ಮಳೆ ಅನಾಹುತಕ್ಕೆ ಬಲಿಯಾದ ಯುವತಿಯ ಕುಟುಂಬಸ್ಥರನ್ನು ಭೇಟಿಯಾದ ಸಿಎಂ ಸಿದ್ದು : ಮೃತಳ ಕುಟುಂಬಕ್ಕೆ 5 ಲಕ್ಷ ಪರಿಹಾರ ಹಾಗೂ ಅಸ್ವಸ್ಥಗೊಂಡವರ ಚಿಕಿತ್ಸಾ ವೆಚ್ಚ ಭರಿಸುವ ಭರವಸೆ - Karavali Times ಮಳೆ ಅನಾಹುತಕ್ಕೆ ಬಲಿಯಾದ ಯುವತಿಯ ಕುಟುಂಬಸ್ಥರನ್ನು ಭೇಟಿಯಾದ ಸಿಎಂ ಸಿದ್ದು : ಮೃತಳ ಕುಟುಂಬಕ್ಕೆ 5 ಲಕ್ಷ ಪರಿಹಾರ ಹಾಗೂ ಅಸ್ವಸ್ಥಗೊಂಡವರ ಚಿಕಿತ್ಸಾ ವೆಚ್ಚ ಭರಿಸುವ ಭರವಸೆ - Karavali Times

728x90

22 May 2023

ಮಳೆ ಅನಾಹುತಕ್ಕೆ ಬಲಿಯಾದ ಯುವತಿಯ ಕುಟುಂಬಸ್ಥರನ್ನು ಭೇಟಿಯಾದ ಸಿಎಂ ಸಿದ್ದು : ಮೃತಳ ಕುಟುಂಬಕ್ಕೆ 5 ಲಕ್ಷ ಪರಿಹಾರ ಹಾಗೂ ಅಸ್ವಸ್ಥಗೊಂಡವರ ಚಿಕಿತ್ಸಾ ವೆಚ್ಚ ಭರಿಸುವ ಭರವಸೆ

ಬೆಂಗಳೂರು, ಮೇ 22, 2023 (ಕರಾವಳಿ ಟೈಮ್ಸ್) : ನಗರದ ಕೆ ಆರ್ ವೃತ್ತದ ಅಂಡರ್ ಪಾಸ್ ಬಳಿ ಭಾನುವಾರ (ಮೇ 21) ಮಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ 23 ವರ್ಷದ ಯುವತಿ ಭಾನುರೇಖಾ ಅವರ ಕುಟುಂಬದವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.

ಘಟನೆಯಲ್ಲಿ ಸಾವನ್ನಪ್ಪಿದ ಯುವತಿಯ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಹಾಗೂ ಅಸ್ವಸ್ಥಗೊಂಡಿರುವ ಎಲ್ಲರ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸುವುದಾಗಿ ಸಿಎಂ ತಿಳಿಸಿದರು.

ಅಂಡರ್ ಪಾಸ್ ಗಳಿಂದ ನೀರು ಹೊರಹೋಗುವ ಚರಂಡಿಗಳು ಹೂಳು ತುಂಬಿರುವುದರಿಂದ ಏಕಾಏಕಿ ಮಳೆ ಸುರಿದಾಗ ನೀರು ಸಂಗ್ರಹಗೊಂಡು ಇಂಥ ಅವಘಡಕ್ಕೆ ಕಾರಣವಾಗುತ್ತಿದೆ. ನಗರದಲ್ಲಿ ಮಳೆ £ೀರು ಸಂಗ್ರಹಗೊಳ್ಳುವ ಎಲ್ಲಾ ಅಂಡರ್ ಪಾಸ್ ಗಳನ್ನು ಗುರುತಿಸಿ ಸರಿಪಡಿಸಲಾಗುವುದು ಹಾಗೂ ಕಾಲುವೆ ಒತ್ತುವರಿಯನ್ನು ತೆರವು ಮಾಡಿ ನೀರಿನ ಸರಾಗ ಹರಿವಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಇದೇ ವೇಳೆ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಮಳೆ ಅನಾಹುತಕ್ಕೆ ಬಲಿಯಾದ ಯುವತಿಯ ಕುಟುಂಬಸ್ಥರನ್ನು ಭೇಟಿಯಾದ ಸಿಎಂ ಸಿದ್ದು : ಮೃತಳ ಕುಟುಂಬಕ್ಕೆ 5 ಲಕ್ಷ ಪರಿಹಾರ ಹಾಗೂ ಅಸ್ವಸ್ಥಗೊಂಡವರ ಚಿಕಿತ್ಸಾ ವೆಚ್ಚ ಭರಿಸುವ ಭರವಸೆ Rating: 5 Reviewed By: karavali Times
Scroll to Top