ಫೆಬ್ರವರಿ 20 ರಂದು ಕರ್ಪೆ ಗ್ರಾಮದಲ್ಲಿ ಬಂಟ್ವಾಳ ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ - Karavali Times ಫೆಬ್ರವರಿ 20 ರಂದು ಕರ್ಪೆ ಗ್ರಾಮದಲ್ಲಿ ಬಂಟ್ವಾಳ ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ - Karavali Times

728x90

18 February 2023

ಫೆಬ್ರವರಿ 20 ರಂದು ಕರ್ಪೆ ಗ್ರಾಮದಲ್ಲಿ ಬಂಟ್ವಾಳ ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ

ಬಂಟ್ವಾಳ, ಫೆಬ್ರವರಿ 18, 2023 (ಕರಾವಳಿ ಟೈಮ್ಸ್) : ತಾಲೂಕಿನ ಕರ್ಪೆ ಗ್ರಾಮದಲ್ಲಿ ಬಂಟ್ವಾಳ ತಹಶೀಲ್ದಾರ್ ಅವರ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಫೆಬ್ರವರಿ 20 ರಂದು ಸೋಮವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಕರ್ಪೆ ಗ್ರಾಮದ ಸಮಾಜ ಮಂದಿರದಲ್ಲಿ ನಡೆಯಲಿದೆ. 

ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಇಲಾಖಾಧಿಕಾರಿಗಳು ಉಪಸ್ಥಿತರಿರಲಿದ್ದು, ಕಂದಾಯ ಇಲಾಖೆ ಸಹಿತ ವಿವಿಧ ಇಲಾಖೆಗಳ ಸವಲತ್ತುಗಳ ವಿತರಣೆ ಹಾಗೂ ಇಲಾಖಾ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚಿಸುವ ಅವಕಾಶ ಗ್ರಾಮಸ್ಥರಿಗೆ ದೊರೆಯಲಿದೆ. 

ಕರ್ಪೆ ಗ್ರಾಮದ ಸಾರ್ವಜನಿಕರ ಯಾವುದೇ ಅಹವಾಲುಗಳಿದ್ದಲ್ಲಿ ಗ್ರಾ ಪಂ ದೂರು ಪೆಟ್ಟಿಗೆ, ಗ್ರಾಮ ಲೆಕ್ಕಿಗರು ಅಥವಾ ತಾಲೂಕು ಕಚೇರಿಗೆ ಖುದ್ದಾಗಿ ಸಲ್ಲಿಸಬಹುದು. ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗಪಡೆದುಕೊಳ್ಳುವಂತೆ ತಾಲೂಕು ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ.

  • Blogger Comments
  • Facebook Comments

0 comments:

Post a Comment

Item Reviewed: ಫೆಬ್ರವರಿ 20 ರಂದು ಕರ್ಪೆ ಗ್ರಾಮದಲ್ಲಿ ಬಂಟ್ವಾಳ ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ Rating: 5 Reviewed By: karavali Times
Scroll to Top