ಮಾರ್ಚ್ 18 ರಂದು ಪಿಲಾತಬೆಟ್ಟು ಗ್ರಾಮದ ಪೂಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಬಂಟ್ವಾಳ ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ - Karavali Times ಮಾರ್ಚ್ 18 ರಂದು ಪಿಲಾತಬೆಟ್ಟು ಗ್ರಾಮದ ಪೂಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಬಂಟ್ವಾಳ ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ - Karavali Times

728x90

14 March 2023

ಮಾರ್ಚ್ 18 ರಂದು ಪಿಲಾತಬೆಟ್ಟು ಗ್ರಾಮದ ಪೂಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಬಂಟ್ವಾಳ ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ

ಬಂಟ್ವಾಳ, ಮಾರ್ಚ್ 14, 2023 (ಕರಾವಳಿ ಟೈಮ್ಸ್) : ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ಬಂಟ್ವಾಳ ತಹಶೀಲ್ದಾರ್ ಅವರ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮಾರ್ಚ್ 18 ರಂದು ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಪಿಲಾತಬೆಟ್ಟು ಗ್ರಾಮದ ಪೂಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಲಿದೆ. 

ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಇಲಾಖಾಧಿಕಾರಿಗಳು ಉಪಸ್ಥಿತರಿರಲಿದ್ದು, ಕಂದಾಯ ಇಲಾಖೆ ಸಹಿತ ವಿವಿಧ ಇಲಾಖೆಗಳ ಸವಲತ್ತುಗಳ ವಿತರಣೆ ಹಾಗೂ ಇಲಾಖಾ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚಿಸುವ ಅವಕಾಶ ಗ್ರಾಮಸ್ಥರಿಗೆ ದೊರೆಯಲಿದೆ. 

ಕರ್ಪೆ ಗ್ರಾಮದ ಸಾರ್ವಜನಿಕರ ಯಾವುದೇ ಅಹವಾಲುಗಳಿದ್ದಲ್ಲಿ ಗ್ರಾ ಪಂ ದೂರು ಪೆಟ್ಟಿಗೆ, ಗ್ರಾಮ ಲೆಕ್ಕಿಗರು ಅಥವಾ ತಾಲೂಕು ಕಚೇರಿಗೆ ಖುದ್ದಾಗಿ ಸಲ್ಲಿಸಬಹುದು. ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗಪಡೆದುಕೊಳ್ಳುವಂತೆ ತಾಲೂಕು ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ.

  • Blogger Comments
  • Facebook Comments

0 comments:

Post a Comment

Item Reviewed: ಮಾರ್ಚ್ 18 ರಂದು ಪಿಲಾತಬೆಟ್ಟು ಗ್ರಾಮದ ಪೂಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಬಂಟ್ವಾಳ ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ Rating: 5 Reviewed By: karavali Times
Scroll to Top