯ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಸುಳ್ಯ : ಪೊಲೀಸ್ ಅಧಿಕಾರಿ-ಸಿಬ್ಬಂದಿಗಳಿಗೆ ದೊಂಬಿ ನಿಗ್ರಹ ಕವಾಯತು ತರಬೇತಿ Rating: 5 Reviewed By: karavali Times
Scroll to Top