ಬಂಟ್ವಾಳ : ತಾಲೂಕು ಮಟ್ಟದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ - Karavali Times ಬಂಟ್ವಾಳ : ತಾಲೂಕು ಮಟ್ಟದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ - Karavali Times

728x90

5 March 2023

ಬಂಟ್ವಾಳ : ತಾಲೂಕು ಮಟ್ಟದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ

ಬಂಟ್ವಾಳ, ಮಾರ್ಚ್ 05, 2023 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಬಂಟ್ವಾಳ ತಾಲೂಕು ಮಟ್ಟದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆಯು ಬಿ ಸಿ ರೋಡು ಮಿನಿ ವಿಧಾನಸೌಧ ಸಭಾಂಗಣದಲ್ಲಿ ಭಾನುವಾರ (ಮಾ 5) ನಡೆಯಿತು. 

ಚುನಾವಣೆ ಶಾಖೆಯ ವಿಷಯ ನಿರ್ವಾಹಕ ನಾರಾಯಣ ಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಆಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಸ್ವಾಗತಿಸಿ ವಂದಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ತಾಲೂಕು ಮಟ್ಟದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ Rating: 5 Reviewed By: karavali Times
Scroll to Top